ಬಳ್ಳಾರಿ | ರಾಯನಕೋಟೆ ಶಾಲೆಯಲ್ಲಿ ತಿಲಕ್ ಪುಣ್ಯ ಸ್ಮರಣೆ ಕಾರ್ಯಕ್ರಮ

Date:

‘ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ಪಡೆದೇ ಪಡೆಯುತ್ತೇನೆ’ ಎಂದು ಹೇಳುವ ಮೂಲಕ ಬ್ರಿಟಿಷ್ ವಸಾಹತುಶಾಹಿ ಆಡಳಿತ ವಿರುದ್ಧ ಚಳುವಳಿ ಆರಂಭಿಸಿ ಭಾರತದ ಚಳುವಳಿ ಪಿತಾಮಹರಾದವರು ಬಾಲ ಗಂಗಾಧರ ತಿಲಕರು ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.

ಬಳ್ಳಾರಿ ತಾಲೂಕಿನ ಸಂಜೀವ ರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಿಲಕರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ತಿಲಕರು ಗಣಿತ ಭಾಷೆಯ ಶಿಕ್ಷಕರಾಗಿ, ವಕೀಲರಾಗಿ, ಪತ್ರಕರ್ತರಾಗಿ, ಎಲ್ಲಕ್ಕೂ ಮಿಗಿಲಾಗಿ ಭಾರತ ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ವಿರುದ್ಧ ಹೋರಾಡಿದರು. ಯುವಕರನ್ನು ಒಂದುಗೂಡಿಸಲು ಶಿವಾಜಿ ಉತ್ಸವ ಹಾಗೂ ಗಣೇಶ ಉತ್ಸವಗಳನ್ನು ಆರಂಭಿಸಿದರು” ಎಂದು ತಿಳಿಸಿದರು.

“ಪಂಜಾಬಿನ ಕೇಸರಿ ಲಾಲಾ ಲಜಪತ ರಾಯ್, ಮಹರಾಷ್ಟ್ರದ ಬಾಲ ಗಂಗಾಧರ ತಿಲಕ್ ಹಾಗೂ ಪಶ್ಚಿಮ ಬಂಗಾಳದ ಬಿಪಿನ್ ಚಂದ್ರಪಾಲ್ ಸೇರಿ ಹೋರಾಟದ ಮುಂದಾಳತ್ವ ವಹಿಸಿ ‘ಲಾಲ್ ಬಾಲ್ ಪಾಲ್’ ಎಂದೇ ಹೆಸರಾಗಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಸ್ವತಂತ್ರ ಹೋರಾಟಗಾರರ ಜೀವನ ಚರಿತ್ರೆಯ ಪುಸ್ತಕಗಳನ್ನು ಓದುವ ಅಭ್ಯಾಸ ಮೈಗೂಡಿಸಿ ಕೊಳ್ಳಬೇಕು” ಎಂದು ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಚನ್ನಮ್ಮ, ಬಸವರಾಜ, ದಿಲ್ಷಾದ್ ಬೇಗಂ, ಮೋದಿನ್ ಸಾಬ್,ಸುಮತಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನಾಫೆಡ್ ನಿಯಮಗಳು ಗಾಳಿಗೆ: ಸಂಯುಕ್ತ ಹೋರಾಟ-ಕರ್ನಾಟಕ ಕಿಡಿ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ನಡೆಯುತ್ತಿರುವ ನಾಫೆಡ್ ಕೊಬ್ಬರಿ ಖರೀದಿ...

ಶಿವಮೊಗ್ಗ | ಆದಿಚುಂಚನಗಿರಿ ಮಠಕ್ಕೆ ಗೀತಾ ಶಿವರಾಜ್‌ಕುಮಾರ್ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಬುಧವಾರ...

ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ...