ಬೀದರ್‌ | ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವ ಗುರಿ : ಸಂಸದ ಸಾಗರ್‌ ಖಂಡ್ರೆ

Date:

Advertisements

ಬೀದರ್ ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವುದು ನಮ್ಮ ಗುರಿ ಹಿನ್ನೆಲೆಯಲ್ಲಿ ಮುತುವರ್ಜಿವಹಿಸಿ ಈ ಬಾರಿ 50 ಸಾವಿರ ಮನೆ ಮಂಜೂರು ಮಾಡಿಸಿದ್ದೇನೆ ಎಂದು ಬೀದರ ಲೋಕಸಭಾ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.

ಭಾಲ್ಕಿ ತಾಲ್ಲೂಕಿನ ಲಂಜವಾಡ ಗ್ರಾಮದಲ್ಲಿ ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು ಹಾಗೂ ಬೀದರ್ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ ವತಿಯಿಂದ ಮಂಗಳವಾರ ನಡೆದ ʼಆವಾಸ್ ಪ್ಲಸ್ -2024 ಆಪ್ ಮೂಲಕ ವಸತಿ, ನಿವೇಶನ ರಹಿತರ ಸಮೀಕ್ಷೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ʼಬೀದರ್ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಮನೆಗಳನ್ನು ಒದಗಿಸುವಂತೆ ಕೇಂದ್ರ ವಸತಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದೇನೆ. ‌ಈ ಹಿಂದೆ ಭಾಲ್ಕಿಯನ್ನು ಗುಡಿಸಲು ಮುಕ್ತ ಮಾಡಲು ತಂದೆ ಈಶ್ವರ್ ಖಂಡ್ರೆ ಅವರು 25 ಸಾವಿರ ಮನೆ ಮಂಜೂರು ಮಾಡಿಸಿದ್ದರುʼ ಎಂದರು.

Advertisements

ʼಮಧ್ಯವರ್ತಿಗಳ ಹಾವಳಿ ತಪ್ಪಿಸಿ ವಸತಿ ರಹಿತರಿಗೆ ಮನೆ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಆವಾಸ್ ವಸತಿ ಯೋಜನೆ (ಗ್ರಾಮೀಣ) ಅಡಿಯಲ್ಲಿ ಆವಾಸ್ ಪ್ಲಸ್- 2024 ಆಪ್ ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ಈ ಆಪ್ ಮೂಲಕ ಸಮೀಕ್ಷೆ ನಡೆಸಿ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಮನೆ ಇಲ್ಲದವರು ಈ ಆಪ್‌ನಲ್ಲಿ ತಮ್ಮ ಮಾಹಿತಿ ಒದಗಿಸಬೇಕುʼ ಎಂದರು.

ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ, ʼಸಂಸದ ಸಾಗರ ಖಂಡ್ರೆ ಅವರು ಹೆಚ್ಚು ಇಚ್ಚಾಶಕ್ತಿ ಕಾರಣಕ್ಕೆ ಈ ಬಾರಿ 40 ಸಾವಿರಕ್ಕೂ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಿಸಿದ್ದಾರೆ. ಬಸವ ವಸತಿ ಯೋಜನೆಯಡಿ 758 ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ 1 ಸಾವಿರ ಮನೆಗಳು ಮಂಜೂರಾಗಿವೆ. ಈ ಹಿಂದೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗುತ್ತಿದ್ದವು. ಸರ್ಕಾರ ಈ ಗೊಂದಲಗಳ ನಿವಾರಣೆಗೆ ಆವಾಸ್ ಪ್ಲಸ್ ಆಪ್ ಜಾರಿಗೆ ತಂದಿದೆʼ ಎಂದು ಹೇಳಿದರು.

ʼಈ ಆಪ್‌ ಮೂಲಕ ಸಮೀಕ್ಷೆ ನಡೆಸುವಂತೆ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು, ಅಧಿಕಾರಿಗಳು ಯಾವುದೇ ನ್ಯೂನ್ಯತೆ ಬರದಂತೆ ಸಮೀಕ್ಷೆ ನಡೆಸಬೇಕು. ಇದಕ್ಕೆ ಜನರು ಕೂಡ ಅಧಿಕಾರಿಗಳಿಗೆ ಸಹಕಾರ ನೀಡಬೇಕುʼ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಸವ ವಸತಿ ಯೋಜನೆಯಡಿ ಆಯ್ಕೆಯಾದ 91 ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಣೆ ಹಾಗೂ ಆವಾಸ್ ಪ್ಲಸ್ ಆಪ್- 2024 ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಗುತ್ತಿಗೆ ನೌಕರರಿಗೆ ಅಪಮಾನ; ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹ

ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಿಕಾ ಶುಕ್ರಚಾರ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಹಣಮಂತ ಚೌವ್ಹಾಣ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ಭಾಲ್ಕಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಭಾಲ್ಕಿ ತಹಸೀಲ್ದಾರಿರ್ ಮಲ್ಲಿಕಾರ್ಜುನ ವಡ್ಡನಕೆರಿ, ಭಾಲ್ಕಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಎಂ ಮಲ್ಲಿಕಾರ್ಜುನ, ಭಾಲ್ಕಿ ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಕಾಮರಾಯ ಜಗ್ಗಿನವರ, ಕಾರ್ಮಿಕ ನಿರೀಕ್ಷಕ ಮಂಜುನಾಥ ಹದಗುಂಡಿ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ, ತೋಟಗಾರಿಕೆ ಎಸ್.ಡಿ.ಎಚ್ ಮಾರುತಿ ಸೇರಿದಂತೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X