ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

Date:

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರ ಬಲಿದಾನ ವ್ಯರ್ಥವಾಗದಂತೆ ಪ್ರತಿಯೊಬ್ಬರೂ ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಸ್ವಾಭಿಮಾನಿ ಗೆಳೆಯರ ಬಳಗದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಡಶೆಟ್ಟಿ ಹೇಳಿದರು.

- Advertisement -

ಬೀದರ್‌ ತಾಲೂಕಿನ ಗುನ್ನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗತ್‌ಸಿಂಗ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಸ್ವಾಭಿಮಾನಿ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಉಚಿತ ನೋಟಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

“ಪ್ರತಿ ವರ್ಷದಂತೆ ಈ ವರ್ಷವೂ ಬಳಗದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟಬುಕ್‌ಗಳನ್ನು ವಿತರಿಸಲಾಗುತ್ತಿದೆ. ಮಕ್ಕಳಿಗೆ ಶಿಕ್ಷಣದ ಜತೆಗೆ ದೇಶಪ್ರೇಮ, ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಕಾಳಜಿಯನ್ನು ಬೆಳೆಸುವ ಅಗತ್ಯವಿದೆ” ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ನಾಗಮೂರ್ತಿ ಪಂಚಾಳ ಮಾತನಾಡಿ, “ಸ್ವಾಭಿಮಾನಿ ಗೆಳೆಯರ ಬಳಗವು ಪರಿಸರ ಸಂರಕ್ಷಣೆ, ಪ್ರಾಥಮಿಕ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಸಾರ್ಥಕ ಕಾರ್ಯಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಮಾದರಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿ” ಎಂದು ಶ್ಲಾಘಿಸಿದರು.

ವೀಣಾ ಕಟ್ಟಿಮಣಿ ಅವರು ಭಗತ್‌ಸಿಂಗ್ ಅವರ ಜೀವನ, ದೇಶಪ್ರೇಮ ಹಾಗೂ ಸ್ವಾತಂತ್ರ್ಯ ಹೋರಾಟದ ಕುರಿತು ಮಾತನಾಡಿದರು. ನಂತರ ಬಳಗದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟಬುಕ್‌ಗಳನ್ನು ವಿತರಿಸಲಾಯಿತು.

ಇದನ್ನೂ ಓದಿ : ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆತ್ಮಾನಂದ, ಕಾಣಿಕಾ, ಶೌಕತ ಅಲಿ, ಕಲ್ಪನಾ ಹಾಗೂ ಸ್ವಾಭಿಮಾನಿ ಗೆಳೆಯರ ಬಳಗದ ಪ್ರಮುಖರಾದ ನೀಲಕಂಠ ಶೆಟಕಾರ, ಸುರೇಶ ಗುನ್ನಳ್ಳಿ, ವಿನೋದ ಬಿರಾದಾರ, ಬಸವರಾಜ ಸ್ವಾಮಿ, ಸಂಗಮೇಶ ಗುಡುರೆ, ಬಲರಾಮ ಕುಲಕರ್ಣಿ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...