ಬೀದರ್‌ | ಮೃತ ಮಹಿಳೆಯರ ನಗ್ನ ಚಿತ್ರ ಸೆರೆಹಿಡಿದು ವಿಕೃತಿ: ಬ್ರಿಮ್ಸ್‌ ಸಿಬ್ಬಂದಿ ಅರೆಸ್ಟ್‌

Date:

ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆ ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಲೇ ಇರುತ್ತದೆ. ಸದ್ಯ ಮನುಕುಲ ತಲೆತಗ್ಗಿಸುವ ಪ್ರಕರಣ ಬೆಳಕಿಗೆ ಬಂದಿದ್ದು, ಆಸ್ಪತ್ರೆಯ ಸಿಬ್ಬಂದಿ ಶವಾಗಾರದಲ್ಲಿರಿಸಿದ ಮಹಿಳೆಯರ ಶವದ ನಗ್ನ ವಿಡಿಯೊ ಮತ್ತು ಫೊಟೊಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ವಿಕೃತ ಕೃತ್ಯ ಬಯಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಕೊಠಡಿಯಲ್ಲಿ ಇರಿಸಲಾಗುವ ಮಹಿಳೆಯರ ಶವವನ್ನು ನಗ್ನವಾಗಿಸಿ ತನ್ನ ಮೊಬೈಲ್‌ ಫೋನ್‌ನಿಂದ ಫೋಟೊ ಮತ್ತು ವಿಡಿಯೊ ಸೆರೆ ಹಿಡಿಯುತ್ತಿದ್ದ ಅಟೆಂಡರ್‌ ಮುನೀರ್‌ ಅಹ್ಮದ್‌ ಸಾಮಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದ . ಆಸ್ಪತ್ರೆಯ ಸಿಬ್ಬಂದಿಗಳಿಗೆ, ಆಡಳಿತಕ್ಕೆ ಈತನ ದುಷ್ಕೃತ್ಯದ ಕುರಿತು ಯಾವ ಸುಳಿವು ಇರಲಿಲ್ಲ, ಪೊಲೀಸರು ಪ್ರಕರಣದ ಕುರಿತು ಬ್ರಿಮ್ಸ್‌ ಆಸ್ಪತ್ರೆಯ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

- Advertisement -
Karnataka Womens Commission 1


ಆರೋಪಿ ಮುನೀರ್‌ ಅಹ್ಮದ್‌ ಹಲವು ವರ್ಷಗಳಿಂದ ಆಸ್ಪತ್ರೆಯ ಶವಾಗಾರ ವಿಭಾಗದಲ್ಲಿ ಅಟೆಂಡರ್‌ ಆಗಿ ಕೆಲಸ ಮಾಡುತ್ತಿದ್ದಾನೆ. ಮಾಹಿತಿಯ ಪ್ರಕಾರ, ಆರೋಪಿಯ ಮೊಬೈಲ್‌ ಫೋನ್‌ ಪರಿಶೀಲಿಸಿದಾಗ ಅಸಂಖ್ಯ ಫೊಟೊ ವಿಡಿಯೊಗಳು ಪತ್ತೆಯಾಗಿದೆ. ಈತ ಇಂತಹ ವಿಕೃತಿಗೆ ಬಿದ್ದು ಹಲವು ವರ್ಷಗಳೇ ಕಳೆದಿರುವ ಗುಮಾನಿಯಿದ್ದು ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಬ್ರಿಮ್ಸ್‌ ಮುಖ್ಯಸ್ಥ ಡಾ. ಮೊಸಿನ್‌ ಉಲ್‌ ಹಕ್‌ ನ್ಯೂಟೌನ್‌ ಪೊಲೀಸ್‌ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಮುನೀರ್‌ ಅಹ್ಮದ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...