ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

Date:

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿಯನ್ನು ಶುಕ್ರವಾರ ಪ್ರಕಟ ಮಾಡಿದೆ. ಆರೇಳು ವರ್ಷದ ಬಳಿಕ ಚುನಾವಣೆ ನಡೆಯುತ್ತಿದ್ದು, ಕ್ಷೇತ್ರ ವ್ಯಾಪ್ತಿ ಹಾಗೂ ಮೀಸಲಾತಿಯಲ್ಲಿ ಹಲವು ಬದಲಾವಣೆಗಳಾಗಿವೆ.

- Advertisement -

ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ನಿಯಮಗಳನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಿಲ್ಲಾ ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಕರಡು ಮೀಸಲಾತಿ ಅಧಿಸೂಚನೆಯನ್ನು ಅಧಿಕೃತವಾಗಿ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಇಲಾಖೆಯು 2023ರ ಸರ್ಕಾರದ ನಿರ್ಧಾರದ ಅನ್ವಯ ಬೀದರ್ ಜಿಲ್ಲಾ ಪಂಚಾಯಿತಿಯ ವಿವಿಧ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ಈ ಅಧಿಸೂಚನೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1006544153
ಜಾಹೀರಾತು

2026ರ ಅಕ್ಟೋಬರ್ 9ರಂದು ಪ್ರಕಟಗೊಂಡಿರುವ ಅಧಿಸೂಚನೆಯ ಪ್ರಕಾರ, ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. 2026ರ ಅಕ್ಟೋಬರ್ 19ರ ಸಂಜೆ 5 ಗಂಟೆಯೊಳಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಬರುವ ಡಿಸೆಂಬರ್-ಜನವರಿ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಖುದ್ದಾಗಿ ಅಥವಾ ಅಂಚೆಯ ಮುಖಾಂತರ ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸವು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಪಂ.ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, 3ನೇ ಹಂತ, 3ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು–560001 ಇಲ್ಲಿಗೆ ಸಲ್ಲಿಸಬಹುದು.

ಒಟ್ಟು 34 ಜಿಲ್ಲಾ ಪಂಚಾಯಿತಿ ಕ್ಷೇತ್ರ

ಬೀದರ್ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 34 ಸ್ಥಾನಗಳಿದ್ದು, ಈ ಪೈಕಿ 17 ಸ್ಥಾನಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿಗೆ 9 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಈ ಪೈಕಿ ಐದು ಮಹಿಳೆಯರಿಗೆ ಮೀಸಲಾಗಿವೆ. ಪರಿಶಿಷ್ಟ ಪಂಗಡಕ್ಕೆ ಒಟ್ಟು 6 ಸ್ಥಾನಗಳು ಮೀಸಲಾಗಿದ್ದು, ಇದರಲ್ಲಿ 3 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಹಿಂದುಳಿದ ವರ್ಗ ‘ಅ’ ಅಡಿ 2 ಸ್ಥಾನ ಮೀಸಲಾಗಿದ್ದು, ಒಂದು ಸ್ಥಾನ ಮಹಿಳೆಗೆ ಮೀಸಲಾಗಿದೆ. ಸಾಮಾನ್ಯ ವರ್ಗದಡಿ 17 ಸ್ಥಾನಗಳಿದ್ದು, ಈ ಪೈಕಿ 8 ಮಹಿಳೆಯರಿಗೆ ಮೀಸಲಿಟ್ಟಿದೆ.

ಜಿಲ್ಲೆಯ ಎಂಟು ತಾಲೂಕು ಪಂಚಾಯತಿಗಳ ಒಟ್ಟು 123 ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಲಾಗಿದ್ದು, ಈ ಪೈಕಿ 63 ಸ್ಥಾನಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಇನ್ನು ಪರಿಶಿಷ್ಟ ಜಾತಿಗೆ ಒಟ್ಟು 32 ಸ್ಥಾನಗಳಿದ್ದು, ಇದರಲ್ಲಿ 18 ಸ್ಥಾನ ಮಹಿಳೆಯರಿಗೆ, ಪರಿಶಿಷ್ಟ ಪಂಗಡಕ್ಕೆ ಒಟ್ಟು 20 ಸ್ಥಾನಗಳಿದ್ದು, ಇದರಲ್ಲಿ 12 ಸ್ಥಾನ ಮಹಿಳೆಯರಿಗೆ, ಹಿಂದುಳಿದ ವರ್ಗ ʼಅʼ ಅಡಿ 7 ಸ್ಥಾನಗಳಿದ್ದು, ಈ ಪೈಕಿ 5 ಸ್ಥಾನ ಮಹಿಳೆಯರಿಗೆ ಇವೆ. ಹಿಂದುಳಿದ ವರ್ಗ ʼಬʼ ಅಡಿ ಒಂದು ಸ್ಥಾನ ಮಹಿಳೆಗೆ ಹಾಗೂ ಸಾಮಾನ್ಯ ವರ್ಗಕ್ಕೆ 63 ಸ್ಥಾನಗಳಿದ್ದು, ಈ ಪೈಕಿ 27 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ.

ಬೀದರ್ ಜಿಲ್ಲಾ ಪಂಚಾಯಿತಿ‌ ಹಾಗೂ ತಾಲ್ಲೂಕು ಪಂಚಾಯಿತಿಗಳ ಕರಡು ಮೀಸಲಾತಿ ಪಟ್ಟಿ ಪಿಡಿಎಫ್‌ ಇಲ್ಲಿದೆ, ಡೌನ್ಲೋಡ್‌ ಮಾಡಿ ಓದಿ

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...