ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

Date:

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ ಕ್ಲಿನಿಕ್‌ಗಳನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ನಕಲಿ ವೈದ್ಯರು, ಕ್ಲಿನಿಕ್‌ಗಳನ್ನು ಕೂಡಲೇ ಬಂದ್ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವಲುಪಡೆ ಆಗ್ರಹಿಸಿದೆ.

- Advertisement -

ಈ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರವೇ ಕಾವಲುಪಡೆಯ ಜಿಲ್ಲಾ ಹಾಗೂ ರಾಜ್ಯ ಘಟಕದ ವತಿಯಿಂದ ಸೋಮವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಸಹಾಯಕ ಆಯುಕ್ತರ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಬಳಿಕ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಜಿಲ್ಲೆಯಲ್ಲಿ ನಕಲಿ ವೈದ್ಯರು ಹಾಗೂ ನಕಲಿ ಕ್ಲಿನಿಕ್‌ಗಳ ಹಾವಳಿ ಹೆಚ್ಚಾಗಿದ್ದು, ಇಂತಹ ಕ್ಲಿನಿಕ್‌ಗಳಿಗೆ ಅನುಮತಿ ನೀಡುವ ಅಥವಾ ನಿರ್ಲಕ್ಷ್ಯ ವಹಿಸುವ ಸಂಬಂಧಪಟ್ಟ ವೈದ್ಯಕೀಯ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಆರೋಗ್ಯ ಕ್ಷೇತ್ರದ ಖಾಸಗೀಕರಣಕ್ಕೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು. ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದಡಿ 2023ರಲ್ಲಿ ಕಾರ್ಯಕ್ರಮಗಳಿಗೆ ಧನಸಹಾಯ ಕೋರಿ ಅರ್ಜಿ ಸಲ್ಲಿಸಿರುವ ಸಂಘ-ಸಂಸ್ಥೆಗಳಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. 2026-27ನೇ ಸಾಲಿನಲ್ಲಿ ಗಡಿಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಹೊಸದಾಗಿ ಅರ್ಜಿ ಆಹ್ವಾನಿಸಬೇಕು. ಗಡಿಭಾಗದ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ₹200 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಶಾಸಕರ ಅನುದಾನದ ಶೇ.5ರಷ್ಟು ಹಣವನ್ನು ಗಡಿಭಾಗದ ಗ್ರಾಮಗಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವ ನೋಂದಾಯಿತ ಸಂಘ-ಸಂಸ್ಥೆಗಳು ಮತ್ತು ಟ್ರಸ್ಟ್‌ಗಳಿಗೆ ನೀಡಬೇಕು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮನವಿ ಮಾಡಿದರು.

2022ರಿಂದ ಲೇಖಕರು ಬರೆದಿರುವ ಕೃತಿಗಳನ್ನು ಖರೀದಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ₹200 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಕೃತಿ ಖರೀದಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. 2025ರಿಂದ ಕಲ್ಯಾಣ ಕರ್ನಾಟಕ ಭಾಗದ ಲೇಖಕರ ಕೃತಿಗಳ ಖರೀದಿಗೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ಪ್ರತಿಭಟನೆಯಲ್ಲಿ ಕರವೇ ಕಾವಲು ಪಡೆ ಜಿಲ್ಲಾಧ್ಯಕ್ಷ ಅವಿನಾಶ ಬುದೇರಕರ್, ರಾಜ್ಯ ಉಪಾಧ್ಯಕ್ಷ ವಿ.ಎಂ. ಭಂಗೂರೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ಪಾಟೀಲ್, ಉಪಾಧ್ಯಕ್ಷೆ ಸಂಗೀತಾ ಸ್ವಾಮಿ, ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷ ಸ್ಟೀಫನ್ ಪೌಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಜೊನಾಥನ್, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ಲಾಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಮಿಯೋದ್ಧೀನ್, ನಗರ ಮಹಿಳಾ ಘಟಕದ ಅಧ್ಯಕ್ಷೆ ಅರುಣಾ ಪೌಲ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ದಿಶಾನ್, ಬೀದರ್ ತಾಲ್ಲೂಕು ಅಧ್ಯಕ್ಷ ಸತೀಶ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಸುರೇಶ, ಉಪಾಧ್ಯಕ್ಷ ಸುನೀಲ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...