ರೇವ್ ಪಾರ್ಟಿಗಾಗಿ ಹಾವಿನ ವಿಷ: ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಎಫ್‌ಐಆರ್

Date:

Advertisements

ರೇವ್ ಪಾರ್ಟಿಗಾಗ ಹಾವಿನ ವಿಷ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಚಿಂತನೆ ಹರಡುತ್ತಿದ್ದ ಯೂಟ್ಯೂಬರ್, ಬಿಗ್ ಬಾಸ್ ಒಟಿಟಿ 2ರ ವಿಜೇತ ಎಲ್ವಿಶ್ ಯಾದವ್ ಮತ್ತು ಆತನ ಐವರು ಸಹಚರರ ವಿರುದ್ಧ ನೋಯ್ಡಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಹಾವು ಮತ್ತು ಅವುಗಳ ವಿಷವನ್ನು ಸರಬರಾಜು ಮಾಡುತ್ತಿದ್ದ ಎಲ್ವಿಶ್ ಯಾದವ್ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿನ ವಿವಿಧ ಫಾರ್ಮ್ ಹೌಸ್‌ಗಳಲ್ಲಿ ಹಾವುಗಳನ್ನು ಬಳಸಿಕೊಂಡು ಈ ರೇವ್ ಪಾರ್ಟಿಗಳನ್ನು ಆಯೋಜಿಸಲಾಗಿತ್ತು ಎಂದು ಐವರು ವ್ಯಕ್ತಿಗಳು ಪೊಲೀಸರಿಗೆ ತಿಳಿಸಿದ್ದಾರೆ.

Advertisements

elivish yadav ott

ಎಲ್ವಿಶ್ ಯಾದವ್ ಅವರು ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ಗಾಗಿ ವಿಡಿಯೊಗಳನ್ನು ಶೂಟ್ ಮಾಡಲು ಹಾವುಗಳನ್ನು ಬಳಸಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಬಂಧನದ ಬಳಿಕ ಅವರ ಬಳಿಯಿಂದ 20 ಮಿಲ್ಲಿ ವಿಷ, ರೇವ್ ಪಾರ್ಟಿಗಳ ಸಮಯದಲ್ಲಿ ಅವರು ಬಳಸಿದ 9 ವಿಷಕಾರಿ ಹಾವುಗಳನ್ನು ವಶಪಡಿಸಿಕೊಳ್ಳಲಾಗಿದೆ. ನೋಯ್ಡಾ ಪೊಲೀಸ್ ಎಫ್‌ಐಆರ್ ಪ್ರಕಾರ, 5 ನಾಗರಹಾವು, 1 ಹೆಬ್ಬಾವು ಮತ್ತು 1 ಎರಡು ತಲೆಯ ಹಾವು, ಒಂದು ಕೇರೆ ಹಾವು ವಶಪಡಿಸಿಕೊಳ್ಳಲಾಗಿದೆ.

ಎಲ್ವಿಶ್ ಯಾದವ್ ವಿರುದ್ಧ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರ ಎನ್‌ಜಿಒ, ಹಾವಿನ ವಿಷ ಬಳಕೆ ಮಾಡಿ ರೇವ್ ಪಾರ್ಟಿ ಮಾಡುತ್ತಿದ್ದ ವಿರುದ್ಧ ದೂರು ದಾಖಲಿಸಿತ್ತು.

ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿಸಲ್ಪಟ್ಟ ಆಗ್ನೇಯ ದೆಹಲಿಯ ಬದರ್‌ಪುರದ ಮೊಹರ್‌ಬಂದ್ ಗ್ರಾಮದ ನಿವಾಸಿಗಳಾದ ರಾಹುಲ್(32), ತೀತುನಾಥ್ (45), ಜೈಕರನ್ (50), ನಾರಾಯಣ್ (50) ಮತ್ತು ರವಿನಾಥ್ (45) ಎಂದು ಗುರುತಿಸಲಾಗಿದೆ ಎಂದು ನೋಯ್ಡಾ ಪೊಲೀಸರು ಮಾಹಿತಿ ನೀಡಿದ್ದಾರೆ.

ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ್ದ ಈ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಎಲ್ವಿಶ್ ಯಾದವ್ ಸೇರಿದಂತೆ ಆರು ಮಂದಿಯ ಹೆಸರುಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರು ಆರೋಪಿಗಳ ಪೈಕಿ ಐವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆದರೆ ಎಲ್ವಿಶ್ ಯಾದವ್ ಅವರನ್ನು ಇನ್ನೂ ಬಂಧಿಸಲಾಗಿಲ್ಲ. ಅವರು ತಲೆಮರೆಸಿಕೊಂಡಿರುವುದಾಗಿ ವರದಿಯಾಗಿದೆ. ವಶಪಡಿಸಿಕೊಳ್ಳಲಾಗಿರುವ ಹಾವು ಹಾಗೂ ಹಾವಿನ ವಿಷವನ್ನು, ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ವಿಶ್ ಯಾದವ್ ಮತ್ತು ಆತನ ಸಹಚರರನ್ನು ಸ್ವಲ್ಪ ನಾಗರಹಾವಿನ ವಿಷವನ್ನು ನೀಡುವಂತೆ ಕೇಳಿ ತಮ್ಮ ಖೆಡ್ಡಾಕ್ಕೆ ಬೀಳಿಸಿದ ಬಗ್ಗೆಯೂ ಕೂಡ ಬಿಜೆಪಿ ಸಂಸದೆ ಮೇನಕಾ ಗಾಂಧಿ ವಿವರಿಸಿದ್ದಾರೆ.

ಎಲ್ವಿಶ್ ಯಾದವ್ ಯೂಟ್ಯೂಬ್‌ನಲ್ಲಿ 7.51 ಮಿಲಿಯನ್ ಚಂದಾದಾರರನ್ನು ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 15.6 ಮಿಲಿಯನ್ ಫಾಲೋವರ್ಸ್‌ ಹೊಂದಿದ್ದು, ಬಲಪಂಥೀಯ ಚಿಂತನೆಗಳನ್ನು ಹಾಗೂ ಬಿಜೆಪಿ ಪರ ಹೆಚ್ಚು ಪ್ರಚಾರ ಮಾಡುತ್ತಿದ್ದರು.

ಎಲ್ವಿಶ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ವಿಡಿಯೋ ಹರಿಯ ಬಿಟ್ಟಿರುವ ಎಲ್ವಿಶ್ ಯಾದವ್, ತನ್ನ ಮೇಲಿನ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿಕೆ ನೀಡಿದ್ದಾನೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಟ್ವೀಟ್ ಮಾಡಿದ್ದು, ಎಲ್ವಿಶ್ ಯಾದವ್ ಅವರು ಹರ್ಯಾಣ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X