ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

Date:

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಬಾಗಲಕೋಟೆ ಜಿಲ್ಲಾ ಹಾಗೂ ಬೀಳಗಿ ತಾಲೂಕು ಘಟಕದ ನೇತೃತ್ವದಲ್ಲಿ ರೈತರು ಬೀಳಗಿ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬೀಳಗಿ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹5,000 ದರ ನೀಡಬೇಕು. ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹1,200 ಎಸ್‌ಎಪಿ (SAP) ಘೋಷಿಸಬೇಕು. ಕೃಷಿ ಉತ್ಪಾದನಾ ವೆಚ್ಚವನ್ನು ಆಧಾರವಾಗಿಟ್ಟುಕೊಂಡು ಕೇಂದ್ರ ಸರ್ಕಾರ ನಿಗದಿಪಡಿಸುವ ಎಫ್‌ಆರ್‌ಪಿ (FRP) ದರವನ್ನು ಪರಿಷ್ಕರಿಸಬೇಕು ಎಂದು ಆಗ್ರಹಿಸಿದರು.

ಕಬ್ಬಿನಿಂದ ಸಕ್ಕರೆಯ ಜತೆಗೆ ಎಥನಾಲ್, ಮೊಲಾಸಿಸ್, ಬಗಾಸ್, ಪ್ರೆಸ್‌ಮಡ್ ಹಾಗೂ ಸಹ-ವಿದ್ಯುತ್ ಸೇರಿದಂತೆ ಹಲವು ಉಪ ಉತ್ಪನ್ನಗಳು ದೊರೆಯುತ್ತವೆ. ಈ ಉಪ ಉತ್ಪನ್ನಗಳಿಂದ ಸೃಷ್ಟಿಯಾಗುವ ಮೌಲ್ಯದಲ್ಲಿ ರೈತರಿಗೆ ನ್ಯಾಯಯುತ ಪಾಲು ದೊರೆಯಬೇಕು. ರಂಗರಾಜನ್ ಸಮಿತಿಯ ಶಿಫಾರಸುಗಳ ಆಶಯದಂತೆ ಉಪ ಉತ್ಪನ್ನಗಳ ಲಾಭದಲ್ಲಿ ಶೇ.70ರಷ್ಟು ಪಾಲು ರೈತರಿಗೆ ದೊರೆಯುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು.

ರೈತರಿಗೆ ತೂಕದಲ್ಲಿ ಮೋಸವಾಗದಂತೆ ಕ್ರಮ

ಭಾರತೀಯ ಕಿಸಾನ ಸಂಘದ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ, ಕಬ್ಬಿನ ತೂಕದಲ್ಲಿ ರೈತರಿಗೆ ಯಾವುದೇ ರೀತಿಯ ಮೋಸವಾಗದಂತೆ ಪ್ರತಿಯೊಂದು ಸಕ್ಕರೆ ಕಾರ್ಖಾನೆ ಎದುರು ಸರ್ಕಾರಿ ತೂಕ ಮಾಪನ ಕೇಂದ್ರಗಳನ್ನು ತಕ್ಷಣ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಪೂರೈಸಿದ 14 ದಿನಗಳೊಳಗೆ ರೈತರಿಗೆ ಬಿಲ್ ಪಾವತಿಸುವುದನ್ನು ಕಡ್ಡಾಯಗೊಳಿಸಬೇಕು. ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಬೇಕು. ಎಫ್‌ಆರ್‌ಪಿ ಹಾಗೂ ಎಸ್‌ಎಪಿ ದರ ನಿಗದಿಪಡಿಸುವ ಸಂದರ್ಭದಲ್ಲಿ ರೈತರ ಪ್ರತಿನಿಧಿಗಳನ್ನು ಒಳಗೊಂಡ ಕಬ್ಬು ಬೆಲೆ ನಿಗದಿ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ರೈತರ ಬೇಡಿಕೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಭಾರತೀಯ ಕಿಸಾನ ಸಂಘದ ನೇತೃತ್ವದಲ್ಲಿ ಮುಂದಿನ ಹಂತದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಭಾರತೀಯ ಕಿಸಾನ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ ಯಡಹಳ್ಳಿ, ಕಬ್ಬು ಬೆಳೆಗಾರರ ಜಿಲ್ಲಾ ಪ್ರಮುಖ ಅಶೋಕ ಮಂತ್ರಿ, ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಪ್ರಧಾನ ಕಾರ್ಯದರ್ಶಿ ಗುರು ಅನಗವಾಡಿ, ಯುವ ಪ್ರಮುಖ ಶಾಂತಯ್ಯ ಪಂಚಕಟ್ಟಿಮಠ, ನಗರ ಅಧ್ಯಕ್ಷ ಸಿದ್ದು ಗಾಣಿಗೇರ, ತಾಲೂಕು ಕಾರ್ಯದರ್ಶಿ ಮಂಜು ಬಾವಿ, ದುಂಡಪ್ಪ ಕೊರ್ತಿ, ಶಿವರಾಜ ಕಾಖಂಡಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...