ಬಿಪೊರ್‌ಜಾಯ್ ಭೀತಿ | ತಾತ್ಕಾಲಿಕ ಶಿಬಿರಗಳಿಗೆ 37,800 ಮಂದಿಯ ಸ್ಥಳಾಂತರ

Date:

ಬಿಪೊರ್‌ಜಾಯ್ ಚಂಡಮಾರುತದ ಭೀತಿಯ ಹಿನ್ನಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬುಧವಾರ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪರಿಶೀಲನಾ ಸಭೆ ನಡೆಸಿದ್ದಾರೆ.

- Advertisement -

ಗುಜರಾತ್‌ನ ಜಖೌ ಬಂದರು ಸಮೀಪದಲ್ಲಿ ಇದೇ 15ರಂದು(ಗುರುವಾರ) ಪ್ರಬಲ ಚಂಡಮಾರುತ ಬಿಪೊರ್‌ಜಾಯ್‌, ಸುಮಾರು 110 ಕಿಮೀ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಕರಾವಳಿ ಪ್ರದೇಶಗಳ ವ್ಯಾಪ್ತಿಯಲ್ಲಿನ ಜನರನ್ನು ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

37,800 ಮಂದಿಯ ಸ್ಥಳಾಂತರ

ಅತಿ ಹೆಚ್ಚಿನ ಹಾನಿಯಾಗುವ ಭೀತಿ ಎದುರಿಸುತ್ತಿರುವ ಕಚ್‌, ದೇವಭೂಮಿ ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿನ ಕರಾವಳಿ ಪ್ರದೇಶಗಳ 10 ಕಿ.ಮೀ. ವ್ಯಾಪ್ತಿಯಲ್ಲಿನ  37,800 ಮಂದಿಯನ್ನು ಈಗಾಗಲೇ ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಾದ್ಯಂತ ಬಿರುಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ. ಅತಿ ತೀವ್ರತೆಯ ಚಂಡಮಾರುತವಾಗಿ ಮಾರ್ಪಾಡಾಗಿರುವ ಬಿಪೊರ್‌ಜಾಯ್‌ ಉತ್ತರ-ಈಶಾನ್ಯಕ್ಕೆ ಚಲಿಸುತ್ತಿದೆ. ಗುಜರಾತ್‌ನ ಸೌರಾಷ್ಟ್ರ ಮತ್ತು ಕಛ್‌ ಹಾಗೂ ಪಾಕಿಸ್ತಾನದ ಕರಾಚಿ ಕರಾವಳಿಯನ್ನು 125-150 ಕಿ.ಮೀ. ವೇಗದೊಂದಿಗೆ ಹಾದು ಹೋಗಲಿದೆ. ಗುರುವಾರ ಸಂಜೆ, ಗುಜರಾತ್‌ನ ಜಖೌ ಬಂದರಿನ ಸಮೀಪವೇ ಬಿಪೊರ್‌ಜಾಯ್ ಚಂಡಮಾರುತವು ಸುಮಾರು 110 ಕಿಮೀ ವೇಗದಲ್ಲಿ ಅಪ್ಪಳಿಸುವ ನಿರೀಕ್ಷೆಯಿದೆ. ಈ ಚಂಡಮಾರುತವು ಭಾರೀ ಪ್ರಮಾಣದಲ್ಲಿ ಹಾನಿ ಉಂಟುಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಶಾಲೆಗಳು ಬಂದ್

ಗುಜರಾತ್‌ನ ಐದು ಹೆಚ್ಚು ಪೀಡಿತ ಜಿಲ್ಲೆಗಳಾದ ಕಚ್, ಪೋರಬಂದರ್, ಅಮ್ರೇಲಿ, ಗಿರ್ ಸೋಮನಾಥ್, ದ್ವಾರಕಾದಲ್ಲಿ ಎರಡು ದಿನಗಳ ಕಾಲ ಶಾಲೆಗಳನ್ನು ಮುಚ್ಚಲಾಗಿದೆ. ಬುಧವಾರ ನಡೆಯಬೇಕಿದ್ದ ಗುಜರಾತ್ ಸರ್ಕಾರದ ಕ್ಯಾಬಿನೆಟ್ ಸಭೆಯನ್ನು ರದ್ದುಗೊಳಿಸಲಾಗಿದ್ದು, ಎಲ್ಲಾ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಉಳಿಯುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...