ಬಿಹಾರ | ಪಾಟ್ನಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್‌; ಬಿಜೆಪಿ ನಾಯಕ ಮೃತ್ಯು

Date:

Advertisements
  • ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಮೃತ್ಯು
  • ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬಿಹಾರದ ಪಾಟ್ನಾದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದು, ಘಟನೆಯಲ್ಲಿ ಬಿಜೆಪಿ ನಾಯಕರೋರ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಪೊಲೀಸರ ಬಲಪ್ರಯೋಗದಿಂದಾಗಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಸಿಂಗ್ ಅವರು ಜೆಹಾನಾಬಾದ್ ನಗರದಲ್ಲಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಲಾಠಿಚಾರ್ಜ್‌ನಿಂದಾಗಿ ಸಂಸದ ಜನಾರ್ದನ್ ಸಿಂಗ್ ಸ್ಥಿತಿ ಗಂಭೀರವಾಗಿರುವುದಾಗಿಯೂ ವರದಿಯಾಗಿದ್ದು, ಲಾಠಿಚಾರ್ಜ್ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Advertisements

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, “ಇದೊಂದು ಕ್ರೂರ ಘಟನೆ. ಪೊಲೀಸ್ ಲಾಠಿಚಾರ್ಜ್‌ನಲ್ಲಿ ಉಂಟಾದ ಗಾಯಗಳಿಂದ ಪಕ್ಷದ ಜೆಹಾನಾಬಾದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವನ್ನಪ್ಪಿದ್ದಾರೆ” ಎಂದು ಹೇಳಿದ್ದಾರೆ.

ಬಿಜೆಪಿ ನಾಯಕನ ಸಾವನ್ನು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆ ಕೂಡ ದೃಢಪಡಿಸಿದೆ.

ರಾಜ್ಯದಲ್ಲಿ ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರದ ವಿರುದ್ಧ ಬಿಜೆಪಿಯು ‘ವಿಧಾನಸಭಾ ಮಾರ್ಚ್’ ನಡೆಸುತ್ತಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು, ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದ್ದರು.

ಜೆ ಪಿ ನಡ್ಡಾ ಆಕ್ರೋಶ

ಈ ಘಟನೆಯ ನಂತರ ಬಿಹಾರದಲ್ಲಿ ರಾಜಕೀಯ ಬಿಸಿ ಏರತೊಡಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಟ್ವೀಟ್‌ ಮಾಡಿ ನಿತೀಶ್ ಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಬಿಜೆಪಿ ಕಾರ್ಯಕರ್ತರ ಮೇಲೆ ಪಾಟ್ನಾ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಸರ್ಕಾರದ ವೈಫಲ್ಯ. ಭ್ರಷ್ಟಾಚಾರದ ಕೋಟೆ ಉಳಿಸಲು ಮಹಾಮೈತ್ರಿ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ. ಚಾರ್ಜ್ ಶೀಟ್ ಹಾಕಿರುವ ವ್ಯಕ್ತಿಯನ್ನು ರಕ್ಷಿಸಲು ಬಿಹಾರ ಸಿಎಂ ನೈತಿಕತೆಯನ್ನೂ ಮರೆತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X