ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

Advertisements

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಈ ಜಿಲ್ಲೆಗಳನ್ನು ‌ಅಭಿವೃದ್ಧಿ ಪಡಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‌ ಶುಕ್ರವಾರ ನಡೆದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲಾಯಿತು.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ದೇವಾಲಯಗಳಿವೆ. ಇವು ಪ್ರವಾಸೋದ್ಯಮಕ್ಕೆ ಪೂರಕವಾಗಿವೆ. ಹೊರ ರಾಜ್ಯಗಳಲ್ಲಿ ಉಳಿದುಕೊಂಡಿರುವ ಕರಾವಳಿ ಮೂಲದ ಉದ್ಯಮಿಗಳು ಈ ಭಾಗಗಳಲ್ಲಿ ಬಂದು ಬಂಡವಾಳ ಹೂಡುವಂತಾಗಬೇಕು. ಹೀಗಾದರೆ ಮುಂದಿನ ಎರಡ್ಮೂರು ವರ್ಷದಲ್ಲಿ ಸಮಗ್ರ ಅಭಿವೃದ್ಧಿ ಕಾಣಬಹುದು ಎಂದರು.

Advertisements

ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್,‌ ದಿನೇಶ್ ಗುಂಡೂರಾವ್, ಮಂಕಾಳ್ ವೈದ್ಯ, ಕರಾವಳಿ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X