Live Updates | ತಮಿಳುನಾಡಿನ ಮನವಿಯನ್ನು ತಿರಸ್ಕರಿಸಿದ್ದು ತೃಪ್ತಿ ತಂದಿದೆ: ಡಿ.ಕೆ.ಶಿವಕುಮಾರ್

Date:

26 Sep 2023, 04:35 PM

ತಮಿಳುನಾಡಿನ ಮನವಿಯನ್ನು ತಿರಸ್ಕರಿಸಿದ್ದು ತೃಪ್ತಿ ತಂದಿದೆ: ಡಿ.ಕೆ.ಶಿವಕುಮಾರ್

12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸಿಡಬ್ಲ್ಯೂಆರ್‌ಸಿ ಎದುರು ತಮಿಳುನಾಡಿನವರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದು ನಮಗೆ ತೃಪ್ತಿ ತಂದಿದೆ. ಆ ಮೂಲಕ ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.


26 Sep 2023, 02:35 PM

ತಮಿಳುನಾಡಿಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದ ಸಿಡಬ್ಲ್ಯೂಆರ್‌ಸಿ

ದೆಹಲಿಯಲ್ಲಿ ಮಂಗಳವಾರ ಕಾವೇರಿ ನೀರು ನಿಯಂತ್ರಣಾ ಸಮಿತಿಯು ಸಭೆ ನಡೆಸಿದ್ದು, ತಮಿಳುನಾಡಿಗೆ ಕರ್ನಾಟಕವು ಮುಂದಿನ 18 ದಿನ ಪ್ರತಿದಿನವೂ ಮೂರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಮತ್ತೆ ಆದೇಶಿಸಿದೆ. ಸೆ.28ರಿಂದ ಅಕ್ಟೋಬರ್ 15ರವರೆಗೂ ನೀರು ಬಿಡುವಂತೆ ಆದೇಶ ನೀಡಿದೆ.


26 Sep 2023, 1:45 PM

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಾಘಾತ

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಸೋಮವಾರ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. 74 ವರ್ಷದ ನಟ, ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.


26 Sep 2023, 1:15 PM

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಖ್ಯಾತ ಹಿರಿಯ ನಟಿ ವಹೀದಾ ರೆಹಮಾನ್ ಆಯ್ಕೆ

ಈ ವರ್ಷದ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಹಿರಿಯ ನಟಿ ವಹೀದಾ ರೆಹಮಾನ್ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆ ಪ್ರಕಟಿಸಿದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, “ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ವಹೀದಾ ರೆಹಮಾನ್ ಅವರಿಗೆ ನೀಡಲಾಗುತ್ತಿದೆ. ಅದನ್ನು ಘೋಷಿಸಲು ನನಗೆ ಅಪಾರ ಸಂತೋಷವಾಗುತ್ತಿದೆ” ಎಂದು ತಿಳಿಸಿದ್ದಾರೆ.


26 Sep 2023, 12:45 PM

ಬೆಂಗಳೂರು ಬಂದ್: ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ಕಾವೇರಿ ನದಿ ನೀರಿನ ವಿಚಾರವಾಗಿ ಇಂದು ಕರೆ ನೀಡಿರುವ ಬೆಂಗಳೂರು ಬಂದ್ ವೇಳೆ ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಸಂಘಟನೆಗಳ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ಬಿಎಂಟಿಸಿ ಬಸ್‌ನಲ್ಲಿ ತುಂಬಿಕೊಂಡು ಹೋದರು.


26 Sep 2023, 12:30 PM

ಕಾವೇರಿ ಹೋರಾಟ : ಟ್ವಿಟ್ಟರ್‌ನಲ್ಲಿ ಬೆಂಬಲ ಸೂಚಿಸಿದ ನಟ ಸುದೀಪ್

ಕಾವೇರಿ ನದಿ ನೀರಿನ ವಿಚಾರವಾಗಿ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಟ್ವಿಟ್ಟರ್‌ನಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಬರೆದಿರುವ ಸುದೀಪ್, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ನಡೆಸಿ ಕಾವೇರಿ ನದಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ವಿನಂತಿಸಿದ್ದಾರೆ.


26 Sep 2023, 12:10 PM

ಬೆಂಗಳೂರು ಬಂದ್ ಹಿನ್ನೆಲೆ: 13 ವಿಮಾನಗಳ ಹಾರಾಟ ರದ್ದು

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಪ್ರಯಾಣಿಕರು ಬೆಂಗಳೂರು ಪ್ರಯಾಣ ರದ್ದು ಮಾಡಿರುವ ಹಿನ್ನೆಲೆಯಲ್ಲಿ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ ರದ್ದಾಗಿದೆ. ದೆಹಲಿ, ಕೊಚ್ಚಿ, ಮಂಗಳೂರು, ಮುಂಬೈ ಸೇರಿದಂತೆ ಇತರೆ 13 ವಿಮಾನಗಳ ಹಾರಾಟ ಏರ್ ಲೈನ್ಸ್ ನವರು ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದಾರೆ.


26 Sep 2023, 11:10 AM

ಕಾವೇರಿ ವಿವಾದ: ಸಂಪೂರ್ಣ ಬಂದ್ ಆಗದ ಬೆಂಗಳೂರು

ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಮಂಗಳವಾರ ಕರೆ ನೀಡಿರುವ ‘ಬೆಂಗಳೂರು ಬಂದ್’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಪೂರ್ಣ ಬಂದ್ ಆಗದಿದ್ದರೂ ಜನರ ಓಡಾಟ ತೀರಾ ಕಡಿಮೆಯಾಗಿದೆ. ರಿಕ್ಷಾ, ಕ್ಯಾಬ್‌ಗಳು ಓಡಾಡುತ್ತಿವೆ. ಹೆಚ್ಚಿನ ಹೊಟೇಲ್, ಅಂಗಡಿಗಳು ತೆರೆದು ವ್ಯಾಪಾರವೂ ನಡೆಸುತ್ತಿದೆ. ಬಿಎಂಟಿಸಿ, ಮೆಟ್ರೋ ಬಸ್ ಓಡಾಟವಿದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬಂದ್ ಕರೆ ಕೊಟ್ಟಿರುವ ಸಂಘಟನೆಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ತಮಿಳುನಾಡು ಗಡಿಭಾಗ ಹಾಗೂ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್...

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ...