ದೇಶದಲ್ಲಿ ನಿಲ್ಲದ ಜಾತಿ ದೌರ್ಜನ್ಯ: ದಲಿತ ಮಹಿಳೆಗೆ ಬಾವಿ ನೀರು ನಿರಾಕರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

Date:

ದಲಿತ ಮಹಿಳೆಯೊಬ್ಬರಿಗೆ ಕುಡಿಯುವ ನೀರು ತರದಂತೆ ತಡೆದು, ಆಕೆಯ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಘಟನೆ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದಿದೆ. ಈ ಸಂಬಂಧ ಜಗನ್ನಾಥಪುರ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ರಾಂಚಿಯ ಎಚ್‌ಇಸಿ ಸ್ಮಾರ್ಟ್ ಸಿಟಿಯ ಸೆಕ್ಟರ್-2 ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಂಜು ಚೌಧರಿ ಎಂಬ ಮಹಿಳೆ ತಮ್ಮ ನೆರೆಹೊರೆಯವರಾದ ಅಮರೇಂದ್ರ ಕುಮಾರ್, ಆತನ ಪತ್ನಿ ರೇಮಿ ದೇವಿ, ಪುತ್ರರಾದ ಆದಿತ್ಯ, ಅಮನ್, ಉಪೇಂದ್ರ ಯಾದವ್ ವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

ದೂರಿನ ಪ್ರಕಾರ, ಜುಲೈ 23ರಿಂದ ಆರೋಪಿಗಳು ತಮ್ಮ ಮನೆಯ ಸಮೀಪವಿರುವ ಬಾವಿಯಿಂದ ನೀರು ತರುವುದನ್ನು ತಡೆಯುತ್ತಿದ್ದರು. ಅಕ್ಟೋಬರ್ 10ರಂದು ಮನೆಗೆ ನುಗ್ಗಿ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಮೈಸೂರು ವಿವಿ | ಪ್ರಾಧ್ಯಾಪಕನಿಂದ ಜಾತಿ ದೌರ್ಜನ್ಯ, ಯುವತಿಯರಿಗೆ ಕಿರುಕುಳ

ಸಂತ್ರಸ್ತೆ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದು, ಬಾವಿಯು ಅಮರೇಂದ್ರ ಅವರ ಖಾಸಗಿ ಜಾಗದಲ್ಲಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಮಹಿಳೆಯ ಮೇಲೆ ನಡೆದ ಹಲ್ಲೆ ಮತ್ತು ಜಾತಿ ನಿಂದನೆಯ ಆರೋಪಗಳ ಕುರಿತು ವಿವರವಾದ ತನಿಖೆ ನಡೆಸಲಾಗುತ್ತಿದ್ದು, ತನಿಖೆಯ ನಂತರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

21ನೇ ಶತಮಾನದಲ್ಲೂ ನೀರು, ನೈರ್ಮಲ್ಯ, ಸಮಾಜದ ಮೂಲಭೂತ ಹಕ್ಕುಗಳ ವಿಷಯದಲ್ಲಿ ದಲಿತರು ತಾರತಮ್ಯ ಎದುರಿಸುತ್ತಿರುವುದು ದೇಶದಲ್ಲಿ ಹೆಚ್ಚಾಗುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳಿಗೆ ಸಾಕ್ಷಿಯಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCBR), ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆ ಕಂಡುಬರುತ್ತಿದೆ.

ಕುಡಿಯುವ ನೀರಿನ ಮೂಲಗಳಿಗೆ ಪ್ರವೇಶ ನಿರಾಕರಣೆ, ಸಾರ್ವಜನಿಕ ಸ್ಥಳಗಳಲ್ಲಿ ತಾರತಮ್ಯ ಮತ್ತು ಜಾತಿನಿಂದನೆಯಂತಹ ಘಟನೆಗಳು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್ ರಾಜ್ಯಗಳಲ್ಲಿ ಹೆಚ್ಚಾಗಿ ವರದಿಯಾಗುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಗಾಂಧಿನಗರದಲ್ಲಿ ಬಿಜೆಪಿಗೆ ಜಯ, ಕಾಂಗ್ರೆಸ್‌ ಚೇತರಿಕೆ

ಗುಜರಾತ್‌ನ ಪ್ರತಿಷ್ಠಿತ ಗಾಂಧಿನಗರ ಮಹಾನಗರ ಪಾಲಿಕೆ (ಜಿಎಂಸಿ) ಸೇರಿದಂತೆ ವಿವಿಧ ನಗರ...

ಮಸ್ಕ್‌ ಸ್ಟಾರ್‌ಲಿಂಕ್‌ ವಿವಾದ | ಭಾರತದಲ್ಲಿ ಅನುಮತಿ ನೀಡದಂತೆ ಕೇಂದ್ರಕ್ಕೆ RSS ನಂಟಿನ SJM ಒತ್ತಾಯ

ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಭಾರತದಲ್ಲಿ...

ನಿಖಿಲ್ ಕುಮಾರಸ್ವಾಮಿ ವೈಯಕ್ತಿಕ ಸಾಧನೆಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲಿ: ಎಂ.ಎಸ್ ಶಿವಕುಮಾರ್

ಭಾರತ್ ಜೋಡೋ ಯಾತ್ರೆ, ಪಾದಯಾತ್ರೆ ಹಾಗೂ ಚುನಾಯಿತ ಪ್ರತಿನಿಧಿಗಳ ಕುರಿತು ಹೇಳಿಕೆ...

ರಜನಿ, ಶಿವಣ್ಣ ಚಿತ್ರಗಳಾದ ​ ‘ಜೈಲರ್-2’, ‘ಬೇಲ್’ ಆನ್‌ಲೈನ್ ಪೈರಸಿಗೆ ಮದ್ರಾಸ್ ಹೈಕೋರ್ಟ್ ತಡೆ

ರಜಿನಿಕಾಂತ್ ಅಭಿನಯದ 'ಜೈಲರ್-2' ಹಾಗೂ ಶಿವರಾಜ್‌ಕುಮಾರ್ ನಟನೆಯ 'ಬೇಲ್' ಚಿತ್ರಗಳನ್ನು ವೆಬ್‌ಸೈಟ್‌ಗಳು...