ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರರ ವಿರುದ್ಧ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಕೂಡ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ರೋಸ್ ಅವೆನ್ಯೂ ಕೋರ್ಟ್ ತನಿಖೆಗೆ ಅನುಮತಿಸಿದ ನಂತರ ಈ ವರ್ಷ ಜೂನ್‌ನಲ್ಲಿ ಸಿಬಿಐ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?
ದೆಹಲಿ ಅಬಕಾರಿ ನೀತಿಯನ್ನು ದುರುಪಯೋಗ ಮಾಡಿಕೊಳ್ಳಲಾಗಿದ್ದು, ಗಣನೀಯ ಹಣಕಾಸು ದುರ್ಬಳಕೆಯನ್ನು ಒಳಗೊಂಡಿದೆ ಎಂದು ಆರೋಪ ಪಟ್ಟಿಯಲ್ಲಿ ಸಿಬಿಐ ಆರೋಪಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಗಸ್ಟ್ 8ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.
ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜುಲೈ 12 ರಂದು ಮಧ್ಯಂತರ ಜಾಮೀನು ನೀಡಿತ್ತು.
ಕೇಜ್ರಿವಾಲ್ ಅವರಿಗೆ 90 ದಿನದ ನಂತರ ಜಾಮೀನು ದೊರಕಿತ್ತು. ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದರೂ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯವಿರಲಿಲ್ಲ. ಏಕೆಂದರೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ಬಂಧಿಸಿರುವುದರಿಂದ ಅವರು ತಿಹಾರ್ ಜೈಲಿನಲ್ಲಿ ಇದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಲಿದೆ.
