ಅಬಕಾರಿ ನೀತಿ ಹಗರಣ | ಅರವಿಂದ್ ಕೇಜ್ರಿವಾಲ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಸಿಬಿಐ

Date:

ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹಾಗೂ ಇತರರ ವಿರುದ್ಧ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ.

- Advertisement -

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಕೂಡ ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದು, ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರೋಸ್‌ ಅವೆನ್ಯೂ ಕೋರ್ಟ್ ತನಿಖೆಗೆ ಅನುಮತಿಸಿದ ನಂತರ ಈ ವರ್ಷ ಜೂನ್‌ನಲ್ಲಿ ಸಿಬಿಐ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ದೆಹಲಿ ಅಬಕಾರಿ ನೀತಿಯನ್ನು ದುರುಪಯೋಗ ಮಾಡಿಕೊಳ್ಳಲಾಗಿದ್ದು, ಗಣನೀಯ ಹಣಕಾಸು ದುರ್ಬಳಕೆಯನ್ನು ಒಳಗೊಂಡಿದೆ ಎಂದು ಆರೋಪ ಪಟ್ಟಿಯಲ್ಲಿ ಸಿಬಿಐ ಆರೋಪಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಗಸ್ಟ್‌ 8ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜುಲೈ 12 ರಂದು ಮಧ್ಯಂತರ ಜಾಮೀನು ನೀಡಿತ್ತು.

ಕೇಜ್ರಿವಾಲ್‌ ಅವರಿಗೆ 90 ದಿನದ ನಂತರ ಜಾಮೀನು ದೊರಕಿತ್ತು. ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದರೂ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯವಿರಲಿಲ್ಲ. ಏಕೆಂದರೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ಬಂಧಿಸಿರುವುದರಿಂದ ಅವರು ತಿಹಾರ್‌ ಜೈಲಿನಲ್ಲಿ ಇದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಲಿದೆ.  

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...