ಚಿಕ್ಕಬಳ್ಳಾಪುರ | ಸೈಬರ್ ವಂಚನೆ; ಅಧಿಕ ಲಾಭದ ನೆಪದಲ್ಲಿ ₹1.85 ಲಕ್ಷ ಕಳೆದುಕೊಂಡ ಯುವತಿ

Date:

ಸೈಬರ್ ವಂಚಕರು ಅಧಿಕ ಲಾಭದ ನೆಪದಲ್ಲಿ ವಂಚಿಸಿ ₹1.85 ಲಕ್ಷ ಲಪಟಾಯಿಸಿದ್ದಾರೆಂದು ಆರೋಪಿಸಿ ಯುವತಿಯೋರ್ವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಸಿಇಎನ್ ಪೊಲೀಸ್ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

ಚಿಂತಾಮಣಿ ನಗರದ ಅಬ್ಬುಗುಂಡು ಹಿಂಭಾಗ ರಸ್ತೆಯ ನಿವಾಸಿ ಸಿವಿಲ್ ಎಂಜಿನಿಯರ್ ಕೆ ಎನ್ ಐಶ್ವರ್ಯ ಹಣ ಕಳೆದುಕೊಂಡು ದೂರು ನೀಡಿರುವ ಸಂತ್ರಸ್ತೆ.

ಸಂತ್ರಸ್ತೆ ಐಶ್ವರ್ಯ ಬೆಂಗಳೂರಿನ ಯಲಹಂಕದಲ್ಲಿ ಕಂಪನಿಯೊಂದರಲ್ಲಿ ಸಿವಿಲ್ ಎಂಜಿನಿಯರ್ ಆಗಿದ್ದಾರೆ. ಬೆಂಗಳೂರಿನ ಮಾರುತಹಳ್ಳಿಯ ಎಸ್‌ಬಿಐ ಶಾಖೆ, ನಗರದ ಕರ್ನಾಟಕ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದಾರೆ. ಪೋನ್ ಪೇ, ಗೂಗಲ್ ಪೇ ವ್ಯಾಲೆಟ್ ಬಳಸಿಕೊಂಡು ದೈನಂದಿನ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಜನವರಿ 17ರಂದು ಅವರಿಗೆ ಮೇಘಾ ಎಂಬುವವರಿಂದ ಮೆಸೇಜ್ ಬಂದಿದೆ. ಯುಟ್ಯೂಬ್ ರಿವ್ಯೂ ಮಾಡಿದರೆ ಒಂದಕ್ಕೆ ₹50 ಕೊಡುವುದಾಗಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆ ಎನ್ ಐಶ್ವರ್ಯ ಅವರನ್ನು ಟೆಲಿಗ್ರಾಂ ಗ್ರೂಪ್‌ಗೆ ಸೇರಿಸಿಕೊಂಡಿದ್ದಾರೆ. ಮೊದಲು ₹2,000 ಹೂಡಿಕೆ ಮಾಡುವಂತೆ ತಿಳಿಸಿದಾಗ ನಿರಾಕರಿಸಿದ್ದಾರೆ. ನಂತರ ಟೆಲಿಗ್ರಾಂ ಹೂಡಿಕೆದಾರರ ಪರಿಚಯ ಮಾಡಿಸಿ ಅದರಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಬರುತ್ತಿರುವ ಲಾಭದ ಅಮಿಷ ಒಡ್ಡಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬಿಲ್ಕಿಸ್‌ ಬಾನೊ ಪ್ರಕರಣ: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು

ಮೊದಲಿಗೆ ₹5,000 ಅವರು ಸೂಚಿಸಿದ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಹೂಡಿಕೆ ಮಾಡಿದ್ದಾರೆ. ಅದಕ್ಕೆ ಲಾಭವಾಗಿ ಅವರ ಖಾತೆಗೆ ₹6 ಸಾವಿರ ಜಮಾ ಆಗಿದೆ. ಹೆಚ್ಚಿನ ಲಾಭದ ಆಸೆ ತೋರಿಸಿ ಹಂತಹಂತವಾಗಿ ಒಟ್ಟು ₹1,85,800 ಹೂಡಿಕೆ ಮಾಡಿಸಿಕೊಂಡಿದ್ದಾರೆ.

ಹೂಡಿಕೆ ಮಾಡಿದ ಹಣವನ್ನು ಹಣವನ್ನು ವಾಪಸ್ ಪಡೆಯಲು ಅವಕಾಶ ನೀಡಿಲ್ಲ. ವಾಪಸ್ ನೀಡುವಂತೆ ಅನೇಕ ಬಾರಿ ಕೇಳಿದರೂ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...