ಚಿಕ್ಕಮಗಳೂರು | ಮಲೆನಾಡಿನಲ್ಲಿ ಕೋಮುದ್ವೇಷ ಹೆಚ್ಚುತ್ತಿದೆಯೇ; ಗೊಂದಲ ಸೃಷ್ಟಿಸಿದ ಪ್ರಕರಣ

Date:

ಪ್ರಕೃತಿಯ ಪ್ರವಾಸಿ ತಾಣವಾಗಿರುವ ಮಲೆನಾಡು ಶಾಂತಿ ಸೌಹಾರ್ದ ಪರಂಪರೆ ಇದೆ. ಯಾವುದೇ ಸಮುದಾಯವಿರಲಿ ಸ್ಪಂದಿಸುವ ಮನಸ್ಥಿತಿಯಿದೆ. ಆದರೇ, ಫೆಬ್ರವರಿ 16ರಲ್ಲಿ ತಿಲಕ್ ಪಾರ್ಕ್ ರಸ್ತೆ, ವಿಜಯಪುರ ಬಡಾವಣೆಯಲ್ಲಿ ಮನೆಗೆ ಕಲ್ಲು ತೂರಾಟ ನಡೆದ ಘಟನೆ ಇಡೀ ಕಾಫಿ ನಾಡನ್ನೇ ಬಿಚ್ಚಿಬಿಳಿಸಿದೆ. ಯಾಕೆಂದರೆ, ಕಲ್ಲು ತೂರಾಟ ಆಗಿದೆ ಎಂದು ಹಿಂದೂ, ಮುಸ್ಲಿಂ ಎರಡು ಸಮುದಾಯದಲ್ಲಿ ಕೋಲಾಹಲ ಎದಿದ್ದೆ. 

- Advertisement -

ಘಟನೆ ಬಗ್ಗೆ : ಫೆ. 16ರಂದು ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಈ ಹಿನ್ನೆಯಲ್ಲಿ ಪಾನಿ ಪುರಿ ತಿನ್ನಲು ಬಂದಿದ್ದ  ಮುಸ್ಲಿಂ ಸಮುದಾಯದ ಯುವಕರನ್ನು ವಿನಾಕಾರಣ ಯುವಕರನ್ನು ಥಳಿಸಿ, ಮನ ಬಂದಂತೆ ಹಲ್ಲೆ ಗೈದಿದ್ದಾರೆ ಎನ್ನಲಾಗಿದೆ. ಘಟನೆ ನಡೆಯುವ ಸ್ಥಳದಲ್ಲಿ ಹಲ್ಲೆ ಗೈದ ಯುವಕರ ಗುಂಪು ಮೂರು ದಿನಗಳ ಹಿಂದಿನಿಂದಲೇ ಮನೆಯ ಸುತ್ತ ಬೈಕಿನಲ್ಲಿ ಓಡಾಡುತ್ತಾ ಅವರನ್ನು ಹಿಂಬಾಲಿಸುತ್ತಿದ್ದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ದೂರುದಾರರ ಜೊತೆ ವಾಗ್ವಾದ ನಡೆದಿರುವುದೂ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...
Screenshot 2026 02 20 07 34 26 83 7352322957d4404136654ef4adb64504

ಮೊದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾಸೀನ್, ಹುಸೇನ್, ಅಕ್ಷದ್, ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದರು. ಬಂಧಿತರಲ್ಲಿ ಅಪ್ರಾಪ್ತ ಬಾಲಕರು ಹಾಗೆಯೇ, ಇನ್ನ ಇಬ್ಬರಿಗೆ 18 ವರ್ಷ ವಯಸ್ಸಿನ ಯುವಕರಾಗಿದ್ದಾರೆನ್ನಲಾಗಿದೆ. ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಂಘಟನೆಯ ಮುಖಂಡರು ಸೇರಿ ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಧಾವಿಸಿ ದೊಡ್ಡ ಅನಾಹುತ ಆಗದಂತೆ ಸಾಧ್ಯವಾದಷ್ಟು ಸುಧಾರಿಸಲಾಗಿತ್ತು. ಆದರೇ, ಎರಡು ಸಮುದಾಯದ ಘರ್ಷಣೆ ಹೆಚ್ಚಾದಾಗ ಹಲ್ಲೆ ಮಾಡಿದ ವ್ಯಕ್ತಿಗಳು ಹಾಗೂ ಹಲ್ಲೆಗೊಳಗಾದ ಯುವಕರ ಮೇಲೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಚಿಕ್ಕಮಗಳೂರಿನ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದಾಗ ವಿಚಾರಣೆ ನಡೆಸಿ ನ್ಯಾಯಾಧೀಶರು ಇಬ್ಬರು ಪ್ರಮುಖ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ಆದೇಶಿಸಲಾಯಿತು.ಈ ಕುರಿತು ಕಲ್ಲು ತೂರಾಟ ಮಾಡಿದವರನ್ನು ಹಿಡಿದುಕೊಟ್ಟವರ ವಿರುದ್ದವೆ ಪ್ರಕರಣ ದಾಖಲಿಸಿದ್ದಾರೆಂದು ಬಿಜೆಪಿ ಮುಖಂಡರು ಸಿಡಿಮಿಡಿಗೊಂಡು ಎಲ್ಲೆಡೆ ಮಾತಿನ ಚಕಮಕಿ ಶುರುವಾಯಿತು. ಕಿಡಿಗೇಡಿಗಳು ರಾತ್ರಿ ವೇಳೆ ಮನೆಗಳ ಮೇಲೆ ಕಲ್ಲು ಎಸೆಯುತ್ತಿದ್ದುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ಎದುರಾಗಿದೆ.

 ಬಂಧಿತ ಪೋಷಕರ ಮಾತು : ಮಾಧ್ಯಮದೊಂದಿಗೆ ಮಾತಾಡಿದ ಬಂಧಿತ ಅಪ್ರಾಪ್ತ ಬಾಲಕರ ಪೋಷಕರು, ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಜನರ ವಿರುದ್ಧ ಎಫ್‌ಐಆರ್ ದಾಖಲಾಗಬೇಕು. ನಮ್ಮ ಮಕ್ಕಳಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಸಂಜೆ ಪಾನಿಪುರಿ ತಿನ್ನೋಕೆ ಹೋದವರನ್ನು ಹಿಡಿದು ಹೊಡೆದಿದ್ದಾರೆ. ಪೊಲೀಸರು ಬಂದು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಾಗೆಯೇ, ಇಬ್ಬರು ಅಪ್ರಾಪ್ತರ ಪೈಕಿ ಓರ್ವನ ತಾಯಿಯಾಗಿರುವ ಶಾಹಿನ್, ನನ್ನ ಮಗ ತಪ್ಪು ಮಾಡಿಲ್ಲ. ಕಲ್ಲು ಯಾರು ಹೊಡೆದಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಮನೆಯಲ್ಲಿ ಸೊಪ್ಪು ಸಾರು ಮಾಡಿದ್ದೆ , ತಿನ್ನಲ್ಲ ಅಂತ ಪಾನಿಪುರಿ ತಿನ್ನಲು ವಿಜಯಪುರ ರಸ್ತೆಗೆ ಹೋಗಿದ್ದಾರೆ. ಆಗ ಯಾರೋ ಹುಚ್ಚರು ರಸ್ತೆ ಕಲ್ಲು ತೂರಾಟ ನಡೆಸಿದ್ದಾರೆ. ಆಗ ಪಾಪದ ಮಕ್ಕಳನ್ನು ಹಿಡಿದು ಬಜರಂಗದಳದವರು ಹಲ್ಲೆ ನಡೆಸಿದ್ದಾರೆ. ಸಿಸಿಟಿವಿ ಚೆಕ್ ಮಾಡಲಿ ಯಾರು ಕಲ್ಲು ಹೊಡೆದಿದ್ದಾರೆ ಅವರಿಗೆ ಶಿಕ್ಷೆ ಕೊಡಲಿ , ಇವರು ಯಾರು ಶಿಕ್ಷೆ ಕೊಡಲಿಕ್ಕೆ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೋರ್ವ ಅಪ್ರಾಪ್ತನ ತಾಯಿ ರಿಯಾನಾ ಬೇಗಂ ಮಾತನಾಡಿ, ನನ್ನ ಮಗ ತಪ್ಪು ಮಾಡಿಲ್ಲ, ರಾತ್ರಿ ಪಾನಿಪುರಿ ತಿನ್ನಲು ವಿಜಯಪುರ ರಸ್ತೆಗೆ ಹೋಗಿದ್ದರು. ಪಾನಿಪುರಿ ತಿಂದು ಬರುತ್ತಿರುವಾಗ ಕೆಲವರು ಬಂದು ಹೆಸರು ಕೇಳಿದ್ದಾರೆ. ಹೆಸರು ಹೇಳುತ್ತಿದ್ದಂತೆ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಬಜರಂಗದಳದ ಕಾರ್ಯಕರ್ತರು ನನ್ನ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಮಕ್ಕಳು ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಪೊಲೀಸರು ಶಿಕ್ಷೆ ಕೊಡಲಿ, ಇವರು ಯಾರು ಶಿಕ್ಷೆ ಕೊಡಲಿಕ್ಕೆ. ನನ್ನ ಮಕ್ಕಳು ತಪ್ಪು ಮಾಡಿದ್ದರೆ ಸಿಸಿಟಿವಿ ಚೆಕ್ ಮಾಡಿ ಹೇಳಲಿ. ನನ್ನ ಮಕ್ಕಳು ಇಂತಹ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು.

ಹಲ್ಲೆಗೊಳಗಾದ ಅಪ್ರಾಪ್ತ ಬಾಲಕರ ಅಭಿಪ್ರಾಯ : ನಾವು ಕಲ್ಲು ತೂರಾಟ ನಡೆಸಿಲ್ಲ, ನಾವು ಪಾನಿಪುರಿ ತಿನ್ನಲು ವಿಜಯಪುರ ರಸ್ತೆಗೆ ಹೋಗಿದ್ದೀವಿ. ಆಗ ಅಲ್ಲಿಯೇ ಇದ್ದ ಶ್ಯಾಮ್ , ಸಂತೋಷ್ ನಮ್ಮ ಮೇಲೆ ಹಲ್ಲೆ‌ ನಡೆಸಿದರು. ನಾವು ರಸ್ತೆಯಲ್ಲಿ ನಡೆದುಕೊಂಡು ಹೋಗುವ ವೇಳೆಯಲ್ಲಿ ಹೆಸರು ಕೇಳಿ ಹಲ್ಲೆ ನಡೆಸಿದರು.  ಅವರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಅಪ್ರಾಪ್ತ ಬಾಲಕರು ತಮ್ಮ ನೋವನ್ನು ತಿಳಿಸಿದರು.

ಮನೆಗೆ ಕಲ್ಲು ತೂರಾಟ ಮಹಿಳೆ ಅಭಿಪ್ರಾಯ : ಯಾರೇ ತಪ್ಪು ಮಾಡಿದ್ದರು ಸರಿಯಾದ ಶಿಕ್ಷೆ ಆಗಬೇಕು. ನಮ್ಮ ಮನೆಯೇ ಏತಕ್ಕೆ ಗುರಿಯಾಗಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಪತ್ತೆ ಹಚ್ಚಿ ನಂತರ ಸಾಕ್ಷಿ ಹೇಳುತ್ತೇನೆ. ಅಲ್ಲಿಯವರೆಗೂ ನಾನು ಮಾತಾಡುವುದಿಲ್ಲ. ಹಾಗೆಯೇ, ಇಲ್ಲಿ ರಾಜಕೀಯ ಬೆಳೆ ಬೇಯಿಸಲು ಬದಲು ಅಭಿವೃದ್ಧಿ ಕಡೆ ಗಮನ ಕೊಡಲಿ ಜನರ ಸಮಸ್ಯೆ ಬಗ್ಗೆ ಮಾತಾಡಲಿ ಎಂದು ಕುಟುಂಬದವರು ತಿಳಿಸಿದರು.

ಕಾನೂನು ಕೈ ತೆಗೆದುಕೊಂಡವರನ್ನು ಗಡಿಪಾರಿಗೆ ಆಗ್ರಹ : ಹಲ್ಲೆ ನಡೆಸಿರುವ ಬಜರಂಗದಳದ‌ ಮುಖಂಡ ಶ್ಯಾಮ್ ,ಬಿಜೆಪಿ ಮುಖಂಡ ಸಂತೋಷ್ ವಿರುದ್ದ ಸಂಘಟನಾ ಮುಖಂಡರು ಕಿಡಿಕಾರಿದ್ದಾರೆ. ಈ ಇಬ್ಬರನ್ನು ಜಿಲ್ಲೆಯಿಂದ ಕೊಡಲೇ ಗಡಿಪಾರು ಮಾಡಬೇಕು. ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಮುಂದಾಗುತ್ತಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನೆಸಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆಯೋ ಅವರಿಗೆ ಶಿಕ್ಷೆ ಆಗಲಿ. ಅದನ್ನು ಬಿಟ್ಟು ಅಮಾಯಕರನ್ನು ಹಿಡಿದು ಹಲ್ಲೆ ನಡೆಸಲಾಗಿದೆ. ಇದನ್ನು ಎಸ್‌ಡಿಪಿಐ ತೀವ್ರವಾಗಿ ಖಂಡಿಸುತ್ತದೆ ಎಂದು ಗೌಸ್ ಮುನೀರ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮನೆ ಮೇಲೆ ಕಲ್ಲು ತೂರಿದ ಆರೋಪ – ಹಲ್ಲೆ; ಭುಗಿಲೆದ್ದ ಕೋಮು ಉದ್ವಿಗ್ನತೆ

ನಿಜವಾಗಿ ಮಹಿಳೆಯ ಮೆನೆಗೆ ಕಲ್ಲು ತೂರಾಟ ಮಾಡಿದ ಗೌರಿ ಕಾಲುವೆಯ ಭರತ್ (23), ರಾಮನಹಳ್ಳಿಯ ದಿಲೀಪ್ (27) ಹಾಗೂ ಬೈಕ್ ಮಾಲೀಕ ಹರೀಶ್ ಎಂಬಾತರನ್ನು ಬಂಧಿಸಲಾಗಿದೆ. ಮುಸ್ಲಿಂ ಸಮುದಾಯದ ಯುವಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು ಸತ್ಯಾಂಶ ಬೆಳಕಿಗೆ ಬಂದಿದೆ. ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯಾಗಬೇಕು ಅದು ಯಾರೇ ಆಗಲಿ, ಯಾವುದೇ ಸಮುದಾಯದವರಾಗಲಿ ಎಂದು ಸ್ಥಳೀಯ ಮುಖಂಡರು ತಿಳಿಸಿದ್ದಾರೆ. ಏನೇ ಆಗಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕಾದವರೇ ಸೌಹಾರ್ದತೆಯನ್ನು ಹದಗೆಡಿಸಲು ಮುಂದಾಗಿರುವುದು ಸರಿಯೇ ಎಂಬ ಪ್ರಶ್ನೆ ಮೂಡುತ್ತದೆ. ಇಂತಹ ಘಟನೆಗಳಿಂದ ಚಿಕ್ಕಮಗಳೂರು ಜನರಲ್ಲಿ ಆತಂಕದ ಭಾವನೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಪೊಲೀಸ್ ಇಲಾಖೆಯಿಂದ ಮುಂಜಾಗ್ರತೆ ವಹಿಸಬೇಕಾಗಿದೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...