ಚಿಕ್ಕಮಗಳೂರು l ಕಾಡಾನೆ ದಾಳಿ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ಮಾಡಿದ್ದಾರೆ. ಸತತವಾಗಿ ಕಾಡಾನೆಯಿಂದ ಸಾವಿನ ಪ್ರಕರಣಗಳು ಹೆಚ್ಚಾಗಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.

Screenshot 2025 07 28 12 48 37 91 7352322957d4404136654ef4adb64504 2
ಬಾಳೆಹೊನ್ನೂರ್ ಅಂಗಡಿ ಮುಂಗಟ್ಟುಗಳು ಬಂದ್

ಬಾಳೆಹೊನ್ನೂರು, ಖಾಂಡ್ಯ, ಹುಯಿಗೇರೆ, ದೇವದಾನ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ ನಡೆಸಲಾಗುತ್ತಿದೆ. ಮಲೆನಾಡು ಹಿತರಕ್ಷಣಾ ಸಮಿತಿ, ಖಾಂಡ್ಯ ನಾಗರಿಕ ರಕ್ಷಣಾ ವೇದಿಕೆ, ಮಲೆನಾಡು ಅಡಿಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ ಎಂದು ಸಮಿತಿಯ ಸುಂದ್ರೇಶ್ ಈದಿನ. ಕಾಮ್ ಜೊತೆ ಮಾತಾಡಿದರು.

Screenshot 2025 07 28 12 48 01 54 7352322957d4404136654ef4adb64504
ಕಡಬಗೆರೆ ವ್ಯಾಪ್ತಿಯಲ್ಲಿ ಬಂದ್ ನಡೆಸಿ ಸಾರ್ವಜನಿಕರಿಂದ ಪ್ರತಿಭಟನೆ

ಬಾಳೆಹೊನ್ನೂರಿನಲ್ಲಿ ಶಾಲಾ- ಕಾಲೇಜುಗಳನ್ನು ಸ್ಥಳೀಯರು ಬಂದ್‌ ಮಾಡಿಸಿದ್ದಾರೆ. ವಾಹನ ಸಂಚಾರ ಸಂಚಾರವನ್ನೂ ಬಂದ್ ಮಾಡಲಾಗಿದೆ. ಇದರಿಂದ ಚಿಕ್ಕಮಗಳೂರಿನಿಂದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಸಂಪರ್ಕ ಕಡಿತಗೊಂಡಿದೆ. ವಾಹನಗಳು ಸಾಲುಗಟಿ ನಿಂತಿವೆ.

Screenshot 2025 07 28 12 42 18 21 40deb401b9ffe8e1df2f1cc5ba480b12
ಮಳೆಯಲ್ಲಿಯೂ ಸಾರ್ವಜನಿಕರಿಂದ ಪ್ರತಿಭಟನೆ

ನಾಲ್ಕು ದಿನಗಳ ಅಂತರದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಕೂಡಲೇ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು, ಸುತ್ತಮುತ್ತಲಿನ ಜನ ವಸತಿವಿರುವ ಪ್ರದೇಶದಲ್ಲಿ ರಕ್ಷಣೆ ಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸುವಂತೆ ರೈತ ಸಂಘ ಒತ್ತಾಯ

ರೈತರು ಜಮೀನಿಗೆ ಬರಲು 70-80 ವರ್ಷಗಳಿಂದ ಬಳಸುತ್ತಿದ್ದ ದಾರಿಗೆ ಖಾಸಗಿ ಮತ್ತು...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X