ಪೋಕ್ಸೋ ಪ್ರಕರಣ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಪೋಕ್ಸೋ ಪ್ರಕರಣ ಆರೋಪಿ ತಿಮ್ಮಯ್ಯಗೆ (38), ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಹೋಬಳಿಯ ದೊಡ್ಡಮಾಗರವಳ್ಳಿ ಗ್ರಾಮದ ವ್ಯಕ್ತಿ. ಆಲ್ದೂರು ಪೊಲೀಸ್ ಠಾಣಾ ಮೊ. ನಂ. 89/2024 ಕಲಂ 376(2)(f), 376(2)(I), 376(2)(J), 376(2)(n) ಐಪಿಸಿ, ಕಲಂ 6 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದಲ್ಲಿನ ನೊಂದ ಬಾಲಕಿಗೆ ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ, 2011 ರ ಅಡಿಯಲ್ಲಿ ರೂ. 3,00,000/- ಪರಿಹಾರವನ್ನು ನೀಡುವಂತೆ ಘನ ನ್ಯಾಯಾಲಯವು ಆದೇಶಿಸಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯ ಸಂಯೋಜಕರಾಗಿ ಸುಧೀರ್ ಕುಮಾರ್ ಮುರೊಳ್ಳಿ ನೇಮಕ
ಆರೋಪಿ ತಿಮ್ಮಯ್ಯಗೆ 22ರಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಈ ಪ್ರಕರಣದ ತನಿಖೆಯನ್ನು ವೃತ್ತ ನಿರೀಕ್ಷಕ ಕೆ. ಸತ್ಯನಾರಾಯಣ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ ಕುಮಾರ್ ನ್ಯಾಯಾಲಯದಲ್ಲಿ ವಾದಿಸಿದ್ದರು, ಈ ಕುರಿತು ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.
