ಚಿಕ್ಕಮಗಳೂರು l ಸಾವಿರಾರು ಪೋಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಗೊಳಿಸಬೇಕು; ರೈತ ಸಂಘ ಆಗ್ರಹ

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಬಾಕಿ ಉಳಿಸಿಕೊಂಡಿರುವ ಸಾವಿರಾರು ಪೋಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ತಾಲೂಕು ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

- Advertisement -

ನೇಗಿಲು ನೊಗ ಹೊತ್ತು, ಟಮಟೆ ಬಾರಿಸುವ ಮೂಲಕ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾ‌ರ್ ಎಸ್.ಅಶ್ವಿನಿ ಅವರಿಗೆ ಮನವಿ ಸಲ್ಲಿಸಲಾಗಿದೆ. “ಡಿಸೆಂಬ‌ರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳನ್ನಾಗಿ ಮಾಡುವ ಕಂದಾಯ ಸಚಿವರು ಆಸಕ್ತಿ ತೋರಿದ್ದು, ಇದಕ್ಕೆ ಪೂರಕವಾದ ಕೆಲಸ ಅಧಿಕಾರಿಗಳು ಮಾಡುತ್ತಿಲ್ಲ. ಪೋಡಿ ಪ್ರಕರಣ ಮುಕ್ತಗೊಳಿಸುವ ಬಗ್ಗೆ 2018ರಲ್ಲಿ ಸರಕಾರ 22 ಪುಟದ ಸುತ್ತೋಲೆ ಹೊರಡಿಸಿ ವಿವರಿಸಿದೆ. ಈ ಸುತೋಲೆ ಬಗ್ಗೆ ಸರ್ವೇ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ. ಇದರಿಂದ ಎಡಿಎಲ್‌ಆ‌ರ್ ಇಲಾಖೆಯ ತಕರಾರು ಲಾಗಿನ್‌ನಲ್ಲಿ ರಾಜ್ಯದಲ್ಲಿ 1 ಲಕ್ಷಕ್ಕೂ ಅಧಿಕ ರೈತರ ಜಮೀನು, ಪರಿಹಾರ ಕಂಡುಕೊಳ್ಳದೇ ಬಾಕಿ ಉಳಿದಿದೆ” ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಮಂಜುನಾಥಗೌಡ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯದಲ್ಲಿಯೇ ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚು ಪೋಡು ಪ್ರಕರಣ ಬಾಕಿ ಉಳಿದಿದೆ. ಫಾರಂ ನಂ50 ಮತ್ತು 53 ಯಲ್ಲಿ ಅರ್ಜಿ ಸಲ್ಲಿಸಿದ ರೈತರ ಜಮೀನಿನ ಪೋಡು ಪ್ರಕರಣ ಕೂಡಲೇ ಇತ್ಯರ್ಥಪಡಿಸಬೇಕು. ಆದಿವಾಸಿ ರೈತರನ್ನು ಒಕ್ಕಲೆಬ್ಬಿಸಬಾರದು. ಪೋಡಿ ಪ್ರಕರಣದ ಬಗ್ಗೆ ಎಡಿಎಲ್‌ಆ‌ರ್ ಅಧಿಕಾರಿ ಸ್ಥಳಕ್ಕೆ ಆಗಮಿಸಿ ರೈತರ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ ಎಂದು ಜಿಲ್ಲಾಧ್ಯಕ್ಷ ಉದ್ದೇಗೌಡ ಮಾತಾಡಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೆಎಸ್‌ಆರ್‌ಟಿಸಿ ಬಸ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಗೆ ಡಿಕ್ಕಿ

ಈ ಕುರಿತು ತಹಸೀಲ್ದಾ‌ರ್ ಎಸ್.ಅಶ್ವಿನಿ ಮನವಿ ಸ್ವೀಕರಿಸಿ ಮಾತನಾಡಿ, ಈ ಸಮಸ್ಯೆ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖಂಡರಾದ ವನಶ್ರೀಗೌಡ, ರಘು ಬಿಳ್ಳೂರು, ಚಂದ್ರೇಗೌಡ ಕೆಲ್ಲೂರು, ಚಂದ್ರೇಗೌಡ ಕುಂದೂರು, ಎನ್.ಎಲ್.ಸುಂದ್ರೇಶ್, ರಮೇಶ್ ದಾರದಹಳ್ಳಿ, ಮಂಜುನಾಥ್ ಹೊನ್ನಕೊಯ್ದು, ಮೀನಾಕ್ಷಮ್ಮ, ಶಕುಂತಲಾ, ನಾಗೇಶ್ ಹೊಸಳ್ಳಿ, ಲಕ್ಷ್ಮಣ್‌ಗೌಡ ಬಡವನದಿಣ್ಣೆ, ರವಿ ಬಿಳ್ಳೂರು, ಐ.ಬಿ.ಗೋಪಾಲಗೌಡ, ರಘು ಬಿಳ್ಳೂರು, ಜಯರಾಂಗೌಡ ಅಬಚೂರ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...