ಚಿಕ್ಕನಾಯಕನಹಳ್ಳಿ | ವಿದ್ಯುತ್‌ ಅವಘಡದಲ್ಲಿ ಹದಿಮೂರರ ಬಾಲಕ ಬಲಿ

Date:

ಚಿಕ್ಕನಾಯಕನಹಳ್ಳಿ  ಪಟ್ಟಣದ ಅರಣ್ಯ ಇಲಾಖೆ ಎದುರಿನ ಆರ್ ವಿ ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್ ಅಂಗಡಿ ಮಳಿಗೆಯಿರುವ ಕಟ್ಟಡದಲ್ಲಿ ವಿದ್ಯುತ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 13 ವರ್ಷದ ಬಾಲಕ ಅಚ್ಚುತಕುಮಾರ್ ಅಸುನೀಗಿದ್ದಾನೆ. 

- Advertisement -

ಬೆಸ್ಕಾಂ ಹಿರಿಯ ಅಧಿಕಾರಿಗಳು‌ ಮಳೆ-ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ‌ ಮೇಲಿನಿಂದ ಸೂಚನೆಗಳು ಕೊಡುತ್ತಿದ್ದರೂ ಸಹಾ, ಕೆಳಹಂತದ ಅಧಿಕಾರಿಗಳು ಅದನ್ನು ಸರಿಯಾಗಿ ಪಾಲಿಸದೇ ನಿರ್ಲಕ್ಷ್ಯ ತೋರುತ್ತಾ ಹೊಣೆಗೇಡಿತನ ಪ್ರದರ್ಶಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಆರೋಪಗಳಿಗೆ ತಾಜಾ ಉದಾಹರಣೆ ಎಂಬಂತೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಈ ಒಂದು ತಿಂಗಳ ಕಾಲಾವಧಿಯ ಒಳಗೇ ಸಂಭವಿಸಿರುವ ವಿದ್ಯುತ್ ಅಪಘಾತದಲ್ಲಿ ಇಬ್ಬರು ಬಾಲಕರು ಸಾವನೊಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಹಿಂದೆ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 9 ವರ್ಷದ ಬಾಲಕ ಕುಶಾಲ್ ಸಾವನ್ನಪ್ಪಿದ್ದ ಘಟನೆ ಮಾಸುವ ಮೊದಲೇ ಇದೀಗ ತಾಲ್ಲೂಕು ಕೇಂದ್ರದಲ್ಲಿ ಮತ್ತೊಬ್ಬ ಬಾಲಕ ವಿದ್ಯುತ್ ಅಪಘಾತಕ್ಕೆ ಬಲಿಯಾಗಿರುವುದು ಖೇದಕರ. 

1001494601

ಅಚ್ಚುತಕುಮಾರ್‌ ಎಂದಿನಂತೆ‌ ತನ್ನ ಮನೆಯ ಬಳಿ ಆಟವಾಡಿಕೊಂಡಿದ್ದ ಸಮಯದಲ್ಲಿ ಮನೆ-ಪಕ್ಕದಲ್ಲೇ ಇದ್ದ ಕಂಬದಿಂದ ಆತನಿಗೆ ವಿದ್ಯುತ್ ಸ್ಪರ್ಶವಾಗಿದೆ. ಅದೇ ಕಂಬದಿಂದ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಳ್ಳಲಾಗಿತ್ತು. ಮಳೆಯಿಂದಾಗಿ ವಿದ್ಯುತ್‌ ವೈಯರ್‌ ಮನೆಗೆ ಹೊಂದಿಕೊಂಡೇ ಇದ್ದ ಅಂಗಡಿ ಮಳಿಗೆಯ ಶೀಟ್-ಛಾವಣಿಯ ಮೇಲೆ ಬಿದ್ದಿದೆ. ದಿನವಿಡೀ ಬಿಟ್ಟೂಬಿಡದೆ ಬೀಸುತ್ತಿದ್ದ ರಭಸದ ಗಾಳಿಯಿಂದಾಗಿ ಅಂಗಡಿಯ ಪಿಲ್ಲರ್ರಿಗೆ ವೈಯರ್‌ ಸ್ಪರ್ಶಿಸಿದೆ. ಆಟವಾಡುತ್ತಿದ್ದ ಬಾಲಕನಿಗೆ ಅದು ತಿಳಿದಿಲ್ಲದೆ ಅದೇ ಸಮಯದಲ್ಲಿ ಆತ ಅಂಗಡಿಯ ಪಿಲ್ಲರ್ರನ್ನು ಸ್ಪರ್ಶಿಸಿಬಿಟ್ಟಿದ್ದಾನೆ. ಕ್ಷಣದಲ್ಲೇ ಬಾಲಕನಲ್ಲಿ ವಿದ್ಯುತ್‌ ಪ್ರವಹಿಸಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಶೀಘ್ರದಲ್ಲೇ ಬಾಲಕನನ್ನು ಆಸ್ಪತ್ರೆಗೆ ಒಯ್ಯಲಾಗಿದೆಯಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕನ ಸಾವನ್ನು ದೃಢಪಡಿಸಲಾಗಿದೆ. 

ಬೆಳೆಯುತ್ತಿದ್ದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಜಿಲ್ಲೆಯಾದ್ಯಂತ ಕಳೆದೆರಡು ವಾರದಿಂದ ಬಿಟ್ಟೂಬಿಡದೆ ಮಳೆಯಾಗುತ್ತಿದ್ದು, ಸೋನೆ ಮಳೆಯಂತೂ ದಿನವಿಡೀ ಸುರಿಯುತ್ತಲೇ ಇದೆ. ಹಿರಿಯ ಅಧಿಕಾರಿಗಳು ತುರ್ತಾಗಿ ಇದರತ್ತ ಗಮನಹರಿಸಬೇಕಿದೆ. ಮಳೆ ಹೆಚ್ಚಾಗಿರುವ ಕಾಲದಲ್ಲಿ ಮನೆಗಳಿಗೆ ಸಂಪರ್ಕ ಕಲ್ಲಿಸಿ ಹಾಕಲಾಗಿರುವ ಹಳೆಯ ತಂತಿ ಮತ್ತು ವೈಯರ್‌ಗಳನ್ನು ಬದಲಾಯಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜವಾಬ್ದಾರಿ ಮೂಡಿಸಬೇಕು ಎಂದು ಪ್ರಜ್ಞಾವಂತ-ನಾಗರಿಕರು ಒತ್ತಾಯಿಸುತ್ತಿದ್ದಾರೆ.

ವರದಿ – ಸಂಚಲನ, ಚಿಕ್ಕನಾಯಕನ ಸೀಮೆಯಿಂದ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...