ಸಂವಿಧಾನ ಶಿಲ್ಪಿ ‘ಡಾ.ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ಸ್ಥಾಪಿಸಲು ಸ್ಥಳವಕಾಶಕ್ಕಾಗಿ ಅನುಮತಿ ಕೋರಿ ಆರು ತಿಂಗಳು ಕಳೆದರು ಸಂಬಂಧಿಸಿದ ಅಧಿಕಾರಿ ನಿರ್ಲಕ್ಷವಹಿಸಿದ್ದಾರೆಂದು ಗ್ರಾಮಸ್ಥರು, ವಿವಿಧ ಸಂಘಟನೆಯವರು ಆರೋಪ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಹಿರಿಯ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ, ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳವಕಾಶವನ್ನು ಗುರುತಿಸಿಕೊಟ್ಟು, ಸಂವಿಧಾನ ಶಿಲ್ಪಿ ‘ಡಾ ಬಿ ಆರ್ ಅಂಬೇಡ್ಕರ್”ರವರ ಗೌರವಾರ್ಥವಾಗಿ ಪ್ರತಿಮೆಯನ್ನು ಸ್ಥಾಪಿಸಲು ಸ್ಥಳವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿ ಆರು ತಿಂಗಳು ಕಳೆದರು ಇಲ್ಲಿಯವರೆಗೂ ಜಾಗವನ್ನು ಗುರುತಿಸಲು ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಕರ್ನಾಟಕ ಜನಶಕ್ತಿ ರಾಜ್ಯ ಮುಖಂಡರಾದ ಕೆ ಎಲ್ ಅಶೋಕ್ ಅವರು ಈದಿನ.ಕಾಮ್ ಗೆ ಮಾಹಿತಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ
ಈ ಕುರಿತು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ವಿವಿಧ ಸಂಘಟನೆಗಳು, ಚುನಾಯಿತ ಪ್ರತಿನಿಧಿಗಳು, ನೌಕರ ಸಂಘದವರು ಹಾಗೂ ಇನ್ನಿತರರು ಸೇರಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮದ ಕೃಷ್ಣ ಅವರು ಈದಿನ. ಕಾಮ್ ಜೊತೆ ಮಾತಾಡಿದ್ದಾರೆ.