ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ ತಂತಿ ಬೇಲಿ ದಾಟುವ ಪ್ರಯತ್ನದಲ್ಲಿ ಗಾಯಗೊಂಡಿತ್ತು. ಸ್ಥಳೀಯರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ಹಿಡಿದು ರಕ್ಷಣೆ ಮಾಡಲು ಪ್ರಯತ್ನಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಾಮಾಚಾರ ಶಂಕೆ ಮಹಿಳೆ ಅತ್ಮಹತ್ಯೆ
ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳು ಜಿಂಕೆಯನ್ನು ಪಶು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆ ಆಘಾತಕ್ಕೆ ಒಳಗಾಗಿತ್ತು. ವೈದ್ಯರು ಬದುಕಿಸಲು ನಡೆಸಿದ ಪ್ರಯತ್ನ ವಿಫಲವಾಯಿತು. ಮರಣೋತ್ತರ ಪರೀಕ್ಷೆ ನಡೆಸಿ ಸಂಸ್ಕಾರ ನಡೆಸಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.