ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಬೃಹತ್ ಪ್ರಮಾಣದ ಸ್ಫೋಟಕಗಳು ಹಾಗೂ ಮಾರಕ ಆಯುಧಗಳನ್ನು ಜಪ್ತಿ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಬಿನ್ ಬಿಲ್ಲಪ್ಪ ಎಂಬ ವ್ಯಕ್ತಿಯನ್ನು ಬಟ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ
ಖಚಿತ ಮಾಹಿತಿ ಆಧರಿಸಿ ಬಟ್ಲಹಳ್ಳಿ ಪೊಲೀಸರು ದಾಳಿ ನಡೆಸಿದ್ದು,ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 150 ನಾಡಬಾಂಬ್ಗಳು ಹಾಗೂ ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ..?ಆರ್ಟಿಒ ಕಚೇರಿಗಳಲ್ಲಿ ಬೋಗಸ್ ವಾಹನ ನೋಂದಣಿ ಮತ್ತು ಡಿಎಲ್ ಅಕ್ರಮ: ಸೈಯದ್ ಮಾಲಿಕ್ ಆರೋಪ
ಬಂಧಿತ ಆರೋಪಿಯು ಇಷ್ಟೊಂದು ಬೃಹತ್ ಪ್ರಮಾಣದ ಸ್ಫೋಟಕಗಳು ಮತ್ತು ಬಂದೂಕನ್ನು ಏತಕ್ಕಾಗಿ ಹಾಗೂ ಯಾವುದಕ್ಕಾಗಿ ಸಂಗ್ರಹಿಸಿಟ್ಟಿದ್ದ ಎಂಬ ಕುರಿತು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.




