ಚಿನ್ನದ ಅಂಗಡಿಗೆ ಕನ್ನ ಹಾಕಿ ಬೆಳ್ಳಿ ಸಾಮಗ್ರಿಗಳನ್ನು ದೋಚಿದ್ದ ಕಳ್ಳನನ್ನು ಬಂಧಿಸಿದ ನಗರ ಠಾಣೆಯ ಪೊಲೀಸರು

Date:

ಚಿಂತಾಮಣಿ : ನಗರದ ಆಜಾದ್ ಚೌಕ್ ದಲ್ಲಿ ಫೆಬ್ರವರಿ 9 ರಂದು ರಾತ್ರಿ ಚಿನ್ನದ ಅಂಗಡಿಯೊಂದರ ಬಾಗಿಲಿನ ಬೀಗಗಳನ್ನು ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಹತ್ತೇ ದಿನಗಳಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ.

- Advertisement -

ನಗರದ 25 ನೇ ವಾರ್ಡ್‌ನ ಎನ್‌.ಎನ್‌.ಟಿ ರಸ್ತೆಯ ಕೂಲಿ ಕೆಲಸ ಮಾಡುವ ಅರವಿಂದಕುಮಾರ್‌ ಬಂಧಿತ ಆರೋಪಿ.ಆರೋಪಿಯಿಂದ 45,200 ರೂ ಬೆಲೆ ಬಾಳುವ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಲು ಸಮೇತ ಆರೋಪಿಯನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಕಳ್ಳರು ಅಂಗಡಿಯ ಬೀಗ ಮುರಿದು ಬಾಗಿಲಿನ ಷಟರ್‌ ಮೀಟಿ ಒಳಕ್ಕೆ ಹೊಗಿ ಸುಮಾರು 45,200 ರೂ ಬೆಲೆ ಬಾಳುವ ಬೆಳ್ಳಿಯ ಆಭರಣಗಳು ಕಳ್ಳತನವಾಗಿದೆ.ಲಾಕರ್‌ ತೆಗೆಯಲು ಸಾಧ್ಯವಾಗಿಲ್ಲದ ಕಾರಣ ಹೆಚ್ಚಿನ ಆಭರಣಗಳು ಕಳ್ಳತನವಾಗಿಲ್ಲ ಎಂದು ಜ್ಯೂಯಲರಿ ಮಾಲೀಕ ಶಿವಕುಮಾರ್ ನಗರ ಠಾಣೆಗೆ ದೂರು ನೀಡಿದ್ದರು.

ಉಪವಿಭಾಗದ ಡಿವೈಎಸ್ಪಿ ಮುರಳೀಧರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಇನ್ಸ್‌ ಸ್ಪೆಕ್ಟರ್‌ ವೀಜಿಕುಮಾರ್ ನೇತೃತ್ವದಲ್ಲಿ ತನಿಖೆಯನ್ನು ಕೈಗೊಂಡು ಪತ್ತೆ ಕಾರ್ಯಕ್ಕೆ ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

ಪತ್ತೆ ತಂಡದವರು ಆರೋಪಿಗಳ ಬಗ್ಗೆ ಸ್ಥಳೀಯ ಸಿಸಿ ಕ್ಯಾರಾಗಳು ಹಾಗೂ ವಿವಿಧ ಆಯಾಮಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿದ್ದರು.ಚಿನ್ನದ ಅಂಗಡಿಯ ಒಳನುಗ್ಗಿದ್ದರೂ ಹೆಚ್ಚಿನ ಕಳ್ಳತನ ಆಗದಿರುವುದು ಸ್ಥಳೀಯರ ಕೆಲಸ ಎಂಬ ತೀರ್ಮಾನಕ್ಕೆ ಬಂದ ನಂತರ ವೈಜ್ಞಾನಿಕವಾಗಿ ವಿಶ್ಲೇಷಣೆ ಮಾಡಿ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ.? ಸವಿತಾ ಸಮಾಜದ ಬಂಧುಗಳಿಗೆ ನಿಗಮದ ಸೌಲಭ್ಯಗಳು ಕುರಿತಂತೆ ಅರಿವು ಕಾರ್ಯಕ್ರಮ

ಪತ್ತೆದಾರಿ ತಂಡದಲ್ಲಿ ಪಿ.ಎಸ್.ಐ ಪ್ರಕಾಶ್,ಸಿಬ್ಬಂದಿ ಮಂಜುನಾಥ,ವೆಂಕಟ್,ವಿಶ್ವನಾಥ ಎಸ್.ಎನ್, ಶ್ರೀನಿವಾಸಮೂರ್ತಿ,ಲೋಕೇಶ್,ಗಿರೀಶ್ ಪಾಲ್ಗೊಂಡಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...