ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್

Date:

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ನಡೆಸಿದ ಚುನಾವಣಾ ಅಕ್ರಮಗಳ ಕುರಿತಾಗಿ ಮನವಿ ಸಲ್ಲಿಸಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ನಾಯಕರು ಕೋರಿದ್ದ ಭೇಟಿಯ ವಿನಂತಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ – ಸಿಜೆಐ ಸೂರ್ಯ ಕಾಂತ್ ತಿರಸ್ಕರಿಸಿದ್ದಾರೆ.

- Advertisement -

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿಪಕ್ಷ ನಾಯಕರು ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸುವ ಮುನ್ನ ಸಿಜೆಐ ಅವರನ್ನು ಭೇಟಿಯಾಗಲು ಸಮಯ ಕೋರಿದ್ದರು. ಆದರೆ ಸುಪ್ರೀಂ ಕೋರ್ಟ್‌ನ ನಿಲುವನ್ನು ಸ್ಪಷ್ಟಪಡಿಸಿರುವ ಸಿಜೆಐ, ಈ ಭೇಟಿಯನ್ನು ನಿರಾಕರಿಸಿ ನಾಲ್ಕು ಪ್ರಮುಖ ಕಾರಣಗಳನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಮೊದಲನೆಯದಾಗಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ಪರಿಶೀಲನೆಯಲ್ಲಿ ಇರುವುದರಿಂದ, ಆಡಳಿತಾತ್ಮಕ ಮಟ್ಟದಲ್ಲಿ ರಾಜಕೀಯ ನಿಯೋಗವನ್ನು ಭೇಟಿಯಾಗುವುದು ಸೂಕ್ತವಲ್ಲ.

ಇದನ್ನೂ ಓದಿ: ಅ.12ರಂದು ಸುಪ್ರೀಂ ಕೋರ್ಟ್ ಕಡೆ ರಾಹುಲ್ ಗಾಂಧಿ ನೇತೃತ್ವದ ನಡೆ: ಸಿಜೆಐ ಭೇಟಿಗೆ ‘ಇಂಡಿಯಾ’ ಒಕ್ಕೂಟ ನಿರ್ಧಾರ

ಎರಡನೆಯದಾಗಿ ಸುಪ್ರೀಂ ಕೋರ್ಟ್ ತನ್ನ ಆಡಳಿತಾತ್ಮಕ ಅಧಿಕಾರವನ್ನು ಬಳಸಿ ಸರ್ಕಾರದ ಅಥವಾ ಕಾರ್ಯಾಂಗದ ದೈನಂದಿನ ಕಾರ್ಯನಿರ್ವಹಣೆಯಲ್ಲಿ ನೇರವಾಗಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ.

ಮೂರನೆಯದಾಗಿ ರಾಜಕೀಯ ಪಕ್ಷಗಳು ಅಥವಾ ನಾಯಕರು ತಮ್ಮ ಕುಂದುಕೊರತೆಗಳು ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಅಧಿಕೃತವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸುವ ಮೂಲಕ ನ್ಯಾಯಾಂಗ ಪ್ರಕ್ರಿಯೆಯನ್ನು ಅನುಸರಿಸಬೇಕು.

ನಾಲ್ಕನೆಯದಾಗಿ ಮುಖ್ಯ ನ್ಯಾಯಮೂರ್ತಿಗಳಾಗಿ ಸ್ವತಃ ತೀರ್ಪು ನೀಡುವ ಪೀಠದ ಭಾಗವಾಗಿರುವುದರಿಂದ, ಪ್ರಕರಣ ಸಲ್ಲಿಕೆಯಾಗುವ ಮೊದಲೇ ಹೊರಗೆ ಯಾವುದೇ ರಾಜಕೀಯ ನಿಯೋಗದಿಂದ ಈ ರೀತಿಯ ಆಹವಾಲುಗಳನ್ನು ಅಥವಾ ಮನವಿಗಳನ್ನು ಸ್ವೀಕರಿಸುವುದು ನ್ಯಾಯಾಂಗದ ಶಿಸ್ತಿಗೆ ವಿರುದ್ಧವಾಗಿದೆ.

ಹೀಗೆ ನಾಲ್ಕು ಕಾರಣಗಳನ್ನು ನೀಡಿರುವ ಸಿಜೆಐ ಸೂರ್ಯ ಕಾಂತ್ ಅವರು “ಸಭೆ ನಡೆಸುವ ಬದಲು ಮಂಗಳವಾರ ಅಧಿಕೃತವಾಗಿ ನ್ಯಾಯಾಲಯಕ್ಕೆ ನೂತನ ಅರ್ಜಿ ಸಲ್ಲಿಸಬಹುದು” ಎಂದು ವಿಪಕ್ಷ ನಾಯಕರಿಗೆ ತಿಳಿಸಿದ್ದಾರೆ.

ಸಿಜೆಐ ಭೇಟಿಗೆ ನಿರಾಕರಿಸಿದ ಬಳಿಕ ಮಧ್ಯಾಹ್ನ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟವು ಸುಪ್ರೀಂ ಕೋರ್ಟ್ ಪ್ರತಿಭಟನಾ ಮೆರವಣಿಗೆಯನ್ನು ಮಧ್ಯಾಹ್ನ 1:30 ಗಂಟೆಗೆ ಪ್ರಾರಂಭಿಸಲು ನಿರ್ಧರಿಸಿದೆ. ಮಧ್ಯಾಹ್ನ 1:30ಕ್ಕೆ ದೆಹಲಿಯ ಕನೌಟ್ ಪ್ಲೇಸ್ – ಬರಖಾಂಬಾ ರೋಡ್ ಜಂಕ್ಷನ್‌ನಿಂದ ಈ ಕಾಲ್ನಡಿಗೆ ಜಾತ ಆರಂಭವಾಗಲಿದೆ. ಪ್ರತಿಭಟನೆ ನಡೆಯುತ್ತದೆ ಎಂಬ ಕಾರಣಕ್ಕೆ ಮೆಟ್ರೋ ಬಂದ್ ಮಾಡಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಮತ್ತೆ ಆರು ಮೆಟ್ರೋ ನಿಲ್ದಾಣಗಳ ಪ್ರವೇಶ ನಿರ್ಗಮನ ದ್ವಾರ ಬಂದ್ ಮಾಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚಲಾಗಿದೆ. ಆದರೆ ಇಂಟರ್‌ಚೇಂಜ್ (ರೈಲು ಬದಲಾಯಿಸುವ) ಸೌಲಭ್ಯಗಳು ಎಂದಿನಂತೆ ಲಭ್ಯವಿರುತ್ತವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್, ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಸಾಮಾನ್ಯ ಪ್ರಕ್ರಿಯೆ: ಸಮರ್ಥನೆಗಿಳಿದ ದೆಹಲಿ ಪೊಲೀಸರು

ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾದ ನಾಯಕರು...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಬಸ್‌ಗಳನ್ನೇ ಜೈಲುಗಳನ್ನಾಗಿ ಪರಿವರ್ತಿಸಲಾಗುತ್ತಿದೆಯೇ? – ಕಸ್ಟಡಿ ವಾಹನದ ಪರಿಸ್ಥಿತಿ ಬಿಚ್ಚಿಟ್ಟ ನೇಹಾ ಬೋರಾ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...