ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ; ಸತೀಶ್ ಶಿವನ್ ಸಲಹೆ

Date:

Advertisements

ದುಬೈನಲ್ಲಿ ಇತ್ತೀಚೆಗೆ ನಡೆದ ಬ್ಯಾರಿ ಮೇಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಅವರ ವಿಶೇಷ ಆಹ್ವಾನದ ಮೇರೆಗೆ ದುಬೈನ ಕಾನ್ಸುಲೇಟ್ ಕಚೇರಿಗೆ ಭೇಟಿ ನೀಡಿದ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಕಾರ್ಯಕಾರಿ ಸಮಿತಿ ಸದಸ್ಯರು ಸಮುದಾಯದ ಹಾಗೂ ಅನಿವಾಸಿಗಳ ಹಲವಾರು ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸಿದರು.

ಇತ್ತೀಚೆಗೆ ಪದೇ ಪದೇ ಕರ್ನಾಟಕದವರು ಎದುರಿಸುತ್ತಿರುವ ವೀಸಾ ಸಮಸ್ಯೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಗಮನಸೆಳೆದಾಗ ಉತ್ತರಿಸಿದ ಕಾನ್ಸುಲ್ ಜನರಲ್, “ಕಳೆದ ವರ್ಷ ಘೋಷಿಸಿದ್ದ ಅಮ್ನೆಸ್ಟಿ ಹಾಗೂ ಅದರ ನಂತರ ಯುಎಇ ಸರ್ಕಾರದ ಕೆಲವು ಕಠಿಣ ವಿಸಾ ನಿಲುವಿನಿಂದಾಗಿ ಈ ಬದಲಾವಣೆ ಕಂಡುಬರುತ್ತಿದೆ. ಇದು ಕೇವಲ ಒಂದು ರಾಜ್ಯ, ಸಮುದಾಯ, ಪ್ರದೇಶಕ್ಕೆ ಸೀಮಿತವಾದ ವಿಚಾರವಲ್ಲ, ದೇಶದ ಎಲ್ಲಾ ರಾಜ್ಯದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ಬರಲಿದೆ” ಎಂದು ಆಶಾವಾದ ವ್ಯಕ್ತಪಡಿಸಿದರು.

“ಏಜೆಂಟ್‌ಗಳ ಮೋಸಕ್ಕೆ ಬಲಿಯಾಗಬಾರದು. ಕೆಲಸದ ಆಮಿಷ ಒಡ್ಡಿ ವಿಸಿಟ್ ವೀಸಾದಲ್ಲಿ ಕಾರ್ಮಿಕರನ್ನು ಕರೆತಂದು ಅತಂತ್ರ ಸ್ಥಿತಿಯಲ್ಲಿ ಸಮಸ್ಯೆಗೆ ಸಿಲುಕಿಸುವವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಬಿಸಿಸಿಐ ಹಾಗೂ ದುಬೈ ಕಾನ್ಸುಲೇಟ್ ಜಂಟಿಯಾಗಿ ಮಾಡಬೇಕು. ಕೆಲಸ ಅರಸಿ ವಿಸಿಟ್ ವೀಸಾದಲ್ಲಿ ಬಂದವರು ವೀಸಾ ಅವಧಿ ಮುಗಿದ ಮೇಲೂ ಹಿಂತಿರುಗಿದೇ ಇದ್ದರೆ ಅವರಿಂದ ನಮ್ಮ ದೇಶಕ್ಕೆ ಕೆಟ್ಟ ಹೆಸರು. ಕೆಲಸಕ್ಕಾಗಿ ಬರುವವರು ಕೆಲಸದ ವರ್ಕ್ ಪರ್ಮಿಟ್ ವೀಸಾ ರೆಸಿಡೆನ್ಸ್ ವೀಸಾದಲ್ಲೇ ಬರಲಿ ಎಂಬುದೇ ನನ್ನ ನಿಲುವು” ಎಂದರು.

Advertisements

ಬ್ಯಾರಿ ಮೇಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ್ದ ಬ್ಯಾರಿ ಸಮುದಾಯದ ಜನರ ಒಗ್ಗಟ್ಟು, ಶಿಸ್ತು ಕಂಡು ಹಾಗೂ ಬ್ಯಾರಿಗಳ ಸಾಧನೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದ ಕಾನ್ಸುಲ್ ಜನರಲ್ ಸತೀಶ್, “ದುಬೈ ಕಾನ್ಸುಲೇಟ್ ನಲ್ಲಿ ಮುಂದೆ ನಡೆಯುವ ಎಲ್ಲಾ ಬ್ಯುಸಿನೆಸ್ ಸಮ್ಮಿಟ್ ಗೆ ಬಿಸಿಸಿಐಗೆ ಆಹ್ವಾನ ನೀಡುವುದಾಗಿ ತಿಳಿಸಿದರು. ಅಲ್ಲದೇ ಬಿಸಿಸಿಐ ನಡೆಸುವ ಎಲ್ಲಾ ವೃತ್ತಿಪರ, ಸಮುದಾಯದ ಪರ, ಬ್ಯಾರಿ ಕಾರ್ಯಕ್ರಮಗಳಲ್ಲಿ ತಾನು ಸಕ್ರಿಯವಾಗಿ ಭಾಗವಹಿಸುವೆನು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಹೊಸ ನಿಯಮ | ಭಾರತೀಯರ ಪ್ರವಾಸಿ ವೀಸಾ ರದ್ದುಪಡಿಸುತ್ತಿರುವ ದುಬೈ

ಈ ಸಂದರ್ಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್, ಮುಸ್ತಾಕ್ ಕದ್ರಿ, ಇಮ್ರಾನ್ ಖಾನ್ ಎರ್ಮಾಳ್ ಹಾಗೂ ಏಮ್ ಇಂಡಿಯಾ ಫೋರಂ ಸ್ಥಾಪಕ ಶೇಕ್ ಮುಝಫರ್, ನಿಯಾಝ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X