ಇಬ್ಬರು ಮುಸ್ಲಿಂ ಯುವಕರನ್ನು ಬೆಂಕಿ ಹಚ್ಚಿ ಕೊಂದಿದ್ದ ಆರೋಪಿ, ಭಜರಂಗದಳದ ಮೋನು ಮಾನೇಸರ್ ಬಂಧನ

Date:

ರಾಜಸ್ಥಾನದಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಬೆಂಕಿ ಹಚ್ಚಿ ಕೊಂದಿದ್ದ ಆರೋಪದಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಘೋಷಿತ ಗೋರಕ್ಷಕ, ಭಜರಂಗದಳದ ಮೋನು ಮಾನೇಸರ್‌ನನ್ನು ಪೊಲೀಸರು ಮಂಗಳವಾರ ಬಂಧಿಸಿರುವುದಾಗಿ ವರದಿಯಾಗಿದೆ.

ಮೋನು ಮಾನೇಸರ್‌, ರಾಜಸ್ಥಾನದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದಂತೆ ಮತ್ತು ಕಳೆದ ಜುಲೈನಲ್ಲಿ ಹರ್ಯಾಣದ ನುಹ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮೋಸ್ಟ್ ವಾಂಟೆಡ್’ ಆರೋಪಿಯಾಗಿದ್ದ ಈತನನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿಯಲ್ಲಿ ಹರಿಯಾಣದಲ್ಲಿ ಕಾರಿನಲ್ಲಿ ಶವ ಪತ್ತೆಯಾದ ರಾಜಸ್ಥಾನದ ಇಬ್ಬರು ಮುಸ್ಲಿಂ ಯುವಕರ ಹತ್ಯೆಯಲ್ಲಿ ಮಾನೇಸರ್ ಪ್ರಮುಖ ಆರೋಪಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಹಳ್ಳಿಯೊಂದರ ನಿವಾಸಿಗಳಾದ ನಾಸಿರ್ (25) ಹಾಗೂ ಜುನೈದ್(35) ಎಂಬ ಇಬ್ಬರು ಯುವಕರನ್ನು ಕಳೆದ ಫೆ.15 ರಂದು ಅಪಹರಿಸಿದ್ದರು. ಮರುದಿನ, ಹರಿಯಾಣದ ಭೀವಾನಿ ಜಿಲ್ಲೆ ಲೊಹರು ಎಂಬಲ್ಲಿ ಸುಟ್ಟು ಹಾಕಲಾಗಿದ್ದ ಕಾರಿನೊಳಗೆ ಅವರ ಶವಗಳು ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಮೋನು ಮಾನೇಸರ್ ಪ್ರಮುಖ ಆರೋಪಿಯಾಗಿದ್ದನು.

ಮೋನು ಮೋನು ಮಾನೇಸರ್‌ನನ್ನು ಹರ್ಯಾಣ ಪೊಲೀಸರು ಬಂಧಿಸಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

ರಾಜಸ್ಥಾನದ ಘಟನೆಯ ಬಳಿಕ, ಇತ್ತೀಚಿನ ನುಹ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದ ಹಿನ್ನೆಲೆಯಲ್ಲಿ ಈತನ ಹೆಸರು ಮತ್ತೆ ಚರ್ಚೆಯಲ್ಲಿತ್ತು. ಸದ್ಯ ಈತನನ್ನು ಯಾವ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ...

ಶಿವಮೊಗ್ಗ | ಹಣ, ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಬಿಜೆಪಿ ಹೊರಟಿದೆ: ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು...

ತುಮಕೂರು | ಸಮೀಕ್ಷೆ ನಡೆಸಿ ಪುನರ್ವಸತಿ ಕಲ್ಪಿಸುವಂತೆ ಸ್ಲಂ ಸಮಿತಿ ಒತ್ತಾಯ

ಹೊಸದಾಗಿ ಸಮೀಕ್ಷೆ ನಡೆಸಿ ನೖಜ ಫಲಾನುಭವಿಗಳಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು...

‘ಇಂದ್ರಾಣಿ ಮುಖರ್ಜಿ’ ವೆಬ್‌ ಸೀರೀಸ್ ವೀಕ್ಷಿಸಿದ ಬಾಂಬೆ ಹೈಕೋರ್ಟ್: ಸಿಬಿಐ ಅರ್ಜಿ ತಿರಸ್ಕೃತ

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಕುರಿತ...