ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

Date:

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ ಮೌಲ್ಯದ ಬೆಳೆ ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರ ಅಧ್ಯಯನಕ್ಕೆ ಆಗಮಿಸಿದ್ದ ಅಂತರ ಸಚಿವಾಲಯ ಕೇಂದ್ರ ತಂಡ (IMCT)ಕ್ಕೆ ಮನವರಿಕೆ ಮಾಡಿಕೊಟ್ಟರು.

- Advertisement -

ಜಿಲ್ಲಾ ಪಂಚಾಯತಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ತಂಡಕ್ಕೆ ಜಿಲ್ಲೆಯ ಪರಿಸ್ಥಿತಿಯನ್ನು ವಿವರಿಸಿದ ಅವರು, ಮಳೆ ಕೊರತೆ, ಶುಷ್ಕ ವಾತಾವರಣ, ತೇವಾಂಶ ಕುಸಿತ ಹಾಗೂ ಬಿತ್ತನೆ ಕಾರ್ಯ ಕುಂಠಿತವಾಗಿರುವುದೇ ನಷ್ಟಕ್ಕೆ ಕಾರಣ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಿಲ್ಲೆಯ ಎಲ್ಲಾ 10 ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಲಾಗಿದೆ. ನೈರುತ್ಯ ಮುಂಗಾರು ಅವಧಿಯಾದ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ವಾಡಿಕೆಯಂತೆ 348 ಮಿ.ಮೀ. ಮಳೆ ಬೀಳಬೇಕಿತ್ತು. ಆದರೆ ಸುರಿದಿದ್ದು ಕೇವಲ 184 ಮಿ.ಮೀ. ಮಾತ್ರ. ಇದರಿಂದ ಶೇ.47ರಷ್ಟು ಮಳೆ ಕೊರತೆ ಎದುರಾಗಿದ್ದು, ಪ್ರಮುಖ ಬಿತ್ತನೆ ಅವಧಿಯಲ್ಲೇ ಸಮರ್ಪಕ ಮಳೆ ಆಗದ ಕಾರಣ ನಿರೀಕ್ಷಿತ ಇಳುವರಿ ಸಿಕ್ಕಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

1004116380

ಜಿಲ್ಲೆಯಲ್ಲಿ ಸುಮಾರು 5,15,603 ರೈತರಿದ್ದಾರೆ. ಮುಂಗಾರು ಹಂಗಾಮಿನ ವಾಡಿಕೆ ಬಿತ್ತನೆ ವಿಸ್ತೀರ್ಣ 3,11,657 ಹೆಕ್ಟೇರ್ ಇದ್ದು, ಮಳೆ ಕೊರತೆಯಿಂದ 2,19,935 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಆಗಿದೆ.

ಬಿತ್ತನೆ ಪ್ರಮಾಣ ಶೇ.72ರಷ್ಟಿದ್ದರೂ, ಅನಾವೃಷ್ಟಿಯಿಂದ ಬೆಳೆಗಳು ಬಾಡಿವೆ. ಸಕಾಲದಲ್ಲಿ ಹೂ ಬಿಡದೆ ಕಾಳು ಕಟ್ಟುತ್ತಿಲ್ಲ. ರಾಗಿ, ಶೇಂಗಾ ಸೇರಿದಂತೆ ಪ್ರಮುಖ ಬೆಳೆಗಳ ಮೇಲೆ ಬರದ ಪರಿಣಾಮ ಬಿದ್ದಿದೆ. ಒಟ್ಟಾರೆ ಅಂದಾಜು 1,92,128 ಹೆಕ್ಟೇರ್ ಬೆಳೆ ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

1004116383

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪ್ರತಿ ಗ್ರಾಮಕ್ಕೆ ತೆರಳಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಬೆಳೆ ಹಾನಿ, ಇಳುವರಿ ಕುಸಿತ, ಕುಡಿಯುವ ನೀರಿನ ಸಮಸ್ಯೆ ಹಾಗೂ ಬೋರ್‌ವೆಲ್‌ಗಳಲ್ಲಿ ನೀರು ಸಿಗದಿರುವ ಸ್ಥಿತಿಯನ್ನು ಕೇಂದ್ರ ತಂಡಕ್ಕೆ ಮನದಟ್ಟು ಮಾಡಿಕೊಡಲಾಯಿತು.

ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು, ನೀತಿ ಆಯೋಗದ ಅಮರಿಂದರ್ ಸಿಂಗ್, ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ನಿರ್ದೇಶಕ ಡಾ. ಜೆ. ಹರ್ಷ ಸೇರಿದಂತೆ ತಂಡದ ಸದಸ್ಯರು ಹಾಜರಿದ್ದರು. ಜಿಲ್ಲಾ ಪಂಚಾಯತ್ ಸಿಇಒ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೂ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ತಿಪಟೂರು | ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಎತ್ತಿನಗಾಡಿ, ಟ್ರ್ಯಾಕ್ಟರ್ ಜಾಥಾ

 ಬರಪೀಡಿತ ತಿಪಟೂರು ತಾಲ್ಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು...

ಮಧುಗಿರಿ | ವೃತ್ತಿ ಗುರಿ ಸ್ಪಷ್ಟವಾಗಿದ್ದರೆ ಯಶಸ್ಸು ಖಚಿತ: ಪ್ರೊ.ರಾಮು ಜೆ

ವಿದ್ಯಾರ್ಥಿಗಳು ಪದವಿ ಶಿಕ್ಷಣದ ಅವಧಿಯಲ್ಲಿಯೇ ತಮ್ಮ ಆಸಕ್ತಿ, ಸಾಮರ್ಥ್ಯ, ಕೌಶಲ್ಯ ಮತ್ತು...