ದಾವಣಗೆರೆ | ನಿರ್ವಾಹಕನ ಮೇಲೆ ಹಲ್ಲೆ. ದುಷ್ಕರ್ಮಿಗಳ ಮತ್ತು ಬೆಳಗಾವಿ ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ.

Date:

ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಮೇಲೆ ಉಗ್ರ ಕ್ರಮಕೈಗೊಳ್ಳಲು ಹಾಗೂ ನಿರ್ವಾಹಕರ ಮೇಲೆ ಫೋಕ್ಸೋ ಪ್ರಕರಣವನ್ನು ದಾಖಲಿಸಿರುವ ದುಷ್ಟ ಪೊಲೀಸ್ ಅಧಿಕಾರಿಗಳ ಕ್ರಮವನ್ನು ಖಂಡಿಸಿ ದಾವಣಗೆರೆ ಘಟಕದ ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಅಂಡ್‌ ವರ್ಕ‌ರ್ಸ್ ಯೂನಿಯನ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

- Advertisement -

ನಿರ್ವಾಹಕರ ಮೇಲೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮಕೈಗೊಳ್ಳುವ ಬಗ್ಗೆ ಒತ್ತಾಯಿಸಿ ಬೆಳಿಗ್ಗೆ 11ಗಂಟೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರಿನ ದಾವಣಗೆರೆ ತಹಶೀಲ್ದಾರರ ಕಚೇರಿಗೆ ತೆರಳಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಅಂಡ್‌ ವರ್ಕ‌ರ್ಸ್ ಯೂನಿಯನ್,‌ ಹೊಸ ಬಸ್ ನಿಲ್ದಾಣ, ದಾವಣಗೆರೆ ವಿಭಾಗದ ವತಿಯಿಂದ ಮನವಿ ‌ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವೇಳೆ ಮಾತನಾಡಿದ ಮುಖಂಡರು, “ಕರ್ತವ್ಯ ನಿರತ ಬಸ್ ನಿರ್ವಾಹಕರ ಜೊತೆಗೆ 10-15 ಜನರ ಮರಾಠಿ ಪುಂಡರು ಪುಂಡಾಟಿಕೆ ಮೆರೆದು ಪಂಥಬಾಳೆಕುಂದ್ರಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿರುವುದು ಅಪರಾಧ. ಈ ಬಗ್ಗೆ ತಕ್ಷಣ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಅವರ ವಿರುದ್ಧವೇ ಪೋಕ್ಸೋ ಕೇಸ್ ದಾಖಲು ಮಾಡಿದ್ದಾರೆ. ಇದು ದುಷ್ಕರ್ಮಿಗಳಿಗೆ ಇನ್ನಷ್ಟು ಅಪರಾಧಕ್ಕೆ ದಾರಿ ಮಾಡಲಿದೆ. ತಕ್ಷಣ ಪೊಲೀಸರು ಹಲ್ಲೆಗೊಳಗಾದ ನಿರ್ವಾಹಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪ್ರಜೆಗಳ ರಕ್ಷಿಸುವ ಸಂವಿಧಾನಕ್ಕೆ ಅಪಾಯ, ಸಂವಿಧಾನ ಯಾನ ಕಾರ್ಯಕ್ರಮದಲ್ಲಿ ಚಿಂತನೆ

ಪ್ರತಿಭಟನೆಯಲ್ಲಿ ಎಐಟಿಯುಸಿ ಮುಖಂಡ ಉಮೇಶ್ ಆವರಗೆರೆ, ಸುರೇಶ್, ಪ್ರಕಾಶ್, ರಮೇಶ್ ಸೇರಿದಂತೆ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್‌ ವರ್ಕ‌ರ್ಸ್ ಯೂನಿಯನ್ ಸದಸ್ಯರು ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...