ದಾವಣಗೆರೆ | ಮುಖ್ಯಮಂತ್ರಿ ಬದಲಾವಣೆ ವಿಚಾರ; ಯತೀಂದ್ರಗೆ ನೋಟೀಸ್ ಏಕಿಲ್ಲ? ಶಾಸಕ ಬಸವರಾಜ್ ಶಿವಗಂಗಾ ಪ್ರಶ್ನೆ

Date:

“ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ನಾನು ಯಾವುದೇ ರೀತಿ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಮಾತನಾಡಿಲ್ಲ. ಆದರೂ ನನಗೆ ನೋಟೀಸ್ ಕೊಡಲಾಗಿದೆ. ಹಾಗೂ ಬೇರೆಯವರಿಗೂ ನೋಟೀಸ್ ನೀಡಲಾಗಿದೆ. ಆದರೆ ಮುಖ್ಯಮಂತ್ರಿ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಪಕ್ಷಕ್ಕೆ ಮುಜುಗರವಾಗುವ ರೀತಿ ಮಾತನಾಡಿದ್ದಾರೆ. ಆದರೆ ಯಾವುದೇ ಕ್ರಮ ಮತ್ತು ನೋಟೀಸ್ ಇಲ್ಲ. ಇದು ಯಾವ ರೀತಿಯ ನ್ಯಾಯ” ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪ್ರಶ್ನಿಸಿದ್ದಾರೆ.

- Advertisement -

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಮುಖ್ಯಮಂತ್ರಿ ವಿಚಾರ ಮಾತನಾಡಿಲ್ಲ. ಆದರೂ ನೊಟೀಸ್ ಕೊಟ್ಟಿದ್ದಾರೆ. ಅದೇ ರೀತಿ ಬಹಳಷ್ಟು ಜನರಿಗೆ ನೀಡಿದ್ದಾರೆ. ಹೈಕಮಾಂಡ್ ಗಮನಿಸಬೇಕು. ಯತೀಂದ್ರ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಅವರು ಮೊದಲು ಏನು ಮಾತನಾಡಿದ್ದರು? ಆಮೇಲೆ ಏನು ಮಾತನಾಡಿದ್ದಾರೆ ಎಂಬುದು ಮಾಧ್ಯಮಗಳಲ್ಲಿ ಬಂದಿದೆ. ಪದೇ ಪದೇ ಮಾತನಾಡಲ್ಲ. ಎಲ್ಲರೂ ನವೆಂಬರ್ ಕ್ರಾಂತಿ ಎನ್ನುತ್ತಿದ್ದಾರೆ. ಡಿಸೆಂಬರ್ ನಂತರ ಆಗುತ್ತದೆ. ನಾನು ಈಗ ಮಾತನಾಡಲ್ಲ.  ಡಿಸೆಂಬರ್ ನಂತರ ಮುಂದಿನ ವರ್ಷದ ಜನವರಿಯಲ್ಲಿ ಮಾತನಾಡುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕನಕ ಜಯಂತಿ ಪ್ರಯುಕ್ತ ಲಕ್ಷ ದೀಪೋತ್ಸವ ರಾಜ್ಯ ಮಟ್ಟದ ಟಗರಿನ ಕಾಳಗ, ಕಬಡ್ಡಿ ಮತ್ತು ಕೃಷಿ ಮೇಳ

“ಮುಖ್ಯಮಂತ್ರಿ ಸಿದ್ದರಾಮಯ್ಯ ಮುತ್ಸದ್ದಿ ರಾಜಕಾರಣಿ. ಒಬ್ಬ ಉತ್ತಮ ಆಡಳಿತಗಾರರು. ಹೀಗೆ ಬಾಲಿಶವಾಗಿ ಮಾತನಾಡುವಂತೆ ಎಂದಿಗೂ ಯಾರಿಗೂ ಅವರು ಹೇಳಲ್ಲ. ಹೇಳುವುದೂ ಇಲ್ಲ. ಸಿದ್ದರಾಮಯ್ಯನವರು ಕುಟುಂಬಸ್ಥರನ್ನು ರಾಜಕೀಯಕ್ಕೆ ತಂದಿರಲಿಲ್ಲ.  ರಾಜಕೀಯ ಕೊನೆಗಾಲದಲ್ಲಿದ್ದಾರೆಂದು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತೇನೆ ಎಂದೂ ಸಿದ್ದರಾಮಯ್ಯರು ಹೇಳಿಲ್ಲ. ನಾಲ್ವರು ಅವರ ಬೇಳೆ ಕಾಳು ಬೇಯಿಸಿಕೊಳ್ಳಲು ಯತ್ನಿಸುತ್ತಾ ಗೊಂದಲಮಯ ಹೇಳಿಕೆ ನೀಡುತ್ತಿದ್ದಾರೆ” ಎಂದು ಪ್ರತಿಕ್ರಿಯಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೂಲಕ ಪ್ರಗತಿಶೀಲ ಸಮಾಜ ನಿರ್ಮಾಣಕ್ಕೆ...

ಬರ ಪರಿಹಾರಕ್ಕಾಗಿ ₹20,585.73 ಕೋಟಿ ಬಿಡುಗಡೆ ಮಾಡಿ: ಪ್ರಧಾನಿ ಮೋದಿಗೆ ಡಿಸಿಎಂ ಡಾ. ಜಿ. ಪರಮೇಶ್ವರ ಪತ್ರ

ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...