ದುರುದ್ದೇಶದಿಂದ ದೆಹಲಿ ಯಮುನಾಗೆ ನೀರು: ಬಿಜೆಪಿ ವಿರುದ್ಧ ಆಮ್ ಆದ್ಮಿ ವಿಡಿಯೋ ದಾಖಲೆ ಬಿಡುಗಡೆ

Date:

  • ಜು.9ರಿಂದ ದೆಹಲಿಯ ಕಡೆಗೆ ಬರುವ ನಾಲೆಯನ್ನು ಮಾತ್ರ ತೆರೆದಿಡಲಾಗಿದೆ
  • ರಾಜಕೀಯ ದ್ವೇಷದಿಂದ ದೆಹಲಿಯಲ್ಲಿ ಸೃಷ್ಟಿಸಿದ ಪ್ರವಾಹ : ಸಂಜಯ್ ಸಿಂಗ್

ರಾಜಕೀಯ ದುರುದ್ದೇಶದಪೂರ್ವಕವಾಗಿ ಹರಿಯಾಣದಿಂದ ದೆಹಲಿಗೆ ಬಿಜೆಪಿಯವರು ನೀರು ಬಿಡುತ್ತಿದ್ದಾರೆ. ಇದುವೇ ಪ್ರವಾಹಕ್ಕೆ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಗಂಭೀರ ಆರೋಪ ಮಾಡಿದೆ.

- Advertisement -

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆಪ್ ಸಂಸದ ಸಂಜಯ್ ಸಿಂಗ್, ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಮಳೆಯೇ ಸುರಿಯುತ್ತಿಲ್ಲ. ಆದರೂ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಮತ್ತು ಬಿಜೆಪಿ. ದೆಹಲಿಯ ಬಗ್ಗೆ ಇರುವ ದ್ವೇಷವನ್ನು ಈ ಮೂಲಕ ಸಾಧಿಸಲಾಗುತ್ತಿದೆ. ಯಾಕೆಂದರೆ ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಲ್ಲಿ ಮೂರು ಗೇಟ್‌ಗಳಿದ್ದರೂ ಹರಿಯಾಣ ಮತ್ತು ಉತ್ತರ ಪ್ರದೇಶದ ಗೇಟ್‌ಗಳನ್ನು ಬಂದ್‌ ಮಾಡಿ, ದೆಹಲಿಗೆ ಕಡೆಗೆ ಬರುವ ಯಮುನಾ ನದಿಗೆ ಮಾತ್ರ ನೀರನ್ನು ಬಿಡಲಾಗುತ್ತಿದೆ ಎಂದು ವಿಡಿಯೋ ದಾಖಲೆ ಸಹಿತ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನ ಮೂಲಕ ಕಳೆದ ಜುಲೈ 9ರಿಂದ 13ರವರೆಗೆ ನಿರಂತರವಾಗಿ ದೆಹಲಿಯ ಕಡೆಗೆ ಬರುವ ನಾಲೆಯನ್ನು ಮಾತ್ರ ತೆರೆದಿಟ್ಟು, ನೀರು ಬಿಡಲಾಗುತ್ತಿದೆ. ಇದರಿಂದಾಗಿ ಇತಿಹಾಸದಲ್ಲೇ ಕಂಡರಿಯದ ಪ್ರವಾಹ ಪರಿಸ್ಥಿತಿ ದೆಹಲಿಗೆ ಬಂದೊದಗಿದೆ. ಆದ್ದರಿಂದ ಇದು ಪ್ರಕೃತಿ ನಿರ್ಮಿತ ಪ್ರವಾಹ ಅಲ್ಲ, ಬಿಜೆಪಿಯವರು ದುರುದ್ದೇಶಪೂರ್ವಕವಾಗಿ ದೆಹಲಿಯಲ್ಲಿ ಸೃಷ್ಟಿಸಿದ ಪ್ರವಾಹ ಎಂದು ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಲ್ಲಿ ಬಿಡುಗಡೆಗೊಳಿಸಲಾದ ನೀರಿನ ಪ್ರಮಾಣದ ದಾಖಲೆಯನ್ನು ತೋರಿಸುತ್ತಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದರು.

ಹರಿಯಾಣ, ಉತ್ತರಾಖಂಡ್, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಹಾಗೂ ದೆಹಲಿಯ ಜನರು ಸಮಸ್ಯೆಗಳ ನಡುವೆ ಪರಿತಪಿಸುತ್ತಿರುವಾಗ ಅವರ ಕಷ್ಟಸುಖ ಆಲಿಸಬೇಕಾದ ಪ್ರಧಾನಿ ಮೋದಿ, ಫ್ರಾನ್ಸ್‌ಗೆ ಪ್ರವಾಸ ತೆರಳಿದ್ದಾರೆ. ಒಂದು ವೇಳೆ ಉತ್ತರ ಪ್ರದೇಶ ಹಾಗೂ ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ದೆಹಲಿ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಸಮ ಪ್ರಮಾಣದಲ್ಲಿ ಎಲ್ಲ ಕಡೆಗೆ ನೀರು ಹರಿಯ ಬಿಡುತ್ತಿದ್ದರೆ ಇಷ್ಟೊಂದು ಭಯಾನಕ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ. ಅರವಿಂದ್ ಕೇಜ್ರಿವಾಲ್ ಹಾಗೂ ಆಪ್ ಪಕ್ಷದ ಮೇಲೆ ಬಿಜೆಪಿಯವರಿಗೆ ಇರುವ ದ್ವೇಷವೇ ಈ ಎಲ್ಲ ಬೆಳವಣಿಗೆಗೆ ಕಾರಣ. ಜನ ಇದನ್ನೆಲ್ಲ ನೋಡುತ್ತಿದ್ದಾರೆ ಎಂಬುದು ಬಿಜೆಪಿಯವರಿಗೆ ಗೊತ್ತಿರಲಿ. ಜನ ನಿಮ್ಮನ್ನು ಕ್ಷಮಿಸಲ್ಲ ಎಂದು ಆಪ್ ಸಂಸದ ಸಂಜಯ್ ಸಿಂಗ್ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸಂಚು ರೂಪಿಸಿ ದೆಹಲಿಯನ್ನು ಹೇಗೆ ಮುಳುಗಿಸಿ ಹತ್ನಿಕುಂಡ್ ಬ್ಯಾರೇಜ್‌ನಿಂದ ದೆಹಲಿಯ ಕಡೆಗೆ ಎಲ್ಲ ನೀರನ್ನು ಹೇಗೆ ಬಿಡಲಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋವನ್ನು ಕೂಡ ಪ್ರದರ್ಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...