ಅಭಿವೃದ್ಧಿ ದೇಶಗಳಿಂದ ಇಂಗಾಲ ಹೆಚ್ಚು ಎಂದ ಮೋದಿ; ದೇಶದ ಮಾಲಿನ್ಯ, ಅರಣ್ಯ ನಾಶದ ಬಗ್ಗೆ ನೆಟ್ಟಿಗರ ಪ್ರಶ್ನೆ

Date:

ಇಂಗಾಲದ ಹೊರಸೂಸುವಿಕೆಗೆ (Carbon emissions) ಸಂಬಂಧಿಸಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳನ್ನು ಆಗಾಗ್ಗೆ ಅನ್ಯಾಯವಾಗಿ ದೂಷಿಸಲಾಗುತ್ತದೆ. ಆದರೆ ವಾಸ್ತವದಲ್ಲಿ, ಭಾರತಕ್ಕೆ ಹೋಲಿಸಿದರೆ ಅಭಿವೃದ್ಧಿ ಹೊಂದಿದ ದೇಶಗಳೇ ಆರು ಪಟ್ಟು ಹೆಚ್ಚು ತಲಾ ಇಂಗಾಲವನ್ನು ಹೊರಸೂಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ನವದೆಹಲಿಯಲ್ಲಿ ​ಪರಿಸರ ಮತ್ತು ಹವಾಮಾನ ಬದಲಾವಣೆ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಪರಿಸರ ತಜ್ಞರು, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಪ್ರಧಾನಿ ಪರಿಸರ ಸಂರಕ್ಷಣೆಯಲ್ಲಿ ಭಾರತದ ಸಾಧನೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಜಾಗತಿಕ ಸರಾಸರಿಗಿಂತ ಭಾರತದ ಪಾಲು ಕಡಿಮೆ:

“ಇಂಗಾಲ ಹೊರಸೂಸುವಿಕೆ ವಿಚಾರದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಸುಖಾಸುಮ್ಮನೆ ಗೂಬೆ ಕೂರಿಸಲಾಗುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಐತಿಹಾಸಿಕ ಸತ್ಯವೇನೆಂದರೆ, ಇಂದಿಗೂ ಜಾಗತಿಕ ಸರಾಸರಿಗೆ ಹೋಲಿಸಿದರೆ ಭಾರತದ ತಲಾ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಅರ್ಧಕ್ಕಿಂತಲೂ ಕಡಿಮೆಯಿದೆ” ಎಂದು ಅವರು ಅಂಕಿ-ಅಂಶಗಳ ಸಮೇತ ಸ್ಪಷ್ಟಪಡಿಸಿದರು.

​ಭಾರತಕ್ಕೆ ಹೋಲಿಸಿದರೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳೇ ಆರು ಪಟ್ಟು ಹೆಚ್ಚು ಇಂಗಾಲವನ್ನು ಹೊರಸೂಸುತ್ತಿವೆ. ನವದೆಹಲಿಯು ಜಾಗತಿಕ ವೇದಿಕೆಗಳಲ್ಲಿ ಈ ಸತ್ಯವನ್ನು ಬಲವಾಗಿ ಪ್ರತಿಪಾದಿಸುತ್ತಲೇ ಬಂದಿದೆ. “ಪ್ರತಿಯೊಬ್ಬ ಭಾರತೀಯನಿಗೂ ನಾನು ಹೇಳುವುದೇನೆಂದರೆ, ನೀವೂ ಸಹ ಈ ವಾಸ್ತವವನ್ನು ಎಲ್ಲೆಡೆ ಬಲವಾಗಿ ಹೇಳಿ” ಎಂದು ಅವರು ಕರೆ ನೀಡಿದರು.

ಇದೇ ವೇಳೆ ಅಸಮಾಧಾನವೊಂದನ್ನು ಹೊರಹಾಕಿದ ಪ್ರಧಾನಿಯವರು, “ನಾವು ಪರಮಾಣು ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದ ಯೋಜನೆಗಳನ್ನು ಕೈಗೆತ್ತಿಕೊಂಡಾಗಲೆಲ್ಲಾ, ಪರಿಸರದ ಬಗ್ಗೆ ಸದಾ ಮಾತನಾಡುವ ಕೆಲವರು ಆ ಯೋಜನೆಗಳನ್ನು ತಡೆಯಲು ನೇರವಾಗಿ ನ್ಯಾಯಾಲಯದ ಮೆಟ್ಟಿಲೇರುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

​”ಇದು ನವ ಭಾರತದ ಶಕ್ತಿ. ಪಳೆಯುಳಿಕೇತರ ಇಂಧನ ಬಳಕೆ, ಸೌರಶಕ್ತಿ ಸಾಮರ್ಥ್ಯ ಹೆಚ್ಚಳ ಮತ್ತು ಇಂಗಾಲ ಹೊರಸೂಸುವಿಕೆ ನಿಯಂತ್ರಣ… ಹೀಗೆ ಪರಿಸರ ಸಂರಕ್ಷಣೆಯ ಪ್ರತಿಯೊಂದು ಮಾನದಂಡಗಳಲ್ಲೂ ಭಾರತ ತೋರಿರುವ ಅದ್ಭುತ ಸಾಧನೆ ಇಂದು ವಿಶ್ವದಾದ್ಯಂತ ಚರ್ಚೆಯಾಗುತ್ತಿದೆ” ಎಂದು ಪ್ರಧಾನಿ ಮೋದಿ ತಿಳಿಸಿದರು.

ಮೋದಿಗೆನೆಟ್ಟಿಗರ ಪ್ರಶ್ನೆಗಳ ಸುರಿಮಳೆ:

ಒಂದೆಡೆ ಪ್ರಧಾನಿಯವರು ಜಾಗತಿಕ ವೇದಿಕೆಗಳಲ್ಲಿನ ಪರಿಸರ ಸಂರಕ್ಷಣೆಯ ಸಾಧನೆಗಳ ಬಗ್ಗೆ ಮಾತನಾಡುತ್ತಿದ್ದರೆ, ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸುತ್ತಿದ್ದಾರೆ. ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವಾಯುಮಾಲಿನ್ಯ ಮಿತಿಮೀರಿ ಜನಸಾಮಾನ್ಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದರ ಜೊತೆಗೆ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ಅರಣ್ಯ ನಾಶ ಎಗ್ಗಿಲ್ಲದೆ ಸಾಗುತ್ತಿದೆ. ‘ಪರಿಸರ ನಾಶದ ಈ ವಾಸ್ತವ ಹಾಗೂ ಗಂಭೀರ ಸಮಸ್ಯೆಗಳನ್ನು ತಡೆಯಲು ಮತ್ತು ಹಸಿರು ಉಳಿಸಲು ಸರ್ಕಾರ ಈವರೆಗೆ ಯಾವ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ?’ ಎಂದು ನೆಟ್ಟಿಗರು ಕಟುವಾಗಿ ಪ್ರಶ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು ಬಲ್ಲಿರಾ?

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು,...

ಬಿಆರ್‌ಎಸ್ ಶಾಸಕ ಅನರ್ಹ; ಸ್ಪೀಕರ್ ಆದೇಶ ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್

ಬಿಆರ್‌ಎಸ್ (BRS) ಟಿಕೆಟ್‌ನಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಖೈರತಾಬಾದ್ ಕ್ಷೇತ್ರದಿಂದ ಗೆದ್ದು,...

ತಿಂಗಳೊಳಗೆ ಜಾರಿಯಾಗಲಿದೆ ಭಾರತ–ನ್ಯೂಜಿಲೆಂಡ್ FTA: ಏನಿದು ‘ಫ್ರೀ ಟ್ರೇಡ್ ಅಗ್ರಿಮೆಂಟ್‌’?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ‘ಮುಕ್ತ ವ್ಯಾಪಾರ ಒಪ್ಪಂದ’ (Free Trade...