ಧಾರವಾಡ | ಕನ್ನಡಿಗರು ಭಾಷೆ, ಸಂಸ್ಕೃತಿಯ ಬಗ್ಗೆ ಉದಾಸೀನ ಮನೋಭಾವ ಹೊಂದಬಾರದು: ಡಾ. ಮಹೇಶ ವಾಳ್ವೇಕರ

Date:

ಕರ್ನಾಟಕ ವಿದ್ಯಾವರ್ಧಕ ಸಂಘವು ಕನ್ನಡ ಭಾಷೆ, ನೆಲ, ಗಡಿ ವಿಷಯದಲ್ಲಿ ಅನ್ಯಾಯವಾದಾಗ ಕನ್ನಡಪರ ಧ್ವನಿ ಎತ್ತಿ ಕನ್ನಡಿಗರಿಗೆ ನ್ಯಾಯ ಒದಗಿಸಿದ್ದು ಕನ್ನಡಿಗರಾದ ನಾವು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಉದಾಸೀನ ಮನೋಭಾವ ಹೊಂದಬಾರದು. ರಾಜಧಾನಿ ಬೆಂಗಳೂರಲ್ಲಿ ಕನ್ನಡಿಗರ ಸಂಖ್ಯೆಯೇ ಶೇ.21 ಆದರೆ ಅನ್ಯ ಭಾಷಿಕರ ಸಂಖ್ಯೆ ಶೇ.79 ಕನ್ನಡದ ನೆಲದಲ್ಲಿ ಕನ್ನಡಿಗರ ಮನಸ್ಸು ಒಂದಾಗಬೇಕು ಎಂದು ರಾಜ್ಯ ಮಾಹಿತಿ ಹಕ್ಕು ಆಯುಕ್ತ ಡಾ. ಮಹೇಶ ವಾಳ್ವೇಕರ ಅಭಿಪ್ರಾಯಪಟ್ಟರು.

- Advertisement -

ನವೆಂಬರ್ 9ರಂದು ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ, ಕನ್ನಡದ ಗುಡಿ ಕರ್ನಾಟಕ ವಿದ್ಯಾವರ್ಧಕ ಸಂಘವು ಕನ್ನಡದ ಬೇರನ್ನು ಗಟ್ಟಿಗೊಳಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತ ಬಂದಿದೆ. ಈ ಸಂಘ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಕವಿವ ಸಂಘವು ದಕ್ಷಿಣ ಕರ್ನಾಟಕದ ಕಡೆ ತನ್ನ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸಬೇಕು. ಅಂದಾಗ ಕನ್ನಡಿಗರಲ್ಲಿ ಜಾಗೃತಿ ಮೂಡಿಸಲು ಸಾಧ್ಯ. ಸಾರ್ವಜನಿಕರು ಸರ್ಕಾರದ ಯೋಜನೆ, ರೂಪರೇಷೆಗಳ ಪೂರಕ ಅಭಿವೃದ್ದಿಗೆ ಸಂಬಂಧ ಪಟ್ಟಂತಹ ಮಾಹಿತಿ ಕೇಳಿದಾಗ ಮಾಹಿತಿ ಆಯುಕ್ತರಾಗಿ ತಾವು ಸಾರ್ವಜನಿಕರ ಹಾಗೂ ಸರ್ಕಾರದ ನಡುವೆ ಸಮನ್ವಯತೆಯ ಕೊಂಡಿಯಾಗಿ ಕಾರ‍್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹು-ಧಾ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಅರವಿಂದ ಜಮಖಂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕನ್ನಡ ಭಾಷೆ ಶಕ್ತಿಯುತ ಭಾಷೆ, ಭಾಷೆಯ ಉಳಿವಿಗಾಗಿ ನಾವೆಲ್ಲಾ ಶಕ್ತಿಶಾಲಿಗಳಾಗಿ ದುಡಿಯಬೇಕು. ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಎಂಬ ಉದಾತ್ತ ಭಾವನೆ ಸಾಕಾರಗೊಳಿಸಲು ಯುವಕರು ಶ್ರದ್ಧೆ ಪೂರ್ವಕ ಕಾರ‍್ಯ ಮಾಡಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನಕದಾಸರ 534 ಜಯಂತಿ ಪ್ರಯುಕ್ತ ಗಣ್ಯರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಪ್ರಾರಂಭದಲ್ಲಿ ಡಾ. ಸದಾಶಿವ ಐಹೊಳೆ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಪ್ರಸಾದ ಮಡಿವಾಳರ ಹಾಗೂ ತಂಡದವರು ತಬಲಾ ಸಾಥ್ ನೀಡಿದರು. ಸೀತಾ ಛಪ್ಪರ ನೇತೃತ್ವದ ಅಭಿವ್ಯಕ್ತಿ ಕಲಾ ತಂಡದಿಂದ ನೃತ್ಯ ರೂಪಕ ಹಾಗೂ ಭರತನಾಟ್ಯ ಕಾರ್ಯಕ್ರಮ ಜರುಗಿತು. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ವೇದಿಕೆಯಲ್ಲಿದ್ದರು. ಶಂಕರ ಕುಂಬಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಮಹೇಶ ಧ. ಹೊರಕೇರಿ ನಿರೂಪಿಸಿ, ವಂದಿಸಿದರು. ಸತೀಶ ತುರಮರಿ ಸನ್ಮಾನ ಪತ್ರ ಓದಿದರು.

ಇದನ್ನೂ ಓದಿ ಧಾರವಾಡ | ಭಾರತವು ವೈವಿಧ್ಯತೆಯಲ್ಲಿ ಏಕತೆ ಕಾಣುವ ವಿಶ್ವದ ವಿಶಿಷ್ಟ ದೇಶವಾಗಿದೆ: ಡಾ. ಎನ್.ಬಿ. ನಾಲತವಾಡ

ಕಾರ್ಯಕ್ರಮದಲ್ಲಿ ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ, ಡಾ. ಜಿನದತ್ತ ಅ. ಹಡಗಲಿ, ಗುರು ಹಿರೇಮಠ, ಡಾ. ಚಿದಾನಂದ ಮನ್ಸೂರ, ಎಸ್.ಬಿ. ಕೊಡ್ಲಿ, ಗಿರೀಶ ಪದಕಿ, ಬೆಂಗೇರಿ, ಎಂ.ಎಂ. ಚಿಕ್ಕಮಠ, ಡಾ. ಪಾರ್ವತಿ ಹಾಲಭಾವಿ, ಸುರೇಶ ಹಾಲಭಾವಿ, ಶಿವಾನಂದ ಹೂಗಾರ ಸೇರಿದಂತೆ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...