ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾದ ಸಂಜೀವ ಬಳ್ಕೂರು ವಹಿಸಿದ್ದರು. ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪ್ರಧಾನ ಉಪನ್ಯಾಸಕರಾಗಿ ಶ್ರೀರಾಮ ದಿವಾಣ (ಮೂಡುಬೆಳ್ಳೆ) ಮಾತನಾಡಿದರು, ಸಿಐಟಿಯು ರಾಜ್ಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ರಾಜೀವ ಪಡುಕೋಣೆ, ಎಚ್. ನರಸಿಂಹ, ದಲಿತ ಹಕ್ಕುಗಳ ಸಮಿತಿಯ ಉಪಾಧ್ಯಕ್ಷರಾದ ನಾಗರತ್ನ ನಾಡ ಹಾಗೂ ಜನವಾದಿ ಮಹಿಳಾ ಸಂಘಟನೆಯ ಶೀಲಾವತಿ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ವಿ.ಎಂ. ಅವರು ಸ್ವಾಗತಿಸಿದರು. ಕೋಶಾಧಿಕಾರಿ ನಾಗರತ್ನ ಆರ್. ನಾಡ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.





