ಅಫ್ಘಾನಿಸ್ತಾನ ಕೇಂದ್ರಿತವಾಗಿ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಶ್ಮೀರ, ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನಗಳು ಉಂಟಾಗಿವೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ.
ಭಾರತೀಯ ಕಾಲಮಾನ ಮಧ್ಯಾಹ್ನ 2.50ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಕಾಬೂಲ್‌ನಿಂದ ಈಶಾನ್ಯಕ್ಕೆ 241 ಕಿಲೋಮೀಟರ್ ದೂರದಲ್ಲಿದೆ ಎಂದು ಕೇಂದ್ರ ಹೇಳಿದೆ.
Earthquake of Magnitude:6.1, Occurred on 11-01-2024, 14:50:24 IST, Lat: 36.48 & Long: 70.45, Depth: 220 Km ,Location: Afghanistan for more information Download the BhooKamp App https://t.co/fN2hpmK3jO @KirenRijiju @Ravi_MoES @Dr_Mishra1966 @ndmaindia @Indiametdept pic.twitter.com/q5pkBVscsW
— National Center for Seismology (@NCS_Earthquake) January 11, 2024
ರಾಷ್ಟ್ರೀಯ ರಾಜಧಾನಿಯಲ್ಲಿ ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಪೀಠೋಪಕರಣಗಳು ಅಲುಗಾಡಿದ್ದು, ಭಯಭೀತರಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದಿರುವುದಾಗಿ ವರದಿಯಾಗಿದೆ.
ಘಾಜಿಯಾದಾಬಾದ್, ಫರಿದಾಬಾದ್, ಗುರುಗ್ರಾಂ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ.
#BreakingNews | Earthquake tremors felt in Delhi-NCR@Scribe_Rahul with more details#Earthquake #Tremors #DelhiNCR #Delhi #JammuAndKashmir #Afghanistan @PoulomiMSaha pic.twitter.com/y5Re6yB4KH
— IndiaToday (@IndiaToday) January 11, 2024
ಭಾರತ ಮಾತ್ರವಲ್ಲ ಪಾಕಿಸ್ತಾನದ ಕೆಲ ಪ್ರದೇಶಗಳಲ್ಲೂ ಭೂಕಂಪನವಾಗಿರುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನದ ಲಾಹೋರ್, ಇಸ್ಲಾಮಾಬಾದ್ ಹಾಗೂ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಕೆಲ ನಗರಗಳಲ್ಲೂ ಭೂಕಂಪನ ಅನುಭವವಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.