ನಟ ಶಾರೂಖ್ ಖಾನ್‌ನಿಂದ 25 ಕೋಟಿ ಲಂಚಕ್ಕೆ ಬೇಡಿಕೆ: ಸಮೀರ್ ವಾಂಖೆಡೆ ವಿರುದ್ಧ ಪ್ರಕರಣ ದಾಖಲಿಸಿದ ED

Date:

Advertisements

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರನನ್ನು ರಕ್ಷಿಸಲು 25 ಕೋಟಿ ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಪುತ್ರನನ್ನು ರಕ್ಷಿಸಲು ಬಾಲಿವುಡ್​ ಸೂಪರ್‌ಸ್ಟಾರ್ ಶಾರುಖ್ ಖಾನ್ ಕುಟುಂಬದಿಂದ ಅಧಿಕಾರಿ ಸಮೀರ್ ವಾಂಖೆಡೆ ₹25 ಕೋಟಿ ಲಂಚದ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ಹಿಂದೆ ಕೇಳಿ ಬಂದಿತ್ತು. ಈ ಆರೋಪದ ಮೇಲೆ ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಮುಂಬೈ ಎನ್‌ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೆಲವು ಮಾಜಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳಿಗೂ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.

Advertisements

ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ ಕೇಡರ್‌ನ 2008-ಬ್ಯಾಚ್‍ನ ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗಿರುವ ವಾಂಖೆಡೆ, ಇಡಿ ಯಿಂದ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ಲಂಚ ಕೇಳಿದ ಆರೋಪದ ಮೇಲೆ ಕಳೆದ ವರ್ಷ ಮೇ ತಿಂಗಳಲ್ಲಿ ಸಿಬಿಐನಿಂದ ಪ್ರಕರಣ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 2, 2021 ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಡ್ರಗ್ ಬಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.

ಇದನ್ನು ಓದಿದ್ದೀರಾ? ಪಾಕ್ ಚುನಾವಣೆ: ಕಿಂಗ್ ಮೇಕರ್ ಆದ ಬಿಲಾವಲ್ ಭುಟ್ವೋ; ಇಮ್ರಾನ್ ಖಾನ್ ಮೇಲೆ ಎಲ್ಲರ ಕಣ್ಣು

ಕೇಂದ್ರೀಯ ತನಿಖಾ ದಳದವರು ವಾಂಖೆಡೆ ಮತ್ತು ಇತರರ ವಿರುದ್ಧ ಕ್ರಿಮಿನಲ್ ಪಿತೂರಿ (120-ಬಿ ಐಪಿಸಿ), ಮತ್ತು ಸುಲಿಗೆ ಬೆದರಿಕೆ (388 ಐಪಿಸಿ) ಜೊತೆಗೆ ಎನ್‍ಸಿಬಿಯಿಂದ ಬಂದ ದೂರಿನ ಮೇರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ದಾಖಲಿಸಿದೆ. ಒಂದು ವರ್ಷದ ನಂತರ, ಎನ್‍ಸಿಬಿ 14 ಆರೋಪಿಗಳ ವಿರುದ್ಧ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ಆರ್ಯನ್ ಖಾನ್‍ಗೆ ಕ್ಲೀನ್ ಚಿಟ್ ಸಿಕ್ಕಿತ್ತು.

2021 ರಲ್ಲಿ ಸ್ವತಂತ್ರ ಸಾಕ್ಷಿಯೊಬ್ಬರು ಎನ್‍ಸಿಬಿ ಅಧಿಕಾರಿ ಮತ್ತು ಆರ್ಯನ್ ಖಾನ್ ಅವರನ್ನು ಬಿಟ್ಟುಕೊಡಲು ಸಾಕ್ಷಿ ಗೋಸಾವಿ ಸೇರಿದಂತೆ ಇತರ ವ್ಯಕ್ತಿಗಳಿಂದ 25 ಕೋಟಿಗೆ ಬೇಡಿಕೆಯಿಟ್ಟರು ಎಂದು ಹೇಳಿದಾಗ ಹೆಚ್ಚು ಪ್ರಚಾರಗೊಂಡ ಪ್ರಕರಣವು ತಿರುವು ತೆಗೆದುಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X