ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

Date:

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಸಿಐಎಸ್‌ಎಫ್ ಸಿಬ್ಬಂದಿ ಬಂಧಿಸಿ ಕೆಐಎ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

- Advertisement -

ಟರ್ಮಿನಲ್-1ರ ಬಫೆಲೋ ವಿಂಗ್ಸ್ ಸಮೀಪ ಪ್ರಯಾಣಿಕರನ್ನು ಸಂಪರ್ಕಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪಿಯನ್ನು ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ಗುರುತಿಸಿ ವಿಚಾರಣೆ ನಡೆಸಿದರು. ಅಮೀನ್ ಎಂಬ ಈ ವ್ಯಕ್ತಿ ಪ್ರಯಾಣಿಕರಿಂದ ಹಣ ಪಡೆಯುವ ಯತ್ನ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಹಲವು ಹಣಕಾಸಿನ ವಹಿವಾಟುಗಳು ಪತ್ತೆಯಾಗಿವೆ. ಹಲವು ಪೇಮೆಂಟ್ ಸ್ಕ್ಯಾನರ್‌ಗಳ ಮೂಲಕ ಪ್ರಯಾಣಿಕರಿಂದ ಹಣ ಪಡೆದಿರುವ ಮಾಹಿತಿ ದೊರೆತಿದೆ. ಮುಂಬೈ, ದೆಹಲಿ ಹಾಗೂ ದೇಶದ ಹಲವೆಡೆ ಇದೇ ರೀತಿಯ ವಸೂಲಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಈ ವ್ಯಕ್ತಿ ಮುಂಬೈನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದು, ಟಿಕೆಟ್ ಬುಕ್ಕಿಂಗ್ ದಾಖಲೆಯೂ ಪತ್ತೆಯಾಗಿದೆ.

ಸಿಐಎಸ್‌ಎಫ್ ಸಿಬ್ಬಂದಿ ಆರೋಪಿಯನ್ನು ಕೆಐಎ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಏರ್‌ಪೋರ್ಟ್ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಹಣಕಾಸಿನ ವಹಿವಾಟುಗಳ ಹಿಂದಿನ ಉದ್ದೇಶವನ್ನು ಎಂಬುದನ್ನು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ.

ಈ ಘಟನೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತೆ ಮತ್ತು ಮೋಸದ ಚಟುವಟಿಕೆಗಳ ಬಗ್ಗೆ ಮತ್ತೆ ಚರ್ಚೆಗೆ ಗುರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಮುಂಬೈನಲ್ಲಿ ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಮುಂಬೈನ...

ಶಿವಮೊಗ್ಗ | ಜಿಪಂ, ತಾಪಂ ಮೀಸಲಾತಿ ಕರಡು ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಸಲು ಅ. 19 ಕೊನೆಯ ದಿನಾಂಕ

ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಜಂತರ್‌ ಮಂತರ್‌ನಲ್ಲಿ ವರದಿಗಾರರಿಗೂ ಪೊಲೀಸರ ನಿರ್ಬಂಧ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ...