ಪಶ್ಚಿಮ ಬಂಗಾಳ | ಇಟ್ಟಿಗೆ ಕಾರ್ಖಾನೆಯ ಚಿಮಿಣಿ ಕುಸಿದು ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಜನರಿಗೆ ಗಾಯ

Date:

Advertisements

ಪಶ್ಚಿಮ ಬಂಗಾಳದಲ್ಲಿ ಬೃಹತ್ ಚಿಮಿಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ ಈ ಘಟನೆ ನಡೆದಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಬುಧವಾರ ಸಂಜೆ ಬಸಿರ್‌ಹತ್‌ನ ಧಾಲ್ತಿತಾ ಗ್ರಾಮದಲ್ಲಿ ಒಂದು ವರ್ಷದಿಂದ ಮುಚ್ಚಿದ್ದ ಇಟ್ಟಿಗೆ ಗೂಡು ಪುನರಾರಂಭಿಸಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisements

“ಇಬ್ಬರು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಸಾವನ್ನಪ್ಪಿದ್ದಾರೆ. ಎರಡು ಶವಗಳು ಅವಶೇಷಗಳ ಅಡಿಯಲ್ಲಿ ಕಂಡುಬಂದಿವೆ. ಅವರೆಲ್ಲರೂ ಇಟ್ಟಿಗೆ ಗೂಡಿನ ಕಾರ್ಮಿಕರಾಗಿದ್ದರು” ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಧಾರ್ಮಿಕ, ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ನಿಷೇಧಿಸಿದ ನೂತನ ಸಿಎಂ!

ಮೃತಪಟ್ಟವರಲ್ಲಿ ಇಬ್ಬರು ಉತ್ತರ ಪ್ರದೇಶದ ಫೈಜಾಬಾದ್‌ ಮೂಲದ ಜೇತುರಾಮ್ ಮತ್ತು ರಾಕೇಶ್ ಕುಮಾರ್ ಎಂದು ಗುರುತಿಸಲಾಗಿದ್ದರೆ, ಮತ್ತೊಬ್ಬನನ್ನು ಸ್ಥಳೀಯ ಹಫೀಜುಲ್ ಮೊಂಡಲ್ ಎಂದು ಗುರುತಿಸಲಾಗಿದೆ. ನಾಲ್ಕನೇ ವ್ಯಕ್ತಿಯನ್ನು ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯ ಸಂದರ್ಭ 60 ಮಂದಿ ಕಾರ್ಮಿಕರು ಇಟ್ಟಿಗೆ ಜೋಡಣೆಯ ಕಾರ್ಯದಲ್ಲಿ ನಿರತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಮಿಣಿ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X