ಪಶ್ಚಿಮ ಬಂಗಾಳ | ಇಟ್ಟಿಗೆ ಕಾರ್ಖಾನೆಯ ಚಿಮಿಣಿ ಕುಸಿದು ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಜನರಿಗೆ ಗಾಯ

Date:

ಪಶ್ಚಿಮ ಬಂಗಾಳದಲ್ಲಿ ಬೃಹತ್ ಚಿಮಿಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ ಈ ಘಟನೆ ನಡೆದಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಬುಧವಾರ ಸಂಜೆ ಬಸಿರ್‌ಹತ್‌ನ ಧಾಲ್ತಿತಾ ಗ್ರಾಮದಲ್ಲಿ ಒಂದು ವರ್ಷದಿಂದ ಮುಚ್ಚಿದ್ದ ಇಟ್ಟಿಗೆ ಗೂಡು ಪುನರಾರಂಭಿಸಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಇಬ್ಬರು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಸಾವನ್ನಪ್ಪಿದ್ದಾರೆ. ಎರಡು ಶವಗಳು ಅವಶೇಷಗಳ ಅಡಿಯಲ್ಲಿ ಕಂಡುಬಂದಿವೆ. ಅವರೆಲ್ಲರೂ ಇಟ್ಟಿಗೆ ಗೂಡಿನ ಕಾರ್ಮಿಕರಾಗಿದ್ದರು” ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಧಾರ್ಮಿಕ, ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ನಿಷೇಧಿಸಿದ ನೂತನ ಸಿಎಂ!

ಮೃತಪಟ್ಟವರಲ್ಲಿ ಇಬ್ಬರು ಉತ್ತರ ಪ್ರದೇಶದ ಫೈಜಾಬಾದ್‌ ಮೂಲದ ಜೇತುರಾಮ್ ಮತ್ತು ರಾಕೇಶ್ ಕುಮಾರ್ ಎಂದು ಗುರುತಿಸಲಾಗಿದ್ದರೆ, ಮತ್ತೊಬ್ಬನನ್ನು ಸ್ಥಳೀಯ ಹಫೀಜುಲ್ ಮೊಂಡಲ್ ಎಂದು ಗುರುತಿಸಲಾಗಿದೆ. ನಾಲ್ಕನೇ ವ್ಯಕ್ತಿಯನ್ನು ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯ ಸಂದರ್ಭ 60 ಮಂದಿ ಕಾರ್ಮಿಕರು ಇಟ್ಟಿಗೆ ಜೋಡಣೆಯ ಕಾರ್ಯದಲ್ಲಿ ನಿರತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಮಿಣಿ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೂಲಕ ಪ್ರಗತಿಶೀಲ ಸಮಾಜ ನಿರ್ಮಾಣಕ್ಕೆ...

ಬರ ಪರಿಹಾರಕ್ಕಾಗಿ ₹20,585.73 ಕೋಟಿ ಬಿಡುಗಡೆ ಮಾಡಿ: ಪ್ರಧಾನಿ ಮೋದಿಗೆ ಡಿಸಿಎಂ ಡಾ. ಜಿ. ಪರಮೇಶ್ವರ ಪತ್ರ

ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...