ಗದಗ | ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ

Date:

ಪ್ರಜಾಪ್ರಭುತ್ವವು ಮೂರು ಸ್ಥಂಭಗಳನ್ನು ಹೊಂದಿದೆ – ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ – ಈ ಮೂರರಲ್ಲಿ ಯಾವುದಾದರೊಂದು ಕುಂಟಿತಗೊಂಡರೆ ಸಂವಿಧಾನ ಉಳಿಯುವುದಿಲ್ಲವೆಂದು ಅಂಬೇಡ್ಕರ್ ಹೇಳಿದ್ದರು ಎಂದು  ಡಿಎಸ್ಎಸ್ ಹಿರಿಯ ಮುಖಂಡ ಎಚ್.ಡಿ. ಪೂಜಾರ ಹೇಳಿದ್ದಾರೆ.

- Advertisement -

ಗದಗ ಪಟ್ಟಣದ ಶ್ರೀತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ರಾಜ್ಯ ಸಮಿತಿ ಹಾಗೂ ಗದಗ ಸಮಿತಿ ಸಹಯೋಗದೊಂದಿಗೆ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಹಮ್ಮಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸಮಾವೇಶದಲ್ಲಿ ದಲಿತ ಮುಖಂಡ ಎಚ್.ಡಿ. ಪೂಜಾರ ಮಾತನಾಡಿ, ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಇನ್ನೂ ದಲಿತರಿಗೆ ಸ್ವಾತಂತ್ರ್ಯ ಸಿಕ್ಕಿಲ್ಲ. ಜಾತಿವಾದಿಗಳಿಗೆ ಮನುವಾದಿಗಳಿಗೆ ಮಾತ್ರ ಸಿಕ್ಕಿದೆ. ಬೌದ್ಧ, ಜೈನ ಅನೇಕ ಧರ್ಮಗಳಿವೆ. ಆದರೆ, ಇಲ್ಲಿ ಸಹೋದರತೆ, ಭ್ರಾತೃತ್ವ‌ ಭಾವನೆ ಇದೇಯೇ… ಮನುವಾದಿಗಳು ಇವುಗಳನ್ನು ಕುಂಟಿತಗೊಳಿಸುತ್ತಿದ್ದಾರೆ. ಇವುಗಳನ್ನು ಗಟ್ಟಿಗೋಳಿಸಬೇಕು. ಬಿದ್ದವರನ್ನು, ಬಿಳುವವರನ್ನು ಮೇಲಕ್ಕೆತ್ತುವುದೇ ಧರ್ಮ. ಮೀಸಲಾತಿ ಹೆಚ್ಚು ಮಾಡಿ ಎಂದರೆ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಾಸ್ತಾವಿಕ ಮಾತುಗಳಲ್ಲಿ ಅಸಮಧಾನ ವ್ಯಕ್ತಪಡಿಸಿದರು.

ಡಿಎಸ್ಎಸ್ ಅಂಬೇಡ್ಕರ್‌ವಾದ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಹೊಟ್ಟೆ ಹಸಿವನ್ನು ನೋಡಿಕೊಂಡಿದ್ದರೆ. ನಾವು ಇವತ್ತು ಈ ರೀತಿಯಲ್ಲಿ ಇರುತ್ತಿರಲಿಲ್ಲ. ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷಗಳಾಗಿವೆ, ನಾವೆಲ್ಲರೂ ಅವಲೋಕನ ಮಾಡಿಕೊಳ್ಳಬೇಕು.

ಸರಿಯಾಗಿ ಸಂವಿಧಾನ ಜಾರಿಯಾಗಿದೆಯೇ ಎಂದು ಪ್ರಶ್ನಾರ್ಥಕವಾಗಿಯೇ ಉಳಿದುಕೊಂಡಿದೆ. ಮನುಸ್ಮೃತಿಯು ನಮ್ಮ ತಲೆಯಿಂದ ಹೋಗಿಯೇ ಇಲ್ಲ. ಕೆಲವು ಕೋಮುವಾದಿಗಳು ಸಂವಿಧಾ‌ನ ಬದಲಿಸಲಿಕ್ಕೆ ನಾವು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ. ನಾವೆಲ್ಲರೂ ಸಂವಿಧಾನ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಎಲ್ಲ ಧರ್ಮಗಳ ಮನುಕುಲ ಒಳತಿಗಾಗಿ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ ಎಂದರು.

ಡಿಎಸ್ಎಸ್ ಗದಗ ಜಿಲ್ಲಾ ಸಂಚಾಲಕ ಬಾಲರಾಜ್ ಅರಬರ್ ಅಧ್ಯಕ್ಷತೆ ವಹಿಸಿದ್ದರು. ಇಂದಿರಾ ಕೃಷ್ಣಪ್ಪ ದಸಂಸ (ಅಂಬೇಡಕರ ವಾದ) ರಾಜ್ಯ ಸಮಿತಿ ಸದಸ್ಯ ಎಸ್.ಎಸ್. ಪಟ್ಟಣಶೆಟ್ಟರ, ರಾಜ್ಯ ಮುಖಂಡರು, ಮೋಹನ ಅಲೈಲಕರ, ಕೃಷ್ಣಗೌಡ ಪಾಟೀಲ, ಹನಮಂತ ಭೀ, ವೀರಾಪೂರ ಕೊರಮ, ಸುರೇಶ ಕಟ್ಟಿಮನಿ, ಬಸವರಾಜ ಕಡೇಮನಿ, ವೆಂಕಟೇಶಯ್ಯ, ಪೀರಸಾಬ ಕೌತಾಳ, ಸತೀಶ ಪಾಸಿ ಮೋಹನಲಾಲ ಟಿ.ಸಿ, ಯುಸೂಫ್ ನಮಾಜಿ, ಸಿದ್ದಪ್ಪ ಅಂಗಧಾಳ, ವೆಂಕನಗೌಡ್ರ, ಗೋವಿಂದಗೌಡ್ರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...