ಗದಗ | ಕೆಂಪು ಮೆಣಸಿನಕಾಯಿ ಬೆಲೆ ಏರಿಕೆ; ಹೆಚ್ಚಾದ ಕಳ್ಳರ ಹಾವಳಿ

Date:

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಕೆಂಪು ಮೆಣಸಿನಕಾಯಿ ಕಳ್ಳತನ ಹೆಚ್ಚಾಗಿದ್ದು, ರೈತರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್‌ಗಳಿಗೆ ತಾಡಪತ್ತಿ ಕಟ್ಟಿ ಜಮೀನಿನಲ್ಲಿಯೇ ಬಿಡಾರ ಹೂಡಿದ್ದಾರೆ. ಈ ನಡುವೆ ಮೆಣಸಿನಕಾಯಿ ಕದ್ದು ಸಿಕ್ಕಿ ಬಿದ್ದಿರುವ ಇಬ್ಬರು ಕಳ್ಳರನ್ನು ಕಂಬಕ್ಕೆ ಕಟ್ಟಿ ಥಳಿಸಿ, ಮೆಣಸಿನಕಾಯಿ ಮೂಟೆ ಹೊರಿಸಿ ಊರೆಲ್ಲಾ ಮೆರವಣಿಗೆ ಮಾಡಿಸಿದ ಘಟನೆ ನಡೆದಿದೆ.

- Advertisement -

ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ಕೆಂಪು ಮೆಣಸಿನಕಾಯಿ ಕಳ್ಳತನ ಹೆಚ್ಚಾಗಿದ್ದು, ರೈತರ ಹೊಲಗಳಿಗೆ ನುಗ್ಗುವ ಕಳ್ಳರು ದುಬಾರಿ ಮೆಣಸಿನ ಕಾಯಿ ಕದ್ದು ಪರಾರಿಯಾಗುತ್ತಿದ್ದಾರೆ. ಇಂತಹ ಸುದ್ದಿಯನ್ನು ಕೇಳಿ ಎಚ್ಚೆತ್ತ ರೈತರು ಮುನ್ನೆಚ್ಚರಿಕೆಯಾಗಿ ರಾತ್ರಿಯಿಡೀ ತಮ್ಮ ಹೊಲದಲ್ಲಿಯೇ ಠಿಕಾಣಿ ಹೂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕೆಂಪು ಮೆಣಸಿನಕಾಯಿ ಬೀಜಕ್ಕೆ ಭಾರೀ ಬೇಡಿಕೆ; ಕೆಜಿಗೆ ಬರೋಬ್ಬರಿ ₹2000 

ರೈತರು ವಾಸ್ತವ್ಯ ಹೂಡಲು ಎತ್ತಿನ ಚಕ್ಕಡಿ ಹಾಗೂ ಟ್ರ್ಯಾಕ್ಟರ್‌ ಟೈಲರ್‌ನಲ್ಲಿ ಕೊಲ್ಲಾರಿ ಕಟ್ಟಿಕೊಂಡು ಅಲ್ಲಿಯೇ ಅಡುಗೆ ಮಾಡಿಕೊಳ್ಳಲು ಒಲೆಯನ್ನು ಹಾಕಿದ್ದಾರೆ. ಕೈಯಲ್ಲಿ ಬ್ಯಾಟರಿ ಮತ್ತೊಂದು ಕೈಯಲ್ಲಿ ಕೋಲು ಹಿಡಿದ ರೈತರು ರಾತ್ರಿ ಪೂರ್ತಿ ಜಮೀನು ಸುತ್ತ ಕಳ್ಳರನ್ನು ಕಾಯುವ ಕಾರ್ಯದಲ್ಲಿ ತೊಡಗಿದ್ದಾರೆ.

ಒಂದು ಕ್ವಿಂಟಲ್‌ ಕೆಂಪು ಮೆಣಸಿನಕಾಯಿಗೆ ₹40,000 ರಿಂದ ₹45,000ಕ್ಕೇ ಬೆಲೆ ಏರಿಕೆಯಾಗಿರುವುದರಿಂದ ಮೆಣಸಿನಕಾಯಿ ಕಳ್ಳತನ ಜೋರಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಬಟ್ಟೂರು, ಕುಂದ್ರಳ್ಳಿ, ರಾಮಗೇರಿ, ಯತ್ನಳ್ಳಿ, ಯಳವತ್ತಿ, ಗೋಜನೂರು, ಬಸಾಪುರ, ಮಾಡಳ್ಳಿ, ಶಿಗ್ಲಿಸೇರಿ ಸುತ್ತಲಿನ ಕೆಲವು ಗ್ರಾಮಗಳಲ್ಲಿ ಮೆಣಸಿನಕಾಯಿ ಬೆಳೆದ ಜಮೀನುಗಳಲ್ಲಿ ರೈತರು ಬೀಡು ಬಿಟ್ಟಿದ್ದಾರೆ.

ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಬರಗಾಲದಿಂದ ಉಳಿದ ಬೆಳೆ ಹಾಳಾಗಿ ಹೋಗಿದೆ. ಇರುವುದರಲ್ಲಿಈ ಮೆಣಸಿಕಾಯಿ ಅಲ್ಪಸ್ವಲ್ಪ ಮಟ್ಟಿಗೆ ಉಳಿದಿದೆ. ಇದರಿಂದ ಈ ಬೆಳೆ ಮೇಲೆಯೇ ಕಳ್ಳರ ಕಣ್ಣು ಬಿದ್ದಿದೆ ಎನ್ನಲಾಗಿದೆ.

ಹೊಲದಿಂದ ಮೆಣಸಿನಕಾಯಿ ಕದ್ದು ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಗ್ರಾಮಸ್ಥರು ದೇವಸ್ಥಾನದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಂಬದಲ್ಲಿ ಒಬ್ಬ ಆರೋಪಿಯನ್ನು ನಿಲ್ಲಿಸಿ ಆತನ ಹೆಗಲ ಮೇಲೆ ಮತ್ತೊಬ್ಬನನ್ನು ಕಟ್ಟಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಾತ್ರವಲ್ಲದೆ ಖದೀಮರಿಗೆ ಮೆಣಸಿನಕಾಯಿ ಮೂಟೆ ಹೊರಿಸಿ ಊರಿಡೀ ಮೆರವಣಿಗೆ ಮಾಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...