ಗದಗ | ಮೂರ್ತಿ ಸ್ಥಾಪನೆಗೆ ಮುಂದಾಗದಿದ್ದಲ್ಲಿ ಉಗ್ರ ಹೋರಾಟ; ದಲಿತ ಮುಖಂಡರು ಎಚ್ಚರಿಕೆ

Date:

“ಬಂಡಾಯದ ನಾಡು ನರಗುಂದ ಪಟ್ಟಣದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಮೂರ್ತಿ ಸ್ಥಾಪನೆ ಇಂದಿಗೂ ಆಗದೇ ಇರುವುದು ದುರಂತದ ಸಂಗತಿ. ನಮ್ಮ ಹೋರಾಟಕ್ಕೆ ಸ್ಪಂದಿಸಿ ಮೂರ್ತಿ ಸ್ಥಾಪನೆಗೆ ಮುಂದಾಗಬೇಕು. ಉಗ್ರ ಸ್ವರೂಪ ಹೋರಾಟ ಮಾಡುತ್ತೇವೆ” ಎಂದು ದಲಿತ ಮುಖಂಡರು ಆಗ್ರಹಿಸಿದರು.

- Advertisement -

ಗದಗ ಜಿಲ್ಲೆಯ ನರಗುಂದ ಪಟ್ಟಣದ ಪುರಸಭೆ ಎದುರು ಸರ್ವ ಜನಾಂಗದ ಸಂಘ ಸಂಸ್ಥೆಗಳ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಮೂರ್ತಿ ಸ್ಥಾಪನೆಗಾಗಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮೇಲ್ವರ್ಗದ ಜನರ ಮೂರ್ತಿ ಸಮುದಾಯ ಭವನಗಳನ್ನು ನಿರ್ಮಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗುತ್ತಾರೆ. ಆದರೆ ಸಂವಿಧಾನ ರಚಿಸಿದ ಡಾ. ಬಿ‌.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಮೂರ್ತಿ ಸಮುದಾಯ ಭವನಗಳನ್ನು ನಿರ್ಮಿಸಲು ಜನಪ್ರತಿನಿಧಿಗಳು ಮುಂದಾಗುತ್ತಿಲ್ಲ” ಎಂದರು.

ಜನಪ್ರತಿನಿಧಿಗಳಂತೆ ಅಧಿಕಾರಿಗಳು ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ನಾವು ಶಾಂತಿ ರೀತಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆಗೆ ಈಡೇರುವವರೆಗೂ ಹೋರಾಟ ಮುಂದುವರೆಯುತ್ತದೆ.  ಹೆದ್ದಾರಿಯನ್ನು ಬಂದ್ ಮಾಡಲು ಮುಂದಾಗುತ್ತೇವೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೇ ಕಾರಣರಾಗುವರು” ಎಂದು ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ದತ್ತು ಜೋಗಣ್ಣವರ, ಮುತ್ತು ಸುರುಕೋಡ, ರವಿ ಚಿಂತಲ್, ಗುರುನಾಥ ಕೆಂಗಾರಕರ, ರತ್ನಪ್ಪ ಜವಳಿ, ಕಿರಣ್ ಜೋಗಣ್ಣವರ, ನವಿಸಾಬ್ ಕಿಲ್ಲೆದಾರ, ಶಿವಾನಂದ ಹರಿಜನ, ಮಾಂತೇಶ್ ಪೂಜಾರ, ವಿಜಯ್ ಚಲವಾದಿ, ಮೈಲಾರಪ್ಪ ಹಿರೇಮನಿ, ಯಶ್ವಂತ್ ಚಲವಾದಿ, ವೆಂಕಟೇಶ್ ಕಾನಪೇಟೆ, ಚೆನ್ನು ನಂದಿ, ಬಸು ಜೋಗನ್ನವರ, ವಿಕ್ರಮ ಹೊನಕೇರಿ,ಖಾಜಿಸಾಬ್ ಕಿಲ್ಲೆದಾರ, ಮುತ್ತು ಪೂಜಾರ್, ನಿಂಗಪ್ಪ ಕೆಳಗೇರಿ, ಇನೂ ಮುಂತಾದವರು ಉಪಸ್ಥಿತರಿದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...