ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ತಿ. ನರಸೀಪುರದಲ್ಲಿ ಮೂವರ ಬಂಧನ

Date:

ಪಶ್ಚಿಮ ಬಂಗಾಳದ ಬುಡಕಟ್ಟು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಮೂವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

ಮೈಸೂರು ಜಿಲ್ಲೆಯ ತಿ. ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ 30 ವರ್ಷದ ಮಹಿಳೆಯನ್ನು ಮೂವರು ಅಪಹರಿಸಿ, ಮೂಗೂರು ಗ್ರಾಮದ ಬಳಿಯ ಲಾಡ್ಜ್‌ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿ, ನಗದು ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಬಳಿಕ ಆಕೆಯ ನಿವಾಸದ ಬಳಿ ಬಿಟ್ಟು ಹೋಗಲಾಗಿತ್ತು ಎಂದು ತಿ. ನರಸೀಪುರ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಆರೋಪಿಗಳನ್ನು ಟಿ ನರಸೀಪುರ ನಿವಾಸಿಗಳಾದ ಕಿರಣ್, ಕಿಶೋರ್ ಮತ್ತು ರಯಾನ್ ಎಂದು ಗುರುತಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಜುಲೈ 19ರಂದು ದಾಖಲಾಗಿರುವ ಎಫ್‌ಐಆರ್, ಆಪಾದಿತ ಅಪರಾಧಗಳು ಜುಲೈ 18 ಮತ್ತು 19ರ ಮಧ್ಯರಾತ್ರಿ ನಡೆದಿರುವುದಾಗಿ ಎಂದು ತಿಳಿಸಲಾಗಿದೆ. ಪೊಲೀಸರು ಇದೀಗ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಬೂದು ಬಣ್ಣದ ಕಾರಿನ ಚಾಲಕ ಆಕೆಗೆ ಒಂದು ಕಾಗದದ ತುಂಡನ್ನು ತೋರಿಸಿ ಖಾಸಗಿ ಬಸ್ ನಿಲ್ದಾಣದ ಬಳಿ ವಿಳಾಸ ಕೇಳಿದ್ದು, ಅದು ಕನ್ನಡದಲ್ಲಿ ಬರೆಯಲ್ಪಟ್ಟಿದ್ದರಿಂದ, ಆ ಮಹಿಳೆ ಅದನ್ನು ಓದಲು ಸಾಧ್ಯವಾಗುತ್ತಿಲ್ಲವೆಂದು ಹೇಳಿದ್ದಾರೆ. ಈ ವೇಳೆ ಹಿಂಭಾಗದಲ್ಲಿ ಕುಳಿತಿದ್ದ ಇಬ್ಬರು ವ್ಯಕ್ತಿಗಳು ಕಾರಿನ ಬಾಗಿಲು ತೆರೆದು ಬಲವಂತವಾಗಿ ಆಕೆಯನ್ನು ಒಳಗೆ ಎಳೆದುಕೊಂಡಿರುವುದಾಗಿ ತಿಳಿದುಬಂದಿದೆ.

ಸಂತ್ರಸ್ತೆ ಸ್ನೇಹಿತನ ಹುಟ್ಟುಹಬ್ಬದ ಆಚರಣೆಗೆಂದು ಮೈಸೂರು ನಗರಕ್ಕೆ ಬಂದಿದ್ದು, ಖಾಸಗಿ ಬಸ್‌ನಲ್ಲಿ ತಿ. ನರಸೀಪುರಕ್ಕೆ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಆರೋಪಿಗಳು ಆಕೆಯನ್ನು ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ರಸ್ತೆಯ ಮೂಲಕ ಮೂಗೂರು ಗ್ರಾಮದ ಕಡೆಗೆ ಕರೆದುಕೊಂಡು ಹೋಗಿದ್ದು, “ಮಾತನಾಡಿದರೆ ಅಥವಾ ಕೂಗಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಲಾಗಿದೆ.

ಆಕೆಯನ್ನು ಅಂತಿಮವಾಗಿ ಕರೆದುಕೊಂಡು ಹೋದ ಲಾಡ್ಜನ್ನು ಗುರುತಿಸದಂತೆ ತಡೆಯಲು ಆ ವ್ಯಕ್ತಿಗಳು ವಿವಿಧ ಹೋಟೆಲ್‌ಗಳ ಬಳಿ ವಾಹನವನ್ನು ಪದೇ ಪದೆ ನಿಲ್ಲಿಸಿದ್ದಾರೆ. ಬಳಿಕ ಮೂಗೂರು ಗ್ರಾಮದ ಬಳಿಯ ಗುರುತಿಸಲಾಗದ ಲಾಡ್ಜ್‌ಗೆ ಮಹಿಳೆಯನ್ನು ಕರೆದೊಯ್ದು, ಮೂವರೂ ಆಕೆಯ ಮೇಲೆ ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಬಳಿಕ ಆರೋಪಿಗಳು ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ₹5,000 ನಗದು ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕಲು ಸಾಧ್ಯವಿಲ್ಲ : ರಮೇಶ್ ಕಾಂಚನ್

ಪೊಲೀಸರ ಪ್ರಕಾರ, ʼಮಹಿಳೆ ತನ್ನ ಮನೆಯಲ್ಲಿ ಒಂದು ಲಕ್ಷ ರೂಪಾಯಿ ಇರುವುದಾಗಿ ಆರೋಪಿಗಳಿಗೆ ತಿಳಿಸಿ ಮನೆವರೆಗೂ ಕರೆದೊಯ್ಯುವಂತೆ ಮನವೊಲಿಸಿದ್ದಾರೆ. ಜುಲೈ 19ರ ಬೆಳಗಿನ ಜಾವ ಆರೋಪಿಗಳು ಮಹಿಳೆಯನ್ನು ಆಕೆಯ ನಿವಾಸದ ಬಳಿ ಇಳಿಸಿದ್ದಾರೆ ಎನ್ನಲಾಗಿದೆ.

“ಸಂತ್ರಸ್ತೆ ಘಟನೆಯ ಬಗ್ಗೆ ತನ್ನ ಮನೆ ಮಾಲೀಕರಿಗೆ ತಿಳಿಸಿದ್ದರಿಂದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ವಾಹನ ಬರುತ್ತಿರುವುದನ್ನು ಗಮನಿಸಿದ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಮಹಿಳೆಯನ್ನು ಮೊದಲು ಟಿ ನರಸೀಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಬಳಿಕ ಮೈಸೂರಿನ ಕೆಆರ್ ಆಸ್ಪತ್ರೆಯ ಸಮಗ್ರ ಆರೈಕೆ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ವಿಜಯಪುರ | ಬಡ ಮಕ್ಕಳಿಗೂ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುವ ಅವಕಾಶ ನೀಡಿ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ

ಆರ್ಥಿಕ ಸಂಕಷ್ಟ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯ ಕಾರಣಕ್ಕೆ ಮಕ್ಕಳ ಶಿಕ್ಷಣದ ಅವಕಾಶಗಳು...

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...