ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎನ್ನಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅನ್ನಭಾಗ್ಯ ಸಿಗದೆ ಪರದಾಟ : ವೃದ್ಧೆಯರ ಹಸಿವು ನೀಗಿಸುತ್ತಿದೆ ಶಾಲೆಯ ಬಿಸಿಯೂಟ
ಸ್ಥಳಕ್ಕೆ ಅಗ್ನಿಶಾಮಕದ ದಳದ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ಪ್ರಯಾಣಿಕರನ್ನು ಹೊರತೆಗೆದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.