ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Date:

ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೂಲಕ ಪ್ರಗತಿಶೀಲ ಸಮಾಜ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ. ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

- Advertisement -

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೈಸೂರು ನಗರ ಮತ್ತು ತಾಲ್ಲೂಕು ನಾಯಕ ಜನಾಂಗದ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆದಿಕವಿ ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಸತ್ಯ, ಧರ್ಮ, ನ್ಯಾಯ, ತ್ಯಾಗ, ಸಹೋದರ ಪ್ರೀತಿ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತದೆ. ಶ್ರೀರಾಮನ ಕರ್ತವ್ಯನಿಷ್ಠೆ, ಭರತನ ತ್ಯಾಗ ಮತ್ತು ಲಕ್ಷ್ಮಣನ ಸಹೋದರ ಪ್ರೀತಿ ಇಂದಿಗೂ ಸಮಾಜಕ್ಕೆ ಆದರ್ಶವಾಗಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಜನರ ಹಿತಕ್ಕೆ ಆದ್ಯತೆ ನೀಡುವ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ರಾಮರಾಜ್ಯದ ಪರಿಕಲ್ಪನೆಯು ಪ್ರಜಾಪ್ರಭುತ್ವದ ಆಡಳಿತಕ್ಕೂ ಮಾರ್ಗದರ್ಶಿಯಾಗಿದೆ. ವಾಲ್ಮೀಕಿ ಮಹರ್ಷಿಯವರ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದಲ್ಲಿ ಸಮಾನತೆ ಮತ್ತು ಸಹೋದರತ್ವವನ್ನು ಬಲಪಡಿಸಬೇಕು ಎಂದು ತಿಳಿಸಿದರು.

ಶೌರ್ಯ, ಸಾಹಸ, ಸ್ವಾಭಿಮಾನ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಹೆಸರಾದ ವಾಲ್ಮೀಕಿ ನಾಯಕ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಡಿಪಾಯವಾಗಿದೆ. ಯುವಜನರಿಗೆ ಗುಣಮಟ್ಟದ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಾಧನೆಗೆ ಅಗತ್ಯವಾದ ಪ್ರೋತ್ಸಾಹ ನೀಡಬೇಕು ಎಂದು ಸಚಿವರು ಹೇಳಿದರು.

ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಕೈಜೋಡಿಸಬೇಕು. ಶಿಕ್ಷಣದ ಮೂಲಕ ಯುವಜನರು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಅವಕಾಶಗಳನ್ನು ಕಲ್ಪಿಸಬೇಕು ಎಂದು ಕರೆ ನೀಡಿದರು.

ಪರಿಶಿಷ್ಟ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಸಚಿವರು, ಮೈಸೂರಿನಲ್ಲಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ಹೊಸ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ರಾಯಚೂರು | ಬರ ಪರಿಹಾರಕ್ಕೆ ಕೇಂದ್ರವೂ ಹೊಣೆ, ಕೇಂದ್ರದ ವಿರುದ್ದ ಹೋರಾಟ: ಯತೀಂದ್ರ ಸಿದ್ದರಾಮಯ್ಯ

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಹರ್ಷಿ ವಾಲ್ಮೀಕಿಯವರ ಪ್ರತಿಮೆ ಸ್ಥಾಪಿಸುವ ಕಾರ್ಯವೂ ಪ್ರಗತಿಯಲ್ಲಿದೆ. ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಪ್ರತಿಮೆಯನ್ನು ಕೆತ್ತುತ್ತಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ ಮತ್ತು ಹರೀಶ್ ಗೌಡ, ವಿಧಾನಪರಿಷತ್ ಸದಸ್ಯರಾದ ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಬಸವರಾಜ್ ಹಾಗೂ ರಘು ಕೌಟಿಲ್ಯ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಂದ್ರ, ತುಮಕೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ಮುಖ್ಯ ಭಾಷಣಕಾರ ನಾಗಭೂಷಣ ಬಗ್ಗನಾಡು, ಪುಷ್ಪಾ ಅಮರನಾಥ್ ಮತ್ತು ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಅಪ್ಪಣ್ಣ ಸೇರಿದಂತೆ ಹಲವು ಗಣ್ಯರು, ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

​ಪದವೀಧರರ-ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...