ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಕಟ್ಟಡ ಕುಸಿತ: ಮಹಿಳೆ ಸಾವು, ಇಬ್ಬರು ಹೆಣ್ಣು ಮಕ್ಕಳ ಸ್ಥಿತಿ ಗಂಭೀರ

Date:

ಕೇರಳದ ಕೊಟ್ಟಾಯಂನ ಹಳೆಯ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

- Advertisement -

ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡ ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆದರೆ, ಕುಸಿದ ಕಟ್ಟಡ ಹಲವು ದಶಕಗಳಷ್ಟು ಹಳೆಯದ್ದು ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂಧು (52) ಎಂದು ಗುರುತಿಸಲಾಗಿದೆ. ಅಲೀನಾ (11), ಅಮಲ್ ಪ್ರದೀಪ್‌ (20) ಜಿನು ಸಾಜಿ (38) ಗಾಯಾಳುಗಳು. ಸದ್ಯ ಗಾಯಾಳುಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಕಿ ಅಲಿನಾ ಹಾಗೂ ಜಿನು ಸಾಜಿ ಪರಿಸ್ಥಿತಿ ಗಂಭೀರವಾಗಿದೆ.

ಚಿಕಿತ್ಸೆಗೆ ಬಂದು ಸಿಲುಕಿದರು

ಬಿಂಧು ಅವರು ಮೊಮ್ಮಗಳು ಅಲೀನಾ ಅಪಘಾತವೊಂದರಲ್ಲಿ ಗಾಯಗೊಂಡಿದ್ದಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದೇ ವೇಳೆ ಅಮಲ್ ಪ್ರದೀಪ್, ಜಿನು ಸಾಜಿ ಎಂಬುವರು ಅದೇ ಕಟ್ಟಡದಲ್ಲಿದ್ದರು.

ಘಟನೆ ಸಂಭವಿಸಿ 2 ಗಂಟೆ ಆದರೂ ಕಾರ್ಯಾಚರಣೆ ಆರಂಭವಾಗದಿರುವುದಕ್ಕೆ ಬಿಂಧು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಕಟ್ಟಡ ಕುಸಿದ ಸ್ಥಳಕ್ಕೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭೇಟಿ ನೀಡಿದ್ದಾರೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...