ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

Date:

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ ಸಿಂಹಾದ್ರಿ ಹತ್ಯೆ ಮಾಡಲಾಗಿದ್ದು, ಈ ಪ್ರಕರಣದಲ್ಲಿ ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ದಲಿತಪರ ಸಂಘಟನೆಗಳ ಒಕ್ಕೂಟದ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

- Advertisement -

ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ತಾಲ್ಲೂಕು ಕಚೇರಿ ತಲುಪಿ ಸರ್ಕಾರಕ್ಕೆ ಒತ್ತಾಯದ ಘೋಷಣೆ ಕೂಗುತ್ತಾ, ಸಿಂಹಾದ್ರಿಯ ಹತ್ಯೆಗೆ ನ್ಯಾಯ ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಎಲ್ಲಾ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಸರ್ಕಾರಕ್ಕೆ ತಾಲ್ಲೂಕು ಆಡಳಿತ ಮೂಲಕ ಮನವಿಪತ್ರ ರವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್ ಮಾತನಾಡಿ ಬಡ ಕುಟುಂಬದ ಯುವಕ ಸಿಂಹಾದ್ರಿ ಕುಟುಂಬಕ್ಕೆ ಆಧಾರವಾಗಿದ್ದ. ಇಂತಹ ಯುವಕನನ್ನು ಸಂಚು ಮಾಡಿ ಕೊಂದ ಮತ್ತೊಬ್ಬ ಯುವಕ ಯಾವ ಸಮುದಾಯವೇ ಇರಲಿ. ಆತನಿಗೆ ಉಗ್ರ ಶಿಕ್ಷೆ ಕಾನೂನು ನೀಡಬೇಕು. ಮಗನನ್ನು ಕಳೆದುಕೊಂಡ ತಾಯಿಗೆ ಸಾಂತ್ವನ ಹೇಳುವವರಿಲ್ಲ. ದಲಿತರಿಗೆ ರಕ್ಷಣೆ ಸಂವಿಧಾನದಲ್ಲಿದೆ. ಆದರೆ ವಾಸ್ತವ ಸಮಾಜದಲ್ಲಿ ಕಾಣುತ್ತಿಲ್ಲ. ಮೃತ ಕುಟುಂಬಕ್ಕೆ ನ್ಯಾಯ ಕೊಡಿಸಲು ಎಲ್ಲಾ ತಾಲ್ಲೂಕಿನಲ್ಲಿ ಪ್ರತಿಭಟನೆ ನಡೆದಿದೆ. ಸರ್ಕಾರ ಜೀವಕ್ಕೆ ಐದು ಲಕ್ಷ ಅಷ್ಟೇ ಬೆಲೆ ಕಟ್ಟಿದೆ. ಈ ನಿಟ್ಟಿನಲ್ಲಿ ನಮ್ಮ ತಾಲ್ಲೂಕಿನಲ್ಲಿ ದೇಣಿಗೆ ಸಂಗ್ರಹಿಸಿ 25 ಸಾವಿರ ಮೃತ ಕುಟುಂಬಕ್ಕೆ ನೀಡುತ್ತೇವೆ. ಹೀಗೆ ಜಿಲ್ಲೆಯಿಂದ 2.50 ಲಕ್ಷ, ರಾಜ್ಯದಿಂದ 75 ಲಕ್ಷ ಬರಲಿದೆ ಎಂದರು.

ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಕಡಬ ಶಂಕರ್ ಮಾತನಾಡಿ ಮಧುಗಿರಿ ಘಟನೆ ಖಂಡನೀಯ. ಬಡತನದ ಕುಟುಂಬಕ್ಕೆ ಆಧಾರವಾಗಿದ್ದ ದಲಿತ ಯುವಕ ಸಿಂಹಾದ್ರಿ ಹತ್ಯೆ ಬಗ್ಗೆ ಗಂಭೀರತೆ ಸರ್ಕಾರ ತೆಗೆದುಕೊಂಡಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಹೋರಾಟ ಆರಂಭವಾಗಿದೆ. ರಾಜ್ಯಾದ್ಯಂತ ಕೂಡಾ ನಡೆಯಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮೃತ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ನೀಡಿ ಕುಟುಂಬದವರಿಗೆ ಉದ್ಯೋಗ ನೀಡಬೇಕು. ಜೊತೆಗೆ 4 ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ದಸಂಸ ತಾಲ್ಲೂಕು ಸಂಚಾಲಕ ನಿಟ್ಟೂರು ನಾಗರಾಜು ಮಾತನಾಡಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚಿದೆ. ಮಧುಗಿರಿ ತಾಲ್ಲೂಕಿನಲ್ಲಿ ದಲಿತ ಯುವಕನ ಹತ್ಯೆ ಪ್ರಕರಣ ಬಗ್ಗೆ ಸ್ಥಳೀಯ ಶಾಸಕರು ಕಾಳಜಿ ವಹಿಸಿಲ್ಲ. ಮೃತ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಸಹ ಮಾಡಿಲ್ಲ. ಇವರನ್ನೇ ಜಿಲ್ಲಾ ಸಚಿವ ಪರಮೇಶ್ವರ್ ಅವರು ಹಿಂಬಾಲಿಸಿದ್ದಾರೆ. ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ವೈಷಮ್ಯ ಹಿನ್ನಲೆ ಈ ಕೊಲೆ ನಡೆದಿದೆ. ಅಂತರ್ಜಾತಿ ವಿವಾಹಕ್ಕೆ ಸಾಥ್ ನೀಡಿದ್ದ ಸಿಂಹಾದ್ರಿಯನ್ನು ಸಂಚು ಮಾಡಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣ ದಲಿತರ ದೌರ್ಜನ್ಯಕ್ಕೆ ಹಿಡಿದ ಕನ್ನಡಿ. ಯಾವುದೇ ಸ್ಥಳದಲ್ಲಿ ಮರಳಿ ಇಂತಹ ಘಟನೆ ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಹಿಳಾ ಹೋರಾಟಗಾರ್ತಿ ಜಿ.ಎನ್.ಲಾವಣ್ಯ ಮಾತನಾಡಿ ನ್ಯಾಯಯುತ ಹೋರಾಟ ನಿರಂತರ ನಡೆಸಿದ್ದರೂ ನ್ಯಾಯ ಸಿಗುತ್ತಿಲ್ಲ. ಹದಿಹರೆಯ ವಯಸ್ಸಿನ ಯುವಕನ ಕೊಲೆ ತೀವ್ರ ಖಂಡನೀಯ. ಪೊಲೀಸರು ಮೃತ ಕುಟುಂಬಕ್ಕೆ ನ್ಯಾಯ ಒದಗಿಸುವವರೆಗೆ ಹೋರಾಟ ಸಾಗಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ದಲಿತ ಮುಖಂಡರಾದ ಗುಬ್ಬಿ ಬಸವರಾಜು, ಭೀಮ್ ಆರ್ಮಿ ತಾಲ್ಲೂಕು ಅಧ್ಯಕ್ಷ ನಾಗಭೂಷಣ್ ಮಾತನಾಡಿದರು.

ಪ್ರತಿಭಟನೆಯಲ್ಲಿ ದಸಂಸ ಪದಾಧಿಕಾರಿಗಳಾದ ಹರಿವೇಸಂದ್ರ ಕೃಷ್ಣಪ್ಪ, ನರೇಂದ್ರಕುಮಾರ್, ಮಾದಾರ ಮಹಾಸಭಾ ಶ್ರೀಧರ್, ಕುಂದರನಹಳ್ಳಿ ನಟರಾಜ್, ದಲಿತ ಸೇನೆ ಶಿವರಾಜ್, ಜೈ ಕರ್ನಾಟಕ ಮಧು, ಈಶ್ವರಯ್ಯ, ಕಿಟ್ಟದಕುಪ್ಪೆ ನಾಗರಾಜು, ಪಾಂಡುರಂಗಯ್ಯ, ಬೆಟ್ಟಸ್ವಾಮಿ, ರವೀಶ್, ದಲಿತ್ ಗಂಗಣ್ಣ, ಹರೀಶ್, ಇಮ್ರಾನ್, ನಿಧೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...

ತುಮಕೂರು | ಹೊಸ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ (ಪಿಎಫ್) ನೀತಿಯಲ್ಲಿನ ಕಾರ್ಮಿಕ ವಿರೋಧಿ...

ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ...