ಹರಿಯಾಣದಲ್ಲಿ ಕೋಮು ಸಂಘರ್ಷ: ಐವರು ಬಲಿ; 30ಕ್ಕೂ ಹೆಚ್ಚು ಮಂದಿಗೆ ಗಾಯ

Date:

Advertisements
  • ವದಂತಿ ಹರಡುವಿಕೆಯನ್ನು ತಡೆಯಲು ಇಂಟರ್‌ನೆಟ್ ಸೇವೆ ಸ್ಥಗಿತ
  • ಶಾಂತಿ ಕಾಪಾಡುವಂತೆ ಎರಡೂ ಸಮುದಾಯಗಳ ಮುಖಂಡರಿಗೆ ಮನವಿ

ಹರಿಯಾಣದಲ್ಲಿ ಸಂಭವಿಸಿದ ಕೋಮು ಗಲಭೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಗುರುಗ್ರಾಮ್‍ಗೆ ಹೊಂದಿಕೊಂಡಿರುವ ಹರಿಯಾಣದ ನೂಹ್‍ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ನೂಹ್‍ನ ಖೇಡ್ಲಾ ಮೋಡ್‍ನಲ್ಲಿ ಧಾರ್ಮಿಕ ಮೆರವಣಿಗೆಯನ್ನು ತಡೆಯಲು ಕೆಲವರು ಕಲ್ಲುಗಳನ್ನು ಎಸೆದು, ಕಾರುಗಳಿಗೆ ಬೆಂಕಿ ಹಚ್ಚಿದ್ದಲ್ಲದೇ, ಇಬ್ಬರು ಹೋಮ್ ಗಾರ್ಡ್‍ಗಳನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಬಳಿಕ ರಾತ್ರಿಯ ವೇಳೆ ಮಸೀದಿಯೊಂದಕ್ಕೆ ಉದ್ರಿಕ್ತರ ಗುಂಪೊಂದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ಇದರಲ್ಲಿ ಮಸೀದಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿತ್ತು. ಅದರಲ್ಲಿ ಓರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ.

Advertisements

ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ) ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯು ಸೋಮವಾರ ಸಂಜೆ ಗುರುಗ್ರಾಮ-ಆಳ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಮೊದಲು ಘರ್ಷಣೆ ಪ್ರಾರಂಭವಾಗಿತ್ತು.

ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ ನೂಹ್, ಗುರುಗ್ರಾಮ, ಪಲ್ವಾಲ್ ಮತ್ತು ಪೊರಿದಾಬಾದ್‍ನಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಕೋಮುಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 20 ಪ್ರಕರಣಗಳನ್ನು ದಾಖಲಿಸಿದ್ದು, ಹಲವರನ್ನು ಬಂಧಿಸಿದ್ದಾರೆ.

ಭಜರಂಗದಳದ ಸದಸ್ಯ, ಇಬ್ಬರು ಮುಸ್ಲಿಂ ಯುವಕರನ್ನು ಬೆಂಕಿ ಹಚ್ಚಿ ಕೊಂದ ಆರೋಪಿ ಮೋನು ಮಾನೇಸರ್ ಮತ್ತು ಅವರ ಸಹಚರರು ಕೆಲವು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ವಿಡಿಯೋ ಘರ್ಷಣೆ ಉಂಟಾಗಲು ಮೂಲ ಕಾರಣ ಎಂದು ವರದಿಯಾಗಿದೆ.

ತಪ್ಪು ಮಾಹಿತಿ ಮತ್ತು ವದಂತಿ ಹರಡುವಿಕೆಯನ್ನು ತಡೆಯಲು ನೂಹ್‍ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಗಲಭೆ ಪೀಡಿತ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಇತರ ನಾಯಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ.

ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದು, ಶಾಂತಿ ಕಾಪಾಡುವಂತೆ ಎರಡೂ ಸಮುದಾಯಗಳ ಮುಖಂಡರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X