ಹಾಸನ | ಕ್ಷುಲ್ಲಕ ಕಾರಣ; ಯುವಕನಿಗೆ ಚಾಕು ಇರಿತ

Date:

ಯುವಕನೂರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕು ಪಾಳ್ಯ ಹೋಬಳಿ ವ್ಯಾಪ್ತಿಯ ಕೋಳಿ ಫಾರಂ ಬಳಿ ಭಾನುವಾರ  ನಡೆದಿದೆ.

- Advertisement -

ಹಲ್ಲೆಗೆ ಒಳಗಾದ ಯುವಕ ಸಂಪತ್ (24),ಎಂಬಾತ ಮೂಲತಃ ಹರಳಕೊಪ್ಪಲು ಗ್ರಾಮದ ನಿವಾಸಿ. ಮಧು ( 28 ), ಪಕ್ಕದ ಗ್ರಾಮದವನು, ಚಾಕುವಿನಿಂದ ಹಲ್ಲೆ ಮಾಡಿದ ವ್ಯಕ್ತಿ ಎನ್ನಲಾಗಿದೆ. ಯುವಕರಿಬ್ಬರ ನಡುವೆ ಫೋನ್ ನಲ್ಲಿ ಸಣ್ಣ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧು ಎಂಬಾತ ಸಂಪತ್ ಎಂಬ ಯುವಕನನ್ನು ಹಿಂಬಾಲಿಸಿ ಹೊಟ್ಟೆ ಭಾಗಕ್ಕೆ ಚಾಕು  ಹಾಕಲಾಗಿದೆ. ಈ ಘಟನೆ ಸಂಜೆ ವೇಳೆ ಸುಮಾರು 4 ಗಂಟೆಯ ಸಮಯದಲ್ಲಿ ನಡೆದಿದೆ. ಹಲ್ಲೆ ಮಾಡುವ ಸಂದರ್ಭದಲ್ಲಿ ಸಂಪತ್ ಜೊತೆ ತನ್ನ ಸ್ನೇಹಿತರಿಬ್ಬರು ಕೂಡಿ ಮಡಬಲು ವ್ಯಾಪ್ತಿಯಿಂದ ಪಾಳ್ಯಕ್ಕೆ ಬರುವ ವೇಳೆ ಈ ಘಟನೆ ಸಂಭವಿಸಿದೆ. ಹಲ್ಲೆ ಮಾಡಿದ ಮಧು ಎಂಬಾತ ಇದು ಮೊದಲೆನಲ್ಲ 4-5 ಜನರಿಗೆ ಚಾಕು ಹಾಕಿದ್ದಾನೆಂದು ಆರೋಪಿಸಿದ್ದಾರೆ. ಹಲ್ಲೆಗೈದ ವ್ಯಕ್ತಿಯ ಜೊತೆ 3 ಜನ ಇದ್ದರು, ಜೊತೆಗೆ ಗನ್, ಲಾಂಗ್, ನಾಯಿಗಳು ಇದ್ದವು ಎಂದು ಹಲ್ಲೆಗೊಳಗಾದ ಸಂಪತ್ ಸ್ನೇಹಿತರು ಮತ್ತು ಗ್ರಾಮಸ್ಥರು ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ?ಬಾಂಗ್ಲಾದೇಶದವರೆಂದು ಶಂಕಿಸಿ ಅಸ್ಸಾಂ ಕಾರ್ಮಿಕರ ಮೇಲೆ ದೌರ್ಜನ್ಯ; ಹಿಂದೂ ಕಾರ್ಯಕರ್ತರ ವಿರುದ್ಧ FIR

ಸಂಪತ್ ಎಂಬ ಯುವಕನನ್ನು ತಕ್ಷಣ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೋಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವನಿಸಲಾಗಿದೆ. ಈ ಘಟನೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಹಲ್ಲೆಗೊಳಗಾದ ಯುವಕ ಹೇಳಿಕೆ ಪಡೆದಿಲ್ಲ ಇನ್ನು ಯಾವ ಅಧಿಕಾರಿಯು ಸ್ಥಳಕ್ಕೆ ಬಂದಿಲ್ಲವೆಂದು ಗ್ರಾಮಸ್ಥರು ಆರೋಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...